ಕನ್ನಡಿಗರಿಗೆ ಖಾಸಗಿ ಉದ್ಯಮದಲ್ಲಿ ಶೇ.100 ಉದ್ಯೋಗ ಖಾತ್ರಿ, ಶೀಘ್ರ ಗೊಂದಲಗಳಿಗೆ ತೆರೆ: ಎಂ ಬಿ ಪಾಟೀಲ

ಖಾಸಗಿ ಉದ್ಯಮಗಳಲ್ಲಿ ಕನ್ನಡಿಗರಿಗೆ ಕೆಲವು ಶ್ರೇಣಿಯ ಹುದ್ದೆಗಳನ್ನು ಶೇ.100 ಮೀಸಲಿಡಲಾಗುವುದು. ಇದರೊಂದಿಗೆ, ಉದ್ಯಮಗಳ ಹಿತಾಸಕ್ತಿಗಳನ್ನು ಸಹ ಕಾಪಾಡಲಾಗುವುದು ಎಂದು ಸಚಿವ ಎಂ.ಬಿ. ಪಾಟೀಲ ಹೇಳಿದ್ದಾರೆ.

Bengaluru private industry Kannadigas 100 percent job reservation confusion open soon says MB Patil sat

ಬೆಂಗಳೂರು (ಜು.17): ಖಾಸಗಿ ಉದ್ಯಮಗಳಲ್ಲಿ ಕೂಡ ಕನ್ನಡಿಗರಿಗೆ ಕೆಲವು ಶ್ರೇಣಿಯ ಹುದ್ದೆಗಳನ್ನು ನೂರಕ್ಕೆ ನೂರರಷ್ಟು ಮೀಸಲಿಡಲಾಗುವುದು. ಇದೇ ಸಂದರ್ಭದಲ್ಲಿ ಉದ್ಯಮಗಳ ಹಿತಾಸಕ್ತಿಗಳನ್ನು ಸಹ ಕಾಪಾಡಲಾಗುವುದು ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಬುಧವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಸಂಬಂಧ ಸರಕಾರವು ವಿಧೇಯಕಕ್ಕೆ ಅನುಮೋದನೆ ನೀಡಿದೆ. ಈ ವಿಚಾರವಾಗಿ ಸದ್ಯದಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ, ಐಟಿ-ಬಿಟಿ, ಕಾನೂನು ಮತ್ತು ಕಾರ್ಮಿಕ ಸಚಿವರುಗಳ ಜೊತೆ ಚರ್ಚಿಸಿ, ಗೊಂದಲಗಳಿಗೆ ತೆರೆ ಎಳೆಯಲಾಗುವುದು. ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗ ಸಿಗಲೇಬೇಕು ಎನ್ನುವುದರಲ್ಲಿ ಎರಡು ಮಾತಿಲ್ಲ. ತಯಾರಿಕಾ ವಲಯ ಮತ್ತು ಕೈಗಾರಿಕಾ ಕ್ರಾಂತಿಯ ಉಜ್ವಲ ಅವಕಾಶಗಳನ್ನು ನಾವು ಕಳೆದುಕೊಳ್ಳುವಂತಿಲ್ಲ ಎಂದು ಹೇಳಿದರು.

ರಾಜ್ಯದ ಖಾಸಗಿ ಕಂಪನಿಗಳಲ್ಲೂ ಕನ್ನಡಿಗರಿಗೆ ಮೀಸಲಾತಿ: ಸಂಪುಟ ಒಪ್ಪಿಗೆ

ಸ್ಥಳೀಯರ ಹಿತಾಸಕ್ತಿಗಳನ್ನು ಕಾಪಾಡಲು ಸರಕಾರ ಬದ್ಧವಾಗಿದೆ. ಹಾಗೆಯೇ ಉದ್ಯಮ ವಲಯದವರ ಹಿತಾಸಕ್ತಿಗೂ ಧಕ್ಕೆಯಾಗದಂತೆ ನಿಗಾ ವಹಿಸಲಾಗುವುದು. ಈ ಕುರಿತು ಸಂಬಂಧಪಟ್ಟ ಎಲ್ಲರ ಜೊತೆಗೂ ಮಾತುಕತೆ ನಡೆಸಲಾಗುವುದು. ಈ ವಿಷಯದಲ್ಲಿ ಯಾವುದೇ ಆತಂಕ ಬೇಕಿಲ್ಲ. ಕರ್ನಾಟಕವು ಪುರೋಗಾಮಿ ರಾಜ್ಯವಾಗಿದೆ. 'ಗ್ಲೋಬಲ್ ಚೈನಾ ಒನ್' ನೀತಿಯಿಂದ ಒದಗಿ ಬಂದಿರುವ ಸದವಕಾಶವನ್ನು ನಾವು ಕಳೆದುಕೊಳ್ಳುವಂತಿಲ್ಲ. ಇದು ಶತಮಾನಕ್ಕೊಮ್ಮೆ ಒದಗಿ ಬರುವ ಅವಕಾಶ ಎಂದು ತಿಳಿಸಿದರು.

ಬೆಂಗಳೂರು ಜಿಟಿ ವರ್ಲ್ಡ್ ಮಾಲ್ ರೈತನಿಗೆ 1 ಕೋಟಿ ರೂ. ಮಾನನಷ್ಟ ಪರಿಹಾರ ಕೊಡಬೇಕು; ಪ್ರಣವಾನಂದ ಶ್ರೀ ಆಗ್ರಹ

ರಾಜ್ಯದ ಎಲ್ಲಾ ಖಾಸಗಿ ಕೈಗಾರಿಕೆಗಳಲ್ಲಿ "ಸಿ ಮತ್ತು ಡಿ" ದರ್ಜೆಯ ಹುದ್ದೆಗಳಿಗೆ ನೂರಕ್ಕೆ ನೂರರಷ್ಟು ಕನ್ನಡಿಗರ ನೇಮಕಾತಿಯನ್ನು ಕಡ್ಡಾಯಗೊಳಿಸುವ ವಿಧೇಯಕಕ್ಕೆ ನಿನ್ನೆ ನಡೆದ ಸಚಿವ ಸಂಪುಟ ಸಭೆಯು ಒಪ್ಪಿಗೆ ನೀಡಿದೆ. ಕನ್ನಡಿಗರು ಕನ್ನಡದ ನೆಲದಲ್ಲಿ ಉದ್ಯೋಗ ವಂಚಿತರಾಗುವುದನ್ನು ತಪ್ಪಿಸಿ, ತಾಯ್ಕಾಡಿನಲ್ಲಿ ನೆಮ್ಮದಿಯ ಬದುಕು ಕಟ್ಟಿಕೊಳ್ಳಲು ಅವಕಾಶ ಕಲ್ಪಿಸಬೇಕು ಎಂಬುದು ನಮ್ಮ ಸರ್ಕಾರದ ಆಶಯ. ನಮ್ಮದು ಕನ್ನಡಪರವಾದ ಸರ್ಕಾರ. ಕನ್ನಡಿಗರ ಹಿತ ಕಾಯುವುದು ನಮ್ಮ ಆದ್ಯತೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದರು. ಆದರೆ, ಇದಕ್ಕೆ ಖಾಸಗಿ ಕಂಪನಿ ಉದ್ಯಮಿಗಳಿಂದ ವಿರೋಧ ವ್ಯಕ್ತವಾಗದ ಬೆನ್ನಲ್ಲಿಯೇ ಟ್ವೀಟ್ ಡಿಲೀಟ್ ಮಾಡಿದ್ದಾರೆ. ಈಗ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಮತ್ತೆ ಚರ್ಚೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿರುವುದು ಸರ್ಕಾರದ ನಡೆಯ ಬಗ್ಗೆ ಹಲವು ಗೊಂದಲಗಳಿಗೆ ಕಾರಣವಾಗಿದೆ.

Latest Videos
Follow Us:
Download App:
  • android
  • ios