ಕೊರೊನಾ ಮಹಾಮಾರಿಯ ಭೀತಿ ಮತ್ತೆ ಕಾಡತೊಡಗಿದೆ. ಬೆಂಗಳೂರಿನ ಹೊಸಕೋಟೆಯ 9 ತಿಂಗಳ ಮಗುವೊಂದಕ್ಕೆ ಕೊರೊನಾ ಸೋಂಕು ದೃಢಪಟ್ಟಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಈ ಮಗುವನ್ನು ಹೊಸಕೋಟೆಯ ಸ್ಥಳೀಯ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಮೇ 22ರಂದು ನಡೆಸಿದ ಕೊರೊನಾ ಪರೀಕ್ಷೆಯಲ್ಲಿ ಮಗುವಿಗೆ ಸೋಂಕು ಇರುವುದು ಖಚಿತವಾಗಿದೆ.
ಬೆಂಗಳೂರು (ಮೆ.23): ಕೊರೊನಾ ಮಹಾಮಾರಿಯ ಭೀತಿ ಮತ್ತೆ ಕಾಡತೊಡಗಿದೆ. ಬೆಂಗಳೂರಿನ ಹೊಸಕೋಟೆಯ 9 ತಿಂಗಳ ಮಗುವೊಂದಕ್ಕೆ ಕೊರೊನಾ ಸೋಂಕು ದೃಢಪಟ್ಟಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಈ ಮಗುವನ್ನು ಹೊಸಕೋಟೆಯ ಸ್ಥಳೀಯ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಮೇ 22ರಂದು ನಡೆಸಿದ ಕೊರೊನಾ ಪರೀಕ್ಷೆಯಲ್ಲಿ ಮಗುವಿಗೆ ಸೋಂಕು ಇರುವುದು ಖಚಿತವಾಗಿದೆ.
ಈ ಹಿನ್ನೆಲೆಯಲ್ಲಿ ವೈದ್ಯರ ಶಿಫಾರಸಿನಂತೆ ಮಗುವನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಾಣಿವಿಲಾಸ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೇ 22ರ ರಾತ್ರಿಯಿಂದ ಮಗುವಿಗೆ ಚಿಕಿತ್ಸೆ ಆರಂಭವಾಗಿದ್ದು, ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಕೇರಳದಲ್ಲಿ 182 ಕೊರೊನಾ ಪ್ರಕರಣ; ರಾಜ್ಯದಲ್ಲಿ ಎಚ್ಚರ:
ಇತ್ತೀಚಿನ ದಿನಗಳಲ್ಲಿ ಸಿಂಗಾಪುರ ಮತ್ತು ಹಾಂಕಾಂಗ್‌ನಲ್ಲಿ ಕೊರೊನಾದ ರೂಪಾಂತರಿ ಒಮಿಕ್ರಾನ್ ಜೆಎನ್1 ಉಪ ತಳಿಗಳಾದ ಎನ್‌ಬಿ.1.8 ಮತ್ತು ಎಲ್‌ಎಫ್.7 ಕೇಸ್‌ಗಳು ಹೆಚ್ಚುತ್ತಿರುವ ವರದಿಗಳು ಬಂದಿವೆ. ಇದೇ ವೇಳೆ ಕೇರಳದಲ್ಲಿ ಮೇ ತಿಂಗಳಲ್ಲಿ 182 ಕೊರೊನಾ ಪ್ರಕರಣಗಳು ದಾಖಲಾಗಿವೆ. ಈ ಸಂಖ್ಯೆಯ ಏರಿಕೆಯಿಂದಾಗಿ ಕೇರಳ ಸರಕಾರವು ಕೊಟ್ಟಾಯಂ, ಎರ್ನಾಕುಲಂ, ಮತ್ತು ತಿರುವನಂತಪುರ ಜಿಲ್ಲಾಡಳಿತಗಳಿಗೆ ಕಟ್ಟುನಿಟ್ಟಿನ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದೆ.
ಬೆಂಗಳೂರಿನಲ್ಲಿ ಕೊರೊನಾ ಕೇಸ್ ಪತ್ತೆಯಾದ ಹಿನ್ನೆಲೆಯಲ್ಲಿ ಸಾರ್ವಜನಿಕರು ಸ್ವಚ್ಛತೆ ಕಾಪಾಡಿಕೊಳ್ಳುವುದು, ಮಾಸ್ಕ್ ಧರಿಸುವುದು ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಅಗತ್ಯವಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.


