Asianet Suvarna News Asianet Suvarna News

ರಾಜ್ಯಮಟ್ಟದ ಅದ್ಧೂರಿ ಗಣರಾಜ್ಯೋತ್ಸವಕ್ಕೆ ಸಜ್ಜುಗೊಂಡ ಬೆಂಗಳೂರಿನ ಮಾಣಿಕ್‌ಷಾ ಮೈದಾನ!

2024ನೇ ಸಾಲಿನ ರಾಜ್ಯ ಮಟ್ಟದ ಗಣರಾಜ್ಯೋತ್ಸವ ದಿನಾಚರಣೆಯು ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ನಡೆಯಲಿದ್ದು, ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ. 

Bengaluru Manekshaw Parade Ground prepared for state level Republic Day sat
Author
First Published Jan 18, 2024, 7:09 PM IST

ಬೆಂಗಳೂರು (ಜ.18): 2024ನೇ ಸಾಲಿನ ರಾಜ್ಯ ಮಟ್ಟದ ಗಣರಾಜ್ಯೋತ್ಸವ ದಿನಾಚರಣೆಯು ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ನಡೆಯಲಿದ್ದು, ಅದಕ್ಕೆ ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಲು ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್ ಅಧಿಕಾರಿಗಳಿಗೆ ಸೂಚನೆ ನೀಡಿದರು. 

2024ನೇ ಸಾಲಿನ ಗಣರಾಜ್ಯೋತ್ಸವ ದಿನಾಚರಣೆಯ ಸಂಬಂಧ ಇಂದು ಪಾಲಿಕೆ ಕೇಂದ್ರ ಕಛೇರಿ ಸಭಾಂಗಣ-01ರಲ್ಲಿ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಗಣರಾಜ್ಯೋತ್ಸವ ದಿನಾಚರಣೆಯ ದಿನ ಆವರಣಕ್ಕೆ ಬರುವ ಅತೀ ಗಣ್ಯರು, ಗಣ್ಯರು, ಅಧಿಕಾರಿಗಳು ಹಾಗೂ ಸಾರ್ವಜನಿಕರು ಯಾವ ದ್ವಾರದಲ್ಲಿ ಬರಬೇಕು ಹಾಗೂ ವಾಹನಗಳ ಪಾರ್ಕಿಂಗ್ ಸ್ಥಳ ವಿಚಾರವಾಗಿ ಯಾವುದೇ ಲೋಪಗಳಾಗದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಸೂಚನೆ ನೀಡಿದರು. 

ಕ್ಯಾಬಿನೆಟ್ ಮೀಟಿಂಗ್ ಮುಖ್ಯಾಂಶ: ಒಳ ಮೀಸಲಾತಿ, ಚನ್ನಮ್ಮನ ಕಿತ್ತೂರು, ಬಸವಣ್ಣನೇ ಸಾಂಸ್ಕೃತಿಕ ನಾಯಕ!

ಪ್ರತಿ ವರ್ಷದಂತೆ ಗಣರಾಜ್ಯೋತ್ಸವ ಸಮಾರಂಭದಲ್ಲಿ ಕವಾಯತು ಪ್ರದರ್ಶನಕ್ಕಾಗಿ ಅಗತ್ಯ ಏರ್ಪಾಡುಗಳನ್ನು ಮಾಡಿಕೊಂಡು ಪೋಲೀಸ್ ಇಲಾಖೆಯಿಂದ ಶಿಷ್ಟಾಚಾರದನ್ವಯ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕೆಂದು ಸೂಚನೆ ನೀಡಿದರು. ಸಾಂಸ್ಕೃತಿ ಕಾರ್ಯಕ್ರಮಗಳು ನಡೆಯುವ ವೇಳೆ ಮೈದಾನದಲ್ಲಿ ಧೂಳು ಏಳುವ ಸಾಧ್ಯತೆಯಿದ್ದು, ಮೈದಾನಕ್ಕೆ ನೀರನ್ನು ನಿಯಮಿತವಾಗಿ ಸಿಂಪಡಿಸಿ ಮಣ್ಣಿನ ಧೂಳು ಏಳದಂತೆ ಅಗತ್ಯ ಕ್ರಮ ವಹಿಸಲು ಸೂಚಿಸಲಾಯಿತು. 

ಸಭೆಯಲ್ಲಿ ಬೆಂಗಳೂರು ನಗರ ಜಿಲ್ಲಾಧಿಕಾರಿಯಾದ ಶ್ರೀ ಕೆ.ಎ.ದಯಾನಂದ್, ವಲಯ ಆಯುಕ್ತರಾದ ಶ್ರೀಮತಿ ಸ್ನೇಹಲ್, ಉಪ ಆಯುಕ್ತರಾದ ಮಂಜುನಾಥಸ್ವಾಮಿ, ಪೊಲೀಸ್ ಅಧಿಕಾರಿಗಳು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸೇರಿದಂತೆ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಹಾಜರಿದ್ದರು.

ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಗೆ ಎಲ್ಲಾ ರೀತಿಯ ಸಿದ್ದತೆ ಮಾಡಿ:
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಯನ್ನು ಭಾರತ ಚುನಾವಣಾ ಆಯೋಗವು ಈಗಾಗಲೇ ಘೋಷಿಸಿದ್ದು, ಅದರಂತೆ ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ಮಾಹಿತಿ ನೀಡಿದರು. ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಗೆ ಸಂಬಂಧಿಸಿದಂತೆ ಇಂದು ಪಾಲಿಕೆ ಸಂಬಾಂಗಣ-01ರಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಭಾರತ ಚುನಾವಣಾ ಆಯೋಗವು ಶಿಕ್ಷಕರ ಉಪ ಚುನಾವಣೆಯ ವೇಳಾಪಟ್ಟಿಯನ್ನು ಹೊರಡಿಸಿದ್ದು, ಅದರಂತೆ ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಹೇಳಿದರು.

ರಾಜ್ಯದ ಎಲ್ಲ ಐಎಎಸ್, ಕೆಎಎಸ್ ಕೋಚಿಂಗ್ ಸೆಂಟರ್‌ಗಳಿಗೆ ಶಿಕ್ಷಣ ಇಲಾಖೆ ನೋಂದಣಿ ಕಡ್ಡಾಯ!

23 ಜನವರಿ 2024 ರಂದು ಅಧಿಸೂಚನೆ ಹೊರಡಿಸಿ 30 ಜನವರಿ 2024 ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. 31 ಜನವರಿ 2024 ರಂದು ನಾಮಪತ್ರಗಳ ಪರಿಶೀಲನೆ, 2 ಫೆಬ್ರವರಿ 24 ರಂದು ನಾಮಪತ್ರಗಳನ್ನು ಹಿಂಪಡೆಯಲು ಕೊನೆಯದಿನವಾಗಿದ್ದು, 16 ಫೆಬ್ರವರಿ 24 ರಂದು ಬೆಳಗ್ಗೆ 8 ರಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದೆ. 20 ಫೆಬ್ರವರಿ 24 ರಂದು ಮತ ಎಣಿಕೆ ನಡೆಯಲಿದ್ದು, 23 ಫೆಬ್ರವರಿ 24 ರಂದು ಚುನಾವಣಾ ಪ್ರಕ್ರಿಯೆ ಕೊನೊಗೊಳ್ಳಲಿದೆ ಎಂದು ತಿಳಿಸಿದರು. ಶಿಕ್ಷಕರ ಕ್ಷೇತ್ರ ಚುನಾವಣೆಗೆ ಸಂಬಂಧಿಸಿದಂತೆ ಅಂತಿಮ ಮತದಾರರ ಪಟ್ಟಿಯಲ್ಲಿ 11763 ಮತದಾರರಿದ್ದು, ಹೊಸದಾಗಿ ಬಂದಿರುವ 1048 ಅರ್ಜಿಗಳನ್ನು ಪರಿಶೀಲಿಸಲಾಗುತ್ತಿದೆ. ಅಂತಿಮ ಮತದಾರರ ಪಟ್ಟಿಯಲ್ಲಿ ನಕಲಿರುವ(Duplication) 97 ಮತಗಳನ್ನು ಕಾನೂನು ರೀತಿಯಲ್ಲಿ ತೆಗೆಯಲು ಕ್ರಮ ಕೈಗೊಳ್ಳಲಾಗುವುದು. ನಗರದ 28 ವಿಧಾನಸಭಾ ಕ್ಷೇತ್ರದಲ್ಲಿ 34 ಮತಗಟ್ಟೆಗಳಿರಲಿವೆ ಎಂದು ಹೇಳಿದರು. 

Latest Videos
Follow Us:
Download App:
  • android
  • ios