Asianet Suvarna News Asianet Suvarna News

ಬೆಂಗಳೂರಲ್ಲಿ ನಾಯಿ ಮಾಂಸ ಮಾರಾಟ ಆರೋಪ ಪ್ರಕರಣ; ಪುನೀತ್ ಕೆರೆಹಳ್ಳಿಗೆ ಷರತ್ತುಬದ್ಧ ಜಾಮೀನು

ರಾಜಸ್ಥಾನದಿಂದ ಕಲಬೆರಕೆ ಮಾಂಸ ಸಾಗಾಟ ಆರೋಪ ಪ್ರಕರಣದಲ್ಲಿ ಬಂಧಿತರಾಗಿದ್ದ ರಾಷ್ಟ್ರ ರಕ್ಷಣಾ ಪಡೆ ಮುಖಂಡ ಪುನೀತ್ ಕೆರೆಹಳ್ಳಿಗೆ 5ನೇ ಎಸಿಎಂಎಂ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

bengaluru meat scandal case Puneeth Kerehalli granted Conditional bail rav
Author
First Published Jul 30, 2024, 4:39 PM IST | Last Updated Jul 30, 2024, 5:09 PM IST

ಬೆಂಗಳೂರು (ಜು.30): ರಾಜಸ್ಥಾನದಿಂದ ಕಲಬೆರಕೆ ಮಾಂಸ ಸಾಗಾಟ ಆರೋಪ ಪ್ರಕರಣದಲ್ಲಿ ಬಂಧಿತರಾಗಿದ್ದ ರಾಷ್ಟ್ರ ರಕ್ಷಣಾ ಪಡೆ ಮುಖಂಡ ಪುನೀತ್ ಕೆರೆಹಳ್ಳಿಗೆ 5ನೇ ಎಸಿಎಂಎಂ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಇಂದು ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಪ್ರತಿ ತಿಂಗಳ ಮೊದಲ ಭಾನುವಾರದಂದು ಠಾಣೆಗೆ ಹಾಜರಾಗಿ ಸಹಿ ಮಾಡಬೇಕು, ವಿಚಾರಣೆ ಮುಗಿಯುವವರೆಗೂ ದೇಶಬಿಟ್ಟು ಹೋಗಬಾರದು, ಬಿಡುಗಡೆ ಬಳಿಕ ಸಾಕ್ಷಿಗಳ ಮೇಲೆ ಪ್ರಭಾವ ಬೀರಬಾರದು ಜೊತೆಗೆ ಮುಂದೆ ಇಂತಹದ್ದೇ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಬಾರದು ಎಂದು ಷರತ್ತು ವಿಧಿಸಿ ಜಾಮೀನು ಮಂಜೂರು ಮಾಡಿದ ಕೋರ್ಟ್. ಪುನೀತ್ ಕೆರೆಹಳ್ಳಿ ಪರ ವಕೀಲ ಪ್ರಕಾಶ್ ಶೆಟ್ಟಿ ವಾದಿಸಿದರು.

ಬೆಂಗಳೂರಲ್ಲಿ ನಾಯಿ ಮಾಂಸ ಮಾರಾಟ ಪ್ರಕರಣ; ಠಾಣೆಯಲ್ಲಿ ಪುನೀತ್ ಕೆರೆಹಳ್ಳಿ ಮೇಲೆ ಪೊಲೀಸರಿಂದ ಹಲ್ಲೆ! ವಕೀಲ ಹೇಳಿದ್ದೇನು?

ರಾಜಸ್ಥಾನದಿಂದ ಬೆಂಗಳೂರಿಗೆ ತರಲಾಗಿದ್ದ ಮಾಂಸದ ಬಾಕ್ಸ್‌ಗಳಲ್ಲಿ ಕುರಿಮಾಂಸದೊಂದಿಗೆ ನಾಯಿ ಮಾಂಸ ಸೇರಿಸಿದ್ದಾರೆಂಬ ಆರೋಪ ಕೇಳಿಬಂದ ಹಿನ್ನೆಲೆ ರೈಲ್ವೆ ನಿಲ್ದಾಣಕ್ಕೆ ನುಗ್ಗಿ ಮಾಂಸದ ಬಾಕ್ಸ್‌ಗಳನ್ನು ತಡೆಹಿಡಿದಿದ್ದ ಪುನೀತ್ ಕೆರೆಹಳ್ಳಿ ಈ ವೇಳೆ ಪೊಲೀಸರೊಂದಿಗೆ ವಾಗ್ವಾದ ನಡೆಸಿ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಬಂಧಿಸಿದ್ದ ಪೊಲೀಸರು.

ಏನಿದು ಘಟನೆ?
ರಾಜಸ್ಥಾನದ ಶಿಖರ್​ ಜಿಲ್ಲೆಯಲ್ಲಿರುವ ಗೋಡೌನ್​ನಿಂದ ಮಾಂಸದ ಬಾಕ್ಸ್‌ಗಳು ಜೈಪುರ ರೈಲ್ವೆ ನಿಲ್ದಾಣಕ್ಕೆ ಅಲ್ಲಿಂದ ಬೆಂಗಳೂರಿಗೆ ಶಿಫ್ಟ್ ಮಾಡಲಾಗುತ್ತಿತ್ತು. ಹೀಗೆ ತರುವ ಮಾಂಸದ ಬಾಕ್ಸ್‌ಗಳಲ್ಲಿ ಮಟನ್ ಜೊತೆಗೆ ನಾಯಿ ಮಾಂಸ ಬೆರೆಸಲಾಗಿದೆ ಎಂಬ ಸುದ್ದಿ  ಕಾಟನ್ ಪೇಟೆ ಠಾಣಾ ವ್ಯಾಪ್ತಿಯ ಹೊಯ್ಸಳ ೩೭ ಕ್ಕೆ ಕರೆ ಮಾಡಲಾಗಿತ್ತು. ಹೊಯ್ಸಳ ಸಿಬ್ಬಂದಿ ರೈಲ್ವೇ ನಿಲ್ದಾಣದ ಹಿಂಬದಿ ಗೇಟ್ ಗೆ ಹೋಗಿ ಪೊಲೀರು ಪರಿಶೀಲನೆ ನಡೆಸಿದ್ದರು. ಆ ವೇಳೆ ಹಿಂದೂಪರ ಸಂಘಟನೆ ಮುಖಂಡ ಪುನೀತ್ ಕೆರೆ ಹಳ್ಳಿ ಹಾಗೂ ಸಂಗಡಿಗರು ರೈಲ್ವೆ ನಿಲ್ದಾಣಕ್ಕೆ ಬಂದು ಐಸ್ ಬಾಕ್ಸ್ ಹಿಡಿದುಕೊಂಡು ಸೇವಿಸಲು ಯೋಗ್ಯವಲ್ಲದ  ನಾಯಿ ಮಾಂಸದ ದಂಧೆಯನ್ನ ಅಬ್ದುಲ್ ರಜಾಕ್ ನಡೆಸುತ್ತಿದ್ದಾರೆಂದು ಘೋಷಣೆ ಕೂಗಿದ್ದರು. ಈ ವೇಳೆ ವಾಗ್ವಾದ ನಡೆದು ಗಲಾಟೆಯಾಗಿತ್ತು. ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದಾರೆಂದು ಪುನೀತ್ ಕೆರೆಹಳ್ಳಿ ವಿರುದ್ಧ ಎಫ್‌ಐಆರ್ ದಾಖಲಿಸಿ ಬಂಧಿಸಿದ್ದ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.

Latest Videos
Follow Us:
Download App:
  • android
  • ios