ದೇಶದಲ್ಲಿ ಅತಿಹೆಚ್ಚು ಕೊರೋನಾ ಕೇಸ್ ಇರೋ ಜಿಲ್ಲೆಗಳ ಪಟ್ಟಿಯಲ್ಲಿ ಕರ್ನಾಟಕದ 1 ಜಿಲ್ಲೆ
ಕೊವಿಡ್-19 ಪ್ರಕರಣಗಳು ಕಂಡುಬಂದಿರುವ 10 ಜಿಲ್ಲೆಗಳನ್ನು ಕೇಂದ್ರ ಆರೋಗ್ಯ ಸಚಿವಾಲಯ ಗುರುತಿಸಿದ್ದು, ಇದರಲ್ಲಿ ಕರ್ನಾಟಕದ ಒಂದು ಜಿಲ್ಲೆ ಸಹ ಇದೆ.
ನವದೆಹಲಿ, (ಮಾ.24): ಭಾರತದಲ್ಲಿ ಕೊರೋನಾ ಎರಡನೇ ಅಲೆ ಅಬ್ಬರ ಜೋರಾಗಿದ್ದು, ಅತಿಹೆಚ್ಚು ಕೊವಿಡ್-19 ಪ್ರಕರಣಗಳು ಕಂಡುಬಂದಿರುವ 10 ಜಿಲ್ಲೆಗಳನ್ನು ಕೇಂದ್ರ ಆರೋಗ್ಯ ಸಚಿವಾಲಯ ಗುರುತಿಸಿದೆ.
ಪುಣೆ, ನಾಗ್ಪುರ, ಮುಂಬೈ, ಥಾಣೆ, ನಾಸಿಕ್, ಔರಂಗಾಬಾದ್, ನಂದೆಡ್, ಜಾಲ್ಗಾಂವ್, ಅಕೊಲ ಮತ್ತು ಬೆಂಗಳೂರು ನಗರ ಈ ಪಟ್ಟಿಯಲ್ಲಿದೆ. ಮಹಾರಾಷ್ಟ್ರದ 9 ಜಿಲ್ಲೆ ಹಾಗೂ ಕರ್ನಾಟಕದ ರಾಜಧಾನಿ ಬೆಂಗಳೂರು ಸಹ ಅತಿಹೆಚ್ಚು ಕೊರೋನಾ ಕೇಸ್ ಇರುವ ಜಿಲ್ಲೆಗಳ ಪಟ್ಟಿಯಲ್ಲಿದೆ.
ಕರ್ನಾಟಕದಲ್ಲಿ ತೀವ್ರ ಸ್ವರೂಪ ಪಡೆದುಕೊಂಡ ಕೊರೋನಾ 2ನೇ ಅಲೆ: ಮಾ.24ರ ಅಂಕಿ-ಸಂಖ್ಯೆ ನೋಡಿ
ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಗಣನೀಯ ಏರಿಕೆ ಕಂಡುಬರುತ್ತಿದೆ. ನಮ್ಮ ಪಕ್ಕದ ರಾಜ್ಯಗಳಾದ ಕೇರಳ, ಮಹಾರಾಷ್ಟ್ರದಲ್ಲಿ ಹೆಚ್ಚಾಗಿ ಕೊವಿಡ್-19 ಸೋಂಕಿನ ಪ್ರಕರಣಗಳು ವರದಿಯಾಗುತ್ತಿದ್ದು, ರಾಜ್ಯದಲ್ಲಿ ಆತಂಕ ಸೃಷ್ಟಿಸಿದೆ.
ಇನ್ನು ಕರ್ನಾಟಕದಲ್ಲಿ ಬುಧವಾರದ ಕೊರೋನಾ ಅಂಕಿ-ಸಂಖ್ಯೆ ನೋಡುವುದಾದರೆ ಕಳೆದ 24 ಗಂಟೆಗಳಲ್ಲಿ 2298 ಜನರಿಗೆ ಕೊರೋನಾ ಪಾಸಿಟಿವ್ ಕೇಸ್‌ಗಳು ಪತ್ತೆಯಾಗಿದ್ದು, 12 ಜನ ಸೋಂಕಿತರು ಮೃತಪಟ್ಟಿದ್ದಾರೆ.
ಈ ಸಂಬಂಧ ಕರ್ನಾಟಕ ರಾಜ್ಯ ಸರ್ಕಾರ ಇಂದು (ಮಾರ್ಚ್ 24) ಹೊಸ ಕೊವಿಡ್ ಮಾರ್ಗಸೂಚಿಗಳನ್ನು ಜಾರಿಗೊಳಿಸಿದೆ. ಮಾಸ್ಕ್ ಧರಿಸುವುದು ಹಾಗೂ ಸಾಮಾಜಿಕ ಅಂತರ ಪಾಲಿಸುವುದನ್ನು ಕಡ್ಡಾಯಗೊಳಿಸಿದೆ. ತಪ್ಪಿದಲ್ಲಿ ದಂಡ ವಿಧಿಸುವ ವಿಚಾರವನ್ನು ಕೂಡ ತಿಳಿಸಿದೆ.