ಶಾಸಕಿ ಸೌಮ್ಯಾ ರೆಡ್ಡಿಗೆ ಕೊರೋನಾ| ಸಂಪರ್ಕದಲ್ಲಿವರಿಗೆ ಟೆಸ್ಟ್ ಮಾಡಿಸಿಕೊಳ್ಳುವಂತೆ ಮನವಿ| ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಶಾಸಕಿ

ಬೆಂಗಳೂರು(ಮಾ.27): ಕಳೆದೊಂದು ವರ್ಷದಿಂದ ಜನರನ್ನು ಕಂಗೆಡಿಸಿರುವ ಕೊರೋನಾ ಇನ್ನೇನು ನಿಂತೇ ಹೋಯ್ತು ಎಂದು ಸಮಾಧಾನಪಟ್ಟುಕೊಳ್ಳುವಷ್ಟರಲ್ಲಿ ಎರಡನೇ ಅಲೆ ಆರಂಭವಾಗಿದೆ. ದೇಶದಲ್ಲಿ ಲಸಿಕೆ ಅಭಿಯಾನ ನಡೆಯುತ್ತಿರುವ ಸಂದರ್ಭದಲ್ಲೇ ಮತ್ತೆ ಕೊರೋನಾ ಸೋಂಕಿತರ ಸಂಖ್ಯೆ ಏರುತ್ತಿರುವುದು ಜನ ಸಾಮಾನ್ಯರಿಗೆ ಹಾಗೂ ಸರ್ಕಾರಕ್ಕೆ ಮತ್ತೊಂದು ತಲೆ ನೋವಾಗಿ ಪರಿಣಮಿಸಿದೆ. 

ಸದ್ಯ ಬೆಂಗಲೂರಿನ ಜಯನಗರ ಕ್ಷೇತ್ರದ ಕಾಂಗ್ರೆಸ್‌ ಶಾಸಕಿ ಸೌಮ್ಯಾ ರೆಡ್ಡಿಗೂ ಈ ಸೋಂಕು ತಗುಲಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಶಾಸಕಿ ಸೌಮ್ಯಾ ರೆಡ್ಡಿ 'ನನಗೆ ಕೊರೋನಾ ಸೋಂಕು ತಗುಲಿದ್ದು, ಹತ್ತಿರದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದೇನೆ. ಕಳೆದ ಕೆಲ ದಿನಗಳಿಂದ ನನ್ನ ಜೊತೆ ಸಂಪರ್ಕದಲ್ಲಿದ್ದ ಎಲ್ಲರಿಗೂ ಕೊರೋನಾ ಟೆಸ್ಟ್ ಮಾಡುವಂತೆ ಈ ಮೂಲಕ ಮನವಿ ಮಾಡಿಕೊಳ್ಳುತ್ತೇನೆ' ಎಂದಿದ್ದಾರೆ.

Scroll to load tweet…

ಕೊರೋನಾ ಕುರಿತಾಗಿ ಎಚ್ಚರ ವಹಿಸುವಂತೆಯೂ ಮನವಿ ಮಾಡಿರುವ ಶಾಸಕಿ 'ಇತ್ತೀಚೆಗೆ ಕೊರೋನಾ ಸೋಮಕಿತರ ಸಂಖ್ಯೆ ಮತ್ತೆ ಹೆಚ್ಚಾಗುತ್ತಿದೆ. ಎರಡನೇ ಅಲೆ ಆರಂಭವಾಗಿದ್ದು, ಮುಂಜಾಗೃತಾ ಕ್ರಮಗಳನ್ನು ವಹಿಸಿ ಎಚ್ಚರದಿಂದಿರಿ. ಮಾಸ್ಕ್ ಧರಿಸಲು ಮರೆಯದಿರಿ. ಕೊರೋನಾ ಲಸಿಕೆ ಎಲ್ಲರಿಗೂ ನೀಡುವಂತೆ ಸರ್ಕಾರಕ್ಕೆ ಮನವಿ ಮಾಡಿಕೊಳ್ಳುತ್ತಿದ್ದೇನೆ' ಎಂದಿದ್ದಾರೆ.