Asianet Suvarna News Asianet Suvarna News

Bengaluru rains: ಮಳೆಗೆ ಯುವತಿ ಬಲಿ: ಬಿಬಿಎಂಪಿ ವಿರುದ್ಧ ಕುಮಾರಸ್ವಾಮಿ ಆಕ್ರೋಶ

ರಾಜಧಾನಿಯಲ್ಲಿ ಭಾನುವಾರ ಸುರಿದ ಧಾರಾಕಾರ ಮಳೆಗೆ ಇಸ್ಫೋಸಿಸ್‌ ಉದ್ಯೋಗಿ ಭಾನುರೇಖಾ ಅವರು ಬಲಿಯಾದ ಘಟನೆಗೆ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ತೀವ್ರ ಆಘಾತ ವ್ಯಕ್ತಪಡಿಸಿದ್ದು, ಮಳೆಯ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳದ ಬಿಬಿಎಂಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Bengaluru heavy rain youg woman died: HD Kumarawamy outraged against BBMP rav
Author
First Published May 22, 2023, 6:00 AM IST | Last Updated May 22, 2023, 6:00 AM IST

ಬೆಂಗಳೂರು (ಮೇ.22) : ರಾಜಧಾನಿಯಲ್ಲಿ ಭಾನುವಾರ ಸುರಿದ ಧಾರಾಕಾರ ಮಳೆಗೆ ಇಸ್ಫೋಸಿಸ್‌ ಉದ್ಯೋಗಿ ಭಾನುರೇಖಾ ಅವರು ಬಲಿಯಾದ ಘಟನೆಗೆ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ತೀವ್ರ ಆಘಾತ ವ್ಯಕ್ತಪಡಿಸಿದ್ದು, ಮಳೆಯ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳದ ಬಿಬಿಎಂಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, ನಗರದಲ್ಲಿ ಸುರಿದ ಭಾರೀ ಮಳೆಯಿಂದ ಕೆ.ಆರ್‌.ವೃತ್ತ(KR Circle)ದ ಅಂಡರ್‌ ಪಾಸ್‌ನಲ್ಲಿ ಮಳೆ ನೀರಿಗೆ ಸಿಲುಕಿ ಇಸ್ಫೋಸಿಸ್‌ ಉದ್ಯೋಗಿ ಭಾನುರೇಖಾ ಎಂಬ ಯುವತಿ ಸಾವನ್ನಪ್ಪಿದ ಸುದ್ದಿ ತಿಳಿದು ತೀವ್ರ ಆಘಾತವಾಯಿತು. ರಭಸ ಮಳೆಯ ಮುನ್ನೆಚ್ಚರಿಕೆ ಇದ್ದರೂ ಬಿಬಿಎಂಪಿ ಆಡಳಿತ ಎಚ್ಚೆತ್ತುಕೊಳ್ಳದೇ ಇರುವುದು ನಿರ್ಲಕ್ಷ್ಯದ ಪರಮಾವಧಿ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

Bengaluru: ಡ್ರೈವರ್‌ ಮಾತನ್ನ ಉಡಾಫೆ ಮಾಡಿದ ಕುಟುಂಬ: ಮಗಳನ್ನು ನೀರಲ್ಲಿ ಮುಳುಗಿಸಿ ಕಣ್ಣೀರು

ಅಂಡರ್‌ ಪಾಸ್‌ಗಳಲ್ಲಿ ಕಸಕಡ್ಡಿ ತೆಗೆದು ಸರಾಗವಾಗಿ ನೀರು ಹರಿದು ಹೋಗುವಂತೆ ಮಾಡಬೇಕಾಗಿದ್ದ ಪಾಲಿಕೆ, ಮೈಮರೆತು ಕರ್ತವ್ಯಲೋಪ ಎಸಗಿದೆ. ಪ್ರತೀ ಸಲವೂ ಮಳೆ ಬಂದಾಗ ಅವಾಂತರ, ಪ್ರಾಣಹಾನಿ ಸಂಭವಿಸಿದ ಮೇಲೆ ಪಾಲಿಕೆ ಎಚ್ಚೆತ್ತುಕೊಳ್ಳುತ್ತದೆ ಯಾಕೆ ? ಮಳೆ ಬಂದರೆ ಜನರು ಸಾಯಲೇಬೇಕೆ ಎಂದು ಅವರು ಪ್ರಶ್ನಿಸಿದ್ದಾರೆ.

ಭಾರೀ ಮಳೆ ಸುರಿಯುತ್ತಿದ್ದ ಅಪಾಯದ ಸಮಯದಲ್ಲಿಯೂ ವಾಹನ ಚಾಲಕರು ಅತ್ಯಂತ ಎಚ್ಚರಿಕೆಯಿಂದ ವಾಹನ ಚಾಲನೆ ಮಾಡಬೇಕು. ಅಂಡರ್‌ ಪಾಸ್‌ನಲ್ಲಿ ನೀರು ತುಂಬಿಕೊಂಡಿದ್ದನ್ನು ಕಂಡ ಮೇಲೂ ಚಾಲಕ ಕಾರನ್ನು ಅಂಡರ್‌ ಪಾಸ್‌ ಮೂಲಕ ಚಾಲನೆ ಮಾಡಬಾರದಿತ್ತು. ಸಂಚಾರಿ ಪೊಲೀಸರು ಮೊದಲೇ ಮುನ್ನೆಚ್ಚರಿಕೆ ನೀಡಬೇಕಿತ್ತು ಎಂದು ತಿಳಿಸಿದ್ದಾರೆ.

Bengaluru Rain:ಮಹಾಮಳೆಗೆ ಸಿಲುಕಿ ಯುವತಿ ಸಾವು: ಪ್ರವಾಸಕ್ಕೆ ಬಂದವಳು ದುರಂತ ಅಂತ್ಯ

ಮಸ್ಯೆಗೆ ಶಾಶ್ವತ ಪರಿಹಾರ ರೂಪಿಸಿ

ಬಿಬಿಎಂಪಿ(BBMP) ಅಧಿಕಾರಿಗಳು ಕೂಡಲೇ ನಗರದ ಉದ್ದಗಲಕ್ಕೂ ಎಲ್ಲಾ ಅಂಡರ್‌ ಪಾಸ್‌ಗಳನ್ನು ವಿಸ್ತೃತವಾಗಿ ಪರಿಶೀಲಿಸಿ, ಕಸಕಡ್ಡಿ ವಿಲೇವಾರಿ ಮಾಡಿಸಿ ಮಳೆನೀರು ಸರಾಗವಾಗಿ ಹರಿದುಹೋಗುವಂತೆ ಮಾಡಬೇಕು. ಇನ್ನೊಂದು ಪ್ರಾಣ ಹಾನಿಗೆ ಅವಕಾಶ ನೀಡಬಾರದು ಎಂದು ಹೇಳಿರುವ ಅವರು, ಯುವತಿ ಕುಟುಂಬಕ್ಕೆ ಪರಿಹಾರ ನೀಡಿರುವುದು ಸ್ವಾಗತಾರ್ಹ. ಆದರೆ, ಇಂತಹ ದುರಂತಗಳು ಮರುಕಳಿಸದಂತೆ ರಾಜ್ಯ ಕಾಂಗ್ರೆಸ್‌ ಸರ್ಕಾರ ಶಾಶ್ವತ ಪರಿಹಾರ ರೂಪಿಸಬೇಕು. ಅಂಡರ್‌ ಪಾಸ್‌, ರಸ್ತೆ, ಚರಂಡಿ, ಒಳ ಚರಂಡಿಗಳ ನಿರ್ವಹಣೆಯನ್ನು ಸಮರ್ಪಕವಾಗಿ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

Latest Videos
Follow Us:
Download App:
  • android
  • ios