ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ಆಗಸ್ಟ್‌ 1ರಿಂದ ದ್ವಿಚಕ್ರ, ತ್ರಿಚಕ್ರ ವಾಹನಗಳ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಲಾಗುತ್ತದೆ ಎಂದು ಸಂಚಾರ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ.

ಮೈಸೂರು (ಜು.26): ಕರ್ನಾಟಕ ರಾಜಧಾನಿ ಬೆಂಗಳೂರು ಹಾಗೂ ಸಾಂಸ್ಕೃತಿಕ ರಾಜಧಾನಿ ಮೈಸೂರು ನಡುವೆ ನಿರ್ಮಿಸಲಾದ ರಾಜ್ಯದ ಒಂದೇ ಒಂದು ಎಕ್ಸ್‌ಪ್ರೆಸ್‌ ವೇ ಆಗಿರುವ ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ಆಗಸ್ಟ್‌ 1ರಿಂದ ದ್ವಿಚಕ್ರ, ತ್ರಿಚಕ್ರ ವಾಹನಗಳ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಲಾಗುತ್ತದೆ ಎಂದು ಸಂಚಾರ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎಕ್ಸ್‌ಪ್ರೆಸ್‌ ಹೆದ್ದಾರಿಯ ಅಪಘಾತದಲ್ಲಿ ಮೃತಪಟ್ಟವರಲ್ಲಿ ಬಹುತೇಕರು ಬೈಕ್ ಸವಾರರು ಆಗಿದ್ದಾರೆ. 150 ಸಿಸಿ ಹಾಗೂ ಅದಕಕಿಂತ ಕಡಿಮೆ ಇಂಜಿನ್‌ ಸಾಮಥ್ರ್ಯದ ವಾಹನಗಳಲ್ಲಿ ಹೆಚ್ಚು ವೇಗದಲ್ಲಿ ಹೋಗಲು ಸಾಧ್ಯವಿಲ್ಲ. ಆಟೋ ರಿಕ್ಷಾದಂತಹ ವಾಹನಗಳ ವೇಗ ಇನ್ನೂ ಕಡಿಮೆ ಇರುತ್ತದೆ. ಎತ್ತಿನಗಾಡಿ, ಕುದುರೆಗಾಡಿಯಂತಹ ಮೋಟಾರ್ ರಹಿತ ವಾಹನಗಳನ್ನು ಬಿಡಲು ಸಾಧ್ಯವೇ ಇಲ್ಲವೆಂದು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) ಹಿಂದೆಯೇ ಆದೇಶವನ್ನು ಹೊರಡಿಸಿದೆ. ಈ ಸಂಬಂಧ ಜುಲೈ 12ರಂದು ನೋಟಿಫಿಕೇಷನ್ ಕೂಡ ಆಗಿದೆ. ಆಗಸ್ಟ್ 1ರಿಂದ ನಿಯಮ ಜಾರಿಗೆ ಬರಲಿದೆ ಎಂದು ಮಾಹಿತಿ ನೀಡಿದರು.

ಕೇಂದ್ರದ ದುಬಾರಿ ಟೋಲ್‌ಗೆ ಬೆಚ್ಚಿಬಿದ್ದ ರಾಜ್ಯ ಸಾರಿಗೆ ಸಂಸ್ಥೆ: ಟೋಲ್‌ ಕಟ್ಟಲಾಗದೇ ವಾಪಸ್‌ ಬಂದ ಕೆಎಸ್‌ಆರ್‌ಟಿಸಿ ಬಸ್‌

ವಿದ್ಯುತ್‌ ಕಂಬ, ಕಬ್ಬಿಣದ ತಡೆಗೋಡೆಗಳ ಕಳ್ಳತನ: ಹೆದ್ದಾರಿಯಲ್ಲಿ ಗ್ರಿಲ್, ವಿದ್ಯುತ್ ಕಂಬಗಳ ಕಳ್ಳತನ ವಿಚಾರವಾಗಿ ಮಾತನಾಡಿದ ಅವರು, ಎನ್‌ಎಚ್‌ಎಐ ಅಧಿಕಾರಿಗಳು ಒಂದೇ ಒಂದು ದೂರು ಕೊಟ್ಟಿಲ್ಲ. ತಡೆಗೋಡೆ ಕಬ್ಬಿಣ ಕಳ್ಳತನದಿಂದ ಹಸು, ಪಾದಚಾರಿಗಳು ರಸ್ತೆಗೆ ಬರುತ್ತಿದ್ದಾರೆ. ಇದರಿಂದಾಗಿ ಅಪಘಾತ ಆಗುತ್ತಿವೆ ಅಂತ ಹೇಳುತ್ತಾರೆ. ಆದರೆ ಪೊಲೀಸರಿಗೆ ದೂರು ಕೊಟ್ಟಿಲ್ಲ. ದರೋಡೆ ಪ್ರಕರಣಗಳ ವಿಚಾರವನ್ನೂ ನಮ್ಮ ಗಮನಕ್ಕೆ ತಂದಿಲ್ಲ. ದೂರು ನೀಡಿದರೆ ಕ್ರಮ ಕೈಗೊಳ್ಳುತ್ತೇವೆ ಎಂದು ಎಡಿಜಿಪಿ ಅಲೋಕ್ ಕುಮಾರ್ ಮೈಸೂರಿನಲ್ಲಿ ಹೇಳಿದರು.

ಹೆದ್ದಾರಿಯಲ್ಲಿ 25 ಅಪಘಾತ ವಲಯಗಳಿವೆ: ಹೆದ್ದಾರಿಯಲ್ಲಿ ಸುಮಾರು 25 ಅಪಘಾತ ವಲಯಗಳು ಇವೆ. ಎಲ್ಲ ಕಡೆಗೆ ನಾನು ಭೇಟಿ ನೀಡಿ ಪರಿಶೀಲನೆ ಮಾಡಿದ್ದೇನೆ. ಪ್ರಯಾಣಿಕರ ಸುರಕ್ಷತೆ ದೃಷ್ಟಿಯಿಂದ ಕಾಮಗಾರಿಗಳು ಬಾಕಿ ಇವೆ. ಸಿಸಿ ಕ್ಯಾಮರಾಗಳ ಅಳವಡಿಕೆ ಬಾಕಿ ಇದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಪೊಲೀಸರನ್ನು ಕೇಳಿ ಕಾಮಗಾರಿ ಮಾಡಿಲ್ಲ. ಸಮಸ್ಯೆ ಆದಾಗ ಸರಿ ಮಾಡಿ ಅಂತ ನಮ್ಮನ್ನು ಕರೆಯುತ್ತಾರೆ. ಎಕ್ಸ್‌ಪ್ರೆಸ್‌ ಹೆದ್ದಾರಿಯಲ್ಲಿ ಅನೇಕ ಕಾಮಗಾರಿಗಳು ಬಾಕಿ ಉಳಿದಿದ್ದು, ಹಲವಾರು ಸಮಸ್ಯೆಗಳು ಇವೆ. ಆದರೂ, ಈಗಾಗಲೇ ಹೆದ್ದಾರಿ ಉದ್ಘಾಟನೆ ಆಗಿದೆ. ಬಾಕಿ ಕಾಮಗಾರಿಗಳಿಗೆ ಹೆಚ್ಚುವರಿ ಅನುದಾನ ತಂದು ಕೆಲಸ ಮಾಡಿಸುವುದು ಎನ್‌ಎಚ್‌ಎಐ ಅಧಿಕಾರಿಗಳ ಕೆಲಸವಾಗಿದೆ. ಸರ್ಕಾರದ ನಿಯಮಗಳ ಪ್ರಕಾರ ಪ್ರಸ್ತಾವನೆ, ಟೆಂಡರ್ ಮಾಡಿ ಕೆಲಸ ಮಾಡಿಸಬೇಕಿದ್ದು, ಇದಕ್ಕಾಗಿ ತಡವಾಗುತ್ತಿರಬಹುದು ಎಂದು ಹೇಳಿದರು.

Bengaluru: ಫ್ರೀ ಟಿಕೆಟ್‌ ತೆಗೆದುಕೊಳ್ಳದೇ ಮಾರ್ಡನ್‌ ಗರ್ಲ್‌ ರಂಪಾಟ; ಕಂಡಕ್ಟರ್‌ಗೆ ಅವಾಜ್‌

ದುಬಾರಿ ಶುಲ್ಕ ಪಾವತಿಸಲಾಗದೇ ವಾಪಸ್‌ ಬಂದ ಸಾರಿಗೆ ಬಸ್‌: ರಾಜ್ಯದ ಮೊದಲ ಎಕ್ಸ್‌ಪ್ರೆಸ್‌ ವೇ ಆಗಿರುವ ಬೆಂಗಳೂರು- ಮೈಸೂರು ದಶಪಥ ಹೆದ್ದಾರಿಯಲ್ಲಿ ಕೇಂದ್ರ ಸರ್ಕಾರ ವಿಧಿಸಿರುವ ದುಬಾರಿ ಟೋಲ್‌ ಶುಲ್ಕವನ್ನು ಪಾವತಿಸಲು ಸಾಧ್ಯವಾಗದೇ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಬಸ್‌ ಹೋದ ದಾರಿಗೆ ಸುಂಕವಿಲ್ಲವೆಂಬಂತೆ ಒನ್‌ವೇ ನಲ್ಲಿಯೇ ವಾಪಸ್‌ ಬಂದಿದೆ. ರಾಜ್ಯದ ಪ್ರಮುಖ ಮತ್ತು ಏಕೈಕ ಎಕ್ಸ್‌ಪ್ರೆಸ್‌ವೇ ಆಗಿರುವ ಬೆಂಗಳೂರು ಮೈಸೂರು ದಶಪಥ ರಸ್ತೆ ನಿರ್ಮಾಣದ ಹಂತದಿಂದಲೂ ಉದ್ಘಾಟನೆ ಆಗಿ ಟೋಲ್‌ ಆರಂಭವಾಗುವವರೆಗೂ ಒಂದಿಲ್ಲಾ ಒಂದು ವಿವಾದವನ್ನು ಎದುರಿಸುತ್ತಲೇ ಇದೆ. ದುಬಾರಿ ಶುಲ್ಕ ವಿಧಿಸಲಾಗುತ್ತದೆ ಎಂಬ ದೂರುಗಳು ಕೇಳಿಬಂದಿದ್ದರೂ, ಇದಕ್ಕೆ ಕ್ಯಾರೇ ಎನ್ನದೇ ಕೇಂದ್ರ ಸರ್ಕಾರ ಎಕ್ಸ್‌ಪ್ರೆಸ್‌ ವೇ ಟೋಲ್‌ ಶುಲ್ಕವನ್ನು ಈಗಾಗಲೇ ಎರಡು ಬಾರಿ ಹೆಚ್ಚಳ ಮಾಡಿದೆ. ಕೇಂದ್ರ ಸರ್ಕಾರದ ಎಕ್ಸ್‌ಪ್ರೆಸ್‌ ವೇ ದುಬಾರಿ ಟೋಲ್‌ ಶುಲ್ಕದಿಂದ ಬೆಚ್ಚಿ ಬಿದ್ದ ಕರ್ನಾಟಕ ರಾಜ್ಯ ಸರ್ಕಾರದ ಸಾರಿಗೆ ಇಲಾಖೆಯ ಬಸ್‌ ಒನ್‌ವೇನಲ್ಲಿಯೇ ವಾಪಸ್‌ ಹೋಗಿರುವ ವೀಡಿಯೋ ವೈರಲ್‌ ಆಗಿತ್ತು.