ಲಕ್ಷದ್ವೀಪದಿಂದ ಬೀಸುತ್ತಿದೆ ಚಂಡಮಾರುತದ ಗಾಳಿ: ಬೆಂಗಳೂರಿನಲ್ಲಿ ಅ.7ರವರೆಗೆ ಭಾರಿ ಮಳೆ
ಲಕ್ಷದ್ವೀಪದಲ್ಲಿ ಸೃಷ್ಟಿಯಾಗಿರುವ ಚಂಡಮಾರುತದ ಗಾಳಿಯು ನೈರುತ್ಯ ದಿಕ್ಕಿನತ್ತ ಸಾಗಿ ಬೆಂಗಳೂರು ಸೇರಿದಂತೆ ಕರ್ನಾಟಕದ ದಕ್ಷಿಣ ಒಳನಾಡಿನ ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಅಕ್ಟೋಬರ್ 3 ರಿಂದ 9 ರವರೆಗೆ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಬೆಂಗಳೂರು (ಅ.03): ಲಕ್ಷದ್ವೀಪದಿಂದ ಬೀಸುತ್ತಿರುವ ಚಂಡಮಾರುತದ ಗಾಳಿಯು ನೈರುತ್ಯದತ್ತ ಸಾಗಿದ್ದು, ಕರ್ನಾಟಕದ ದಕ್ಷಿಣ ಒಳನಾಡಿನ ಬೆಂಗಳೂರು ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಅ.3ರಿಂದ ಅ.9ರವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಸಿನೋಪ್ಟಿಕ್ ಹವಾಮಾನಶಾಸ್ತ್ರದ ವೈಶಿಷ್ಟ್ಯದ ಪ್ರಕಾರ ಮಾಲ್ಡೀವ್ಸ್ ಮತ್ತು ನೆರೆಹೊರೆಯಲ್ಲಿ ಚಂಡಮಾರುತದ ಪರಿಚಲನೆಯು ಈಗ ಲಕ್ಷದ್ವೀಪವನ್ನು ತಲುಪಿದೆ. ಈ ಹಿನ್ನೆಲೆಯಲ್ಲಿ ಸರಾಸರಿ ಸಮುದ್ರ ಮಟ್ಟದಿಂದ 4.5 ಕಿಮೀ ಎತ್ತರದ ವ್ಯಾಪ್ತಿವರೆಗೆ ಚಂಡಮಾರುತ ವ್ಯಾಪಿಸಿ ಹಾಗೂ ನೈಋತ್ಯ ದಿಕ್ಕಿನಲ್ಲಿ ಎತ್ತರದೊಂದಿಗೆ ಸಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದ ದಕ್ಷಿಣದ ಒಳನಾಡಿದ ಜಿಲ್ಲೆಗಳಲ್ಲಿ ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಅ.3ರಿಂದ ಅ.9ರವರೆಗೆ ಭಾರಿ ಮಳೆಯಾಗಲಿದೆ ಎಂದು ರಾಜಗ್ಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಈ ವೇಳೆ ಬೆಂಗಳೂರಿನಲ್ಲಿ ಇನ್ನೂ ಮೂರು ದಿನಗಳ ಕಾಲ ಮಳೆಯಾಗುವ ಮುನ್ಸೂಚನೆ ನೀಡಿದೆ.
ಇದನ್ನೂ ಓದಿ: ಬಿಗ್ ಬಾಸ್ ಮನೆಯೊಳಗಿರುವ ಲಾಯರ್ ಜಗದೀಶನ ವಕೀಲಿಕೆ ಲೈಸೆನ್ಸ್ ಕ್ಯಾನ್ಸಲ್!
ಈ ಕುರಿತು ಮಾಧ್ಯಮಗಳಿಗೆ ವಿಡಿಯೋ ಪ್ರಕಟಣೆ ನೀಡಿರುವ ಹವಾಮಾನ ತಜ್ಞ ಸಿ.ಎಸ್. ಪಾಟೀಲ್ ಅವರು, ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಮುಂದುವರೆಯಲಿದ್ದು, ಸಂಜೆ ಹಾಗೂ ರಾತ್ರಿ ವೇಳೆ ಕೆಲವೆಡೆ ಗುಡುಗು/ಸಿಡಿಲು ಸಮೇತ ಭಾರಿ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಅಕ್ಟೋಬರ್ 3 ರಿಂದ 7 ರವರೆಗೆ ಸಾಧಾರಣ ಮಳೆಯಾಗಲಿದೆ. ಜೊತೆಗೆ, ಬೆಂಗಳೂರಿನ ನೆರೆಹೊರೆ ಜಿಲ್ಲೆಗಳಾದ ರಾಮನಗರ, ತುಮಕೂರು, ಚಿಕ್ಕಬಳ್ಳಾಪುರ, ಮಂಡ್ಯ ಜಿಲ್ಲೆಗಳಿಗೂ ಹೆಚ್ಚಿನ ಮಳೆಯಾಗಲಿದೆ ಎಂದು ಮಳೆ ಮುನ್ಸೂಚನೆ ನೀಡಿದ್ದಾರೆ.
ಇದನ್ನೂ ಓದಿ: ಬಿಎಂಟಿಸಿ ಸಿಬ್ಬಂದಿಗೆ ಗನ್ ಲೈಸೆನ್ಸ್ ಕೋರಿಕೆ: ಕಂಡಕ್ಟರ್ ಹಣದ ಬ್ಯಾಗ್‌ನಲ್ಲಿ ಬಂದೂಕು!
ಇನ್ನು ದಕ್ಷಿಣ ಒಳನಾಡಿನಲ್ಲಿ ಇಂದು ಹಲವು ಕಡೆಗಳಲ್ಲಿ ಭಾರಿ ಮಳೆಯಾಗಲಿದೆ. ಉತ್ತರ ಒಳನಾಡಿನಲ್ಲಿ ಕೆಲವೇ ಕೆಲವು ಕಡೆ ಮಳೆ ಸುರಿಯಲಿದೆ. ರಾಜ್ಯಾದ್ಯಂತ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಅ.3 ರಿಂದ 9 ರವರಿಗೆ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಈ ಅವಧಿಯಲ್ಲಿ ಕರಾವಳಿಯ ಕೆಲವು ಪ್ರದೇಶಗಳಲ್ಲಿ ಭಾರಿ ಮಳೆಯಾಗಲಿದ್ದು, ಕೆಲವೆಡೆ ಅ.4 ಮತ್ತು ಅ.5ರಂದು ಯಲ್ಲೋ ಅಲರ್ಟ್ ಕೂಡ ಘೋಷಣೆ ಮಾಡಲಾಗಿದೆ. ಈ ಅವಧಿಯಲ್ಲಿ ಬೆಂಗಳೂರು, ರಾಮನಗರ, ಮಂಡ್ಯ, ಚಿಕ್ಕಮಗಳೂರು ಕೋಲಾರ, ದಾವಣಗೆರೆ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ ಎಂದು ಮುನ್ಸೂಚನೆಯನ್ನು ನೀಡಿದ್ದಾರೆ. ಒಟ್ಟಾರೆ, ಅಕ್ಟೋಬರ್ ತಿಂಗಳಲ್ಲಿ ಉತ್ತಮವಾದ ಮಳೆ ಸಾಧ್ಯತೆಯಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.