ಮೃತರಾದ 3 ದಿನಗಳ ಬಳಿಕ ಸ್ವಾಬ್‌ ಸಂಗ್ರಹ: ಆಸ್ಪತ್ರೆ ಸಿಬ್ಬಂದಿ ಭಾರೀ ಎಡವಟ್ಟು!

ಮೃತರಾದ 3 ದಿನಗಳ ಬಳಿಕ ಸ್ವಾಬ್‌ ಸಂಗ್ರಹ!| ಕೆ.ಸಿ.ಜನರಲ್‌ ಆಸ್ಪತ್ರೆ ಸಿಬ್ಬಂದಿ ಯಡವಟ್ಟು

Bengaluru Medical Staffs Collects Swab Collected For Covid Test After Three Days Of Death

ಬೆಂಗಳೂರು(ಜು.05): ನಗರದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ಮೃತರನ್ನು ಅತ್ಯಂತ ಅಮಾನವೀಯವಾಗಿ ನಡೆಸಿಕೊಳ್ಳುತ್ತಿದ್ದು ಗುರುವಾರ ಮೃತಪಟ್ಟವ್ಯಕ್ತಿಯ ಸ್ವಾಬ್‌ ಅನ್ನು ಮೂರು ದಿನಗಳ ಬಳಿಕ ಅಂದರೆ ಜು.4ರಂದು ಸಂಗ್ರಹ ಮಾಡಿದ್ದಾರೆ.

ಬೆಂಗಳೂರಿನಿಂದ ಜನರ ಗುಳೆ: ಮನೆ ಖಾಲಿ ಮಾಡಿ ತಮ್ಮ ಊರಿಗೆ ಪ್ರಯಾಣ!

55 ವರ್ಷದ ರಾಮನಗರ ಮೂಲದ ಬೆಂಗಳೂರು ನಿವಾಸಿಯೊಬ್ಬರನ್ನು ರಾಜರಾಜೇಶ್ವರಿನಗರ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ದೊರೆಯದೆ ಮಾರ್ಥಾಸ್‌ ಆಸ್ಪತ್ರೆಗೆ ಕರೆ ತರಲಾಗಿತ್ತು. ಈ ವೇಳೆ ಮಾರ್ಗಮಧ್ಯೆ ಮೃತಪಟ್ಟಿದ್ದು, ಮಾರ್ಥಾಸ್‌ ಆಸ್ಪತ್ರೆ ಸಿಬ್ಬಂದಿ ಕೊರೋನಾ ಶಂಕೆ ಹಿನ್ನೆಲೆಯಲ್ಲಿ ಮೃತದೇಹವನ್ನು ಕೆ.ಸಿ. ಜನರಲ್‌ ಆಸ್ಪತ್ರೆಗೆ ಕರೆದೊಯ್ಯಲು ತಿಳಿಸಿದ್ದರು.

ನಿಯಮಗಳ ಪ್ರಕಾರ ಮೃತರಿಗೆ ಮೃತರಾದ 6 ಗಂಟೆಯೊಳಗೆ ಗಂಟಲು ದ್ರವ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಬೇಕು. ಜತೆಗೆ ಇತ್ತೀಚೆಗೆ ಹೊರಡಿಸಿರುವ ಆದೇಶದಂತೆ ಕೊರೋನಾ ಶಂಕಿತರ ಸಾವಿನ ನಂತರ ಗಂಟಲು ದ್ರವ ಪರೀಕ್ಷೆಗೆ ಕಳಿಹಿಸಿ ಕೂಡಲೇ ಸೋಂಕಿತ ವ್ಯಕ್ತಿಯೇ ಎಂದು ಭಾವಿಸಿ ಎಲ್ಲಾ ಮುನ್ನೆಚ್ಚರಿಕೆಯೊಂದಿಗೆ ಅಂತ್ಯಕ್ರಿಯೆ ನಡೆಸಬೇಕು.

ಸೋಂಕು-ಸಾವಲ್ಲಿ ಕೊರೋನಾ ದಾಖಲೆ: ಒಂದೇ ದಿನ 42 ಮಂದಿ ಸಾವು, 1839 ಕೇಸ್‌!

ಆದರೆ, ಕೆ.ಸಿ. ಜನರಲ್‌ ಆಸ್ಪತ್ರೆಯಲ್ಲಿ ಮೃತದೇಹ ಬಂದ ಮೂರು ದಿನಗಳ ಬಳಿಕ ಪರೀಕ್ಷೆಗೆ ಸ್ವಾಬ್‌ ಕಳುಹಿಸಿದ್ದಾರೆ. ಇದೀಗ ಪರೀಕ್ಷೆ ಮುಗಿಯುವವರೆಗೂ ಮೃತದೇಹವನ್ನು ಕುಟುಂಬಕ್ಕೆ ಹಸ್ತಾಂತರಿಸುವುದಿಲ್ಲ ಎಂದು ಹೇಳಲಾಗಿದೆ. ಇದರಿಂದಾಗಿ ಕುಟುಂಬ ಸದಸ್ಯರು ಮಾನಸಿಕವಾಗಿ ಕುಗ್ಗಿ ಹೋದಂತಾಗಿದ್ದಾರೆ. ಆರೋಗ್ಯ ಇಲಾಖೆ ಸಿಬ್ಬಂದಿ ನಿರ್ಲಕ್ಷ್ಯಕ್ಕೆ ಸತ್ತ ಬಳಿಕ ಗೌರವಯುತ ಅಂತ್ಯಸಂಸ್ಕಾರವೂ ಇಲ್ಲದಂತಾಗುತ್ತಿದೆ ಎಂದು ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Latest Videos
Follow Us:
Download App:
  • android
  • ios