Asianet Suvarna News Asianet Suvarna News

ಫೆ.29 ರಿಂದ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ: ಈ ಸಿನಿಮಾಗಳ ಪ್ರದರ್ಶನ ಪಕ್ಕಾ!

15ನೇ ಆವೃತ್ತಿಯ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವವು ಫೆ. 29ರಿಂದ ಮಾ. 7ರವರೆಗೆ ನಡೆಯಲಿದೆ. ಫೆ. 29ರಂದು ವಿಧಾನಸೌಧ ಮುಂಭಾಗ ನಡೆಯಲಿರುವ ಕಾರ್ಯಕ್ರಮಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಚಲನಚಿತ್ರೋತ್ಸವಕ್ಕೆ ಚಾಲನೆ ನೀಡಲಿದ್ದಾರೆ.

Bengaluru International Film Festival from February 29 These movies will be screened at bengaluru rav
Author
First Published Jan 4, 2024, 10:20 AM IST | Last Updated Jan 4, 2024, 10:21 AM IST

ಬೆಂಗಳೂರು (ಜ.4): 15ನೇ ಆವೃತ್ತಿಯ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವವು ಫೆ. 29ರಿಂದ ಮಾ. 7ರವರೆಗೆ ನಡೆಯಲಿದೆ. ಫೆ. 29ರಂದು ವಿಧಾನಸೌಧ ಮುಂಭಾಗ ನಡೆಯಲಿರುವ ಕಾರ್ಯಕ್ರಮಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಚಲನಚಿತ್ರೋತ್ಸವಕ್ಕೆ ಚಾಲನೆ ನೀಡಲಿದ್ದಾರೆ.

ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ(International Film Festival 2024) ಸಂಘಟನಾ ಸಮಿತಿ ಸದಸ್ಯರೊಂದಿಗೆ ಬುಧವಾರ ಸಭೆ ನಡೆಸಿ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, 15ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವವು ಫೆ. 29ರಿಂದ ಎಂಟು ದಿನಗಳ ಕಾಲ ನಡೆಯಲಿದೆ. ಚಲನಚಿತ್ರೋತ್ಸವದಲ್ಲಿ ವಿದೇಶಗಳಲ್ಲಿ ಮನ್ನಣೆ ಪಡೆದ ಚಿತ್ರಗಳ ಜತೆಗೆ ಕನ್ನಡ ಸೇರಿದಂತೆ ದೇಶದ ವಿವಿಧ ಭಾಷಾ ಚಿತ್ರಗಳನ್ನು ಪ್ರದರ್ಶಿಸಲಾಗುತ್ತದೆ. ಮಾ.7ರಂದು ಸಮಾರೋಪ ಸಮಾರಂಭ ನಡೆಯಲಿದ್ದು, ಅಂದು ರಾಜ್ಯಪಾಲರು ಚಲನಚಿತ್ರೋತ್ಸವದ ವಿವಿಧ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದರು. 

ರೆಡ್ ಸೀ ಫಿಲ್ಮ ಫೆಸ್ಟಿವಲ್‌ನಲ್ಲಿ ಶೇಕ್ ಜೊತೆ ಮಿಂಚಿದ ಬಾಲಿವುಡ್ ನಟಿ ಆಲಿಯಾ..!

ಚಲನಚಿತ್ರೋತ್ಸವ ಉತ್ತಮವಾಗಿ ಸಂಘಟಿಸಲು ಸಂಘಟನಾ ಸಮಿತಿಯ ಜತೆಗೆ ಕೋರ್‌ ಸಮಿತಿಯನ್ನೂ ರಚಿಸಲಾಗಿದೆ ಎಂದರು.

ಉದ್ಘಾಟನಾ ಸಮಾರಂಭ ಸೇರಿ ಇನ್ನಿತರ ಸಮಾರಂಭಗಳು ಯಾವ ರೀತಿ ಏರ್ಪಡಿಸಬೇಕು ಎಂಬ ಬಗ್ಗೆ ಸಭೆ ನಡೆಸಿ ತೀರ್ಮಾನಿಸಲಾಗುವುದು. ದೇಶ-ವಿದೇಶದ ಚಲನಚಿತ್ರ ಕ್ಷೇತ್ರದ ಪ್ರಖ್ಯಾತ ಕಲಾವಿದರನ್ನು ಕರೆಸಲಾಗುತ್ತಿದೆ. ಈ ಬಗ್ಗೆ ಈಗ ನಡೆದಿರುವ ಸಭೆಯಲ್ಲಿ ಚರ್ಚಿಸಲಾಗಿದ್ದು, ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಯಶಸ್ವಿಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕಾಂತಾರಕ್ಕೆ ಅಂತರರಾಷ್ಟ್ರೀಯ ವಿಶೇಷ ಪ್ರಶಸ್ತಿ: ಶಂಕರ್​ನಾಗ್​ಗೆ ಸಮರ್ಪಿಸಿದ ರಿಷಬ್​ ಶೆಟ್ಟಿ

ಬಹುತ್ವಕ್ಕೆ ಒತ್ತು ಕೊಡುವ ಚಲನಚಿತ್ರೋತ್ಸವ

ಶಾಂತಿ, ಸಮಾನತೆ, ಲಿಂಗ ಸಮಾನತೆ, ಸೌಹಾರ್ದತೆ, ಮಾನವೀಯತೆಯ ಸಂದೇಶಗಳು ಚಲನಚಿತ್ರೋತ್ಸವದ ಮೂಲಕ ಸಮಾಜಕ್ಕೆ ತಲುಪಬೇಕು ಎಂಬುದು ನಮ್ಮ ಉದ್ದೇಶ. ಅದಕ್ಕಾಗಿ ಈ ಬಾರಿಯ ಚಲನಚಿತ್ರೋತ್ಸವ ಬಹುತ್ವಕ್ಕೆ ಹೆಚ್ಚು ಒತ್ತು ಕೊಡುವ ರೀತಿಯಲ್ಲಿ ನಡೆಯಲಿದೆ. ಹೆಚ್ಚು ಜನಪ್ರಿಯಗೊಳಿಸುವ ನಿಟ್ಟಿನಲ್ಲಿ ಅಗತ್ಯವಿರುವ ಆರ್ಥಿಕ ನೆರವನ್ನು ಸರ್ಕಾರ ಒದಗಿಸಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಹಿಂದೆ ವಿಧಾನಸೌಧದ ಮುಂಭಾಗದಲ್ಲಿಯೇ ಅಂತಾರಾಷ್ಟ್ರಿಯ ಚಲನಚಿತ್ರೋತ್ಸವದ ಉದ್ಘಾಟನೆಯಾಗುತ್ತಿತ್ತು.

Latest Videos
Follow Us:
Download App:
  • android
  • ios