Asianet Suvarna News Asianet Suvarna News

ಕಾಂಗ್ರೆಸ್ ಮಾಜಿ ಕಾರ್ಪೋರೇಟರ್ ಮನೇಲಿ ಕೋಟಿ ಕೋಟಿ ಹಣ ಪತ್ತೆ; ಸಿಎಂ ಸಿದ್ದು, ಡಿಕೆಶಿ ಮೇಲೆ ಮುಗಿಬಿದ್ದ ಎಚ್‌ಡಿ ಕುಮಾರಸ್ವಾಮಿ

ಪಂಚರಾಜ್ಯ ಚುನಾವಣೆ ಘೋಷಣೆ ಆಗಿದ್ದೇ ತಡ, ರಾಜ್ಯದಲ್ಲಿ ಕುರುಡು ಕಾಂಚಾಣ ಕಂತೆ ಕಂತೆಯಾಗಿ ಕಾಟನ್ ಬಾಕ್ಸ್ ಗಳಲ್ಲಿ ಕುಣಿಯುತ್ತಿದೆ! ಅದೂ ಮಂಚದ ಕೆಳಗೆ. ಐಟಿದಾಳಿ ವೇಳೆ ಗುತ್ತಿಗೆದಾರನ ಮನೆಯಲ್ಲಿ ಪತ್ತೆಯಾದ ಹಣ ಯಾರದ್ದು? ಯಾರ ಹೆಣದ ಮೇಲೆ ಸಂಗ್ರಹಿಸಿದ ಪಾಪದ ಹಣವಿದು? ಈ ಪ್ರಶ್ನೆಗಳಿಗೆ ಉತ್ತರ ಬೇಕಿದೆ ಎಂದು ಆಗ್ರಹಿಸಿದ್ದಾರೆ.

Bengaluru IT Raids issue former cm HD Kumaraswamy outraged agains congnress government bengaluru rav
Author
First Published Oct 13, 2023, 2:37 PM IST

ಬೆಂಗಳೂರು (ಅ.13): ಕಾಂಗ್ರೆಸ್ ಮಾಜಿ ಕಾರ್ಪೋರೇಟರ್‌ ಅಶ್ವಥಮ್ಮ ಮತ್ತು ಗುತ್ತಿಗೆದಾರ ಅಂಬಿಕಾಪತಿ ಮನೆ ಮೇಲೆ ಐಟಿ ದಾಳಿ ನಡೆದು ಬರೋಬ್ಬರಿ 42 ಕೋಟಿ ಹಣ ಪತ್ತೆಯಾಗಿದೆ. ಲೋಕಸಭಾ ಚುನಾವಣೆ ಸಮೀಪಿಸಿರುವ ಹೊತ್ತಲ್ಲಿ ಇಷ್ಟೊಂದು ಹಣ ಪತ್ತೆಯಾಗಿರುವುದು ಕಾಂಗ್ರೆಸ್ ಸರ್ಕಾರದ ಮೇಲೆ ವಿರೋಧ ಪಕ್ಷಗಳು ಮುಗಿಬಿದ್ದಿವೆ.

ಐಟಿ ದಾಳಿ ವಿಚಾರ ಸಂಬಂಧ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದು, #ಕರ್ನಾಟಕಕ್ಕೆ_ಕಾಂಗ್ರೆಸ್_ಕನ್ನ ಎಂಬ ಹ್ಯಾಷ್ ಟ್ಯಾಗ್ ಬಳಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಪಂಚರಾಜ್ಯ ಚುನಾವಣೆ ಘೋಷಣೆ ಆಗಿದ್ದೇ ತಡ, ರಾಜ್ಯದಲ್ಲಿ ಕುರುಡು ಕಾಂಚಾಣ ಕಂತೆ ಕಂತೆಯಾಗಿ ಕಾಟನ್ ಬಾಕ್ಸ್ ಗಳಲ್ಲಿ ಕುಣಿಯುತ್ತಿದೆ! ಅದೂ ಮಂಚದ ಕೆಳಗೆ. ಐಟಿದಾಳಿ ವೇಳೆ ಗುತ್ತಿಗೆದಾರನ ಮನೆಯಲ್ಲಿ ಪತ್ತೆಯಾದ ಹಣ ಯಾರದ್ದು? ಯಾರ ಹೆಣದ ಮೇಲೆ ಸಂಗ್ರಹಿಸಿದ ಪಾಪದ ಹಣವಿದು? ಈ ಪ್ರಶ್ನೆಗಳಿಗೆ ಉತ್ತರ ಬೇಕಿದೆ ಎಂದು ಆಗ್ರಹಿಸಿದ್ದಾರೆ.

ಗುತ್ತಿಗೆದಾರ ಅಂಬಿಕಾಪತಿ ಮನೆಯಲ್ಲಿ ₹42 ಕೋಟಿ ಪತ್ತೆ; ಇದು ಎಐಸಿಸಿಗೆ ಕಳಿಸಬೇಕಿದ್ದ ಹಣ: ಈಶ್ವರಪ್ಪ ಗಂಭೀರ ಆರೋಪ

ಆಯ್ದ ಗುತ್ತಿಗೆದಾರರಿಗೆ ಬಿಬಿಎಂಪಿಯಿಂದ 650 ಕೋಟಿ ರೂ. ಬಿಡುಗಡೆಯಾದ ಬೆನ್ನಲ್ಲೇ ಈ 42 ಕೋಟಿ ರೂ. ಐಟಿ ಅಧಿಕಾರಿಗಳಿಗೆ ಸಿಕ್ಕಿಬೀಳುತ್ತದೆ. ಅಲ್ಲಿಗೆ ಕಲೆಕ್ಷನ್ ನಿಜ ಎಂದಾಯಿತು. ಅದು ಎಷ್ಟು ಪರ್ಸಂಟೇಜ್? ಅದರ ಹಿಂದೆ ಅಡಗಿ ಕೂತಿರುವ ಆದಿಪುರುಷರು ಯಾರೆಂದು ಬಹಿರಂಗವಾಗಬೇಕು. ಬರೋಬ್ಬರಿ 23 ಬಾಕ್ಸ್ ಗಳಲ್ಲಿ ತುಂಬಿಡಲಾಗಿದ್ದ ಈ ಇಡಗಂಟು ಪಕ್ಕದ ತೆಲಂಗಾಣಕ್ಕೆ ಹೊರಟು ನಿಂತಿತ್ತು ಎನ್ನುವುದು ಮಾಹಿತಿ ಸಿಕ್ಕಿದೆ. ಅಲ್ಲಿಗೆ ಚುನಾವಣೆಗಾಗಿ ಈ ಹಣವನ್ನು ಸಂಗ್ರಹ ಮಾಡಲಾಗಿತ್ತು ಎನ್ನುವುದು ಸತ್ಯ. ಈ ಕನಕ ಮಹಾಲಕ್ಷ್ಮಿಯ ಕಲೆಕ್ಷನ್ ಗೆ 'ಬೆಂಗಳೂರು ನಗದು ಅಭಿವೃದ್ಧಿ ಇಲಾಖೆ'ಯ ಕೈ ಕರಾಮತ್ತು ಅಂತ ಇನ್ನೊಂದು ಮಾಹಿತಿಯಿದೆ. ಅಷ್ಟರಲ್ಲಿ ಐಟಿ ಇಲಾಖೆ ಮುಗಿಬಿದ್ದ ಪರಿಣಾಮ, ಗುಟ್ಟು ರಟ್ಟಾಗಿದೆ. ಅಲ್ಲಿಗೆ ಕಾಂಗ್ರೆಸ್ ಸರ್ಕಾರದಲ್ಲಿ ಪರ್ಸೆಂಟೇಜ್ ಪಾರಮ್ಯ ಅವ್ಯಾಹತವಾಗಿ ನಡೆಯುತ್ತಿದೆ ಎಂದಾಯಿತಲ್ಲ? ಸಿಎಂ, ಡಿಸಿಎಂಗೆ ಟ್ವೀಟ್‌ ಮೂಲಕ ತಿವಿದಿದ್ದಾರೆ.

ಈಗ ಹೇಳಿ ಸನ್ಮಾನ್ಯ  ಸಿದ್ದರಾಮಯ್ಯನವರೇ, 42 ಕೋಟಿ ರೂ. ಬಗ್ಗೆ ಯಾವ ತನಿಖೆ ಮಾಡಿಸುತ್ತೀರಿ? ಸಿಬಿಐ, ಈಡಿ, ಹಾಲಿ ನ್ಯಾಯಾಧೀಶರು, ನಿವೃತ್ತ ನ್ಯಾಯಾಧೀಶರು..? ದಯಮಾಡಿ ಹೇಳಿ. ಒಂದು ಕಡೆ ರಾಜ್ಯಾದ್ಯಂತ ರೈತರು ಬರ, ವಿದ್ಯುತ್ ಬಿಕ್ಕಟ್ಟಿನಿಂದ ಕಂಗೆಟ್ಟಿದ್ದಾರೆ. ಗುತ್ತಿಗೆದಾರರು ಅಯೋಮಯ ಸ್ಥಿತಿಯಲ್ಲಿದ್ದಾರೆ. ಆದರೂ ಇತ್ತ ಕಾಂಗ್ರೆಸ್‌ ಸರ್ಕಾರದಲ್ಲಿ ಕಲೆಕ್ಷನ್ ' ಕೈ ' ಚಳಕ ಜೋರಾಗಿದೆ. ಪಂಚರಾಜ್ಯಗಳ ಪಾಲಿಕೆ ಕರ್ನಾಟಕ ಸಮೃದ್ಧ ಎಟಿಎಮ್! ಕಾವೇರಿ ನೀರು  ತಮಿಳುನಾಡಿಗೆ ನಿರಂತರ ಹರಿಯುತ್ತಿದ್ದರೆ, ಕನ್ನಡಿಗರ ತೆರಿಗೆಲಕ್ಷ್ಮೀ ಎಲೆಕ್ಷನ್ ರಾಜ್ಯಗಳ ಪಾಲಾಗುತ್ತಿದ್ದಾಳೆ! \

ಬೆಂಗ್ಳೂರಲ್ಲಿ ಐಟಿ ಅಧಿಕಾರಿಗಳ ರಾತ್ರಿ ಕಾರ್ಯಾಚರಣೆ: ಬಾಕ್ಸ್‌ಗಳಲ್ಲಿ ಕಂತೆ ಕಂತೆ ಹಣ ಪತ್ತೆ..!

ಆದಿಯಿಂದಲೂ ಇದೇ ಕಥೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಹೈಕಮಾಂಡ್ ಗೆ ಹಬ್ಬ. ಈಗಲೂ ಅದೇ ಆಗುತ್ತಿದೆ. ಪಂಚರಾಜ್ಯಗಳ ಚುನಾವಣೆಗಾಗಿ ಕರ್ನಾಟಕಕ್ಕೆ ಕನ್ನ ಹೊಡೆಯಲಾಗಿದೆ. ವೋಟು ಕೊಟ್ಟ ತಪ್ಪಿಗೆ ಕಾಂಗ್ರೆಸ್ ಉಂಡು ಹೋಗುತ್ತಿದೆ, ಕೊಂಡು ಹೋಗುತ್ತಿದೆ. ಇದು ಕನ್ನಡಿಗರ ಕರ್ಮ.
 

Follow Us:
Download App:
  • android
  • ios