ಬೆಂಗಳೂರು ಮಳೆಗೆ ಮತ್ತೊಂದು ಬಲಿ, ಜೆಪಿ ನಗರ ಬಳಿ ವಿದ್ಯುತ್ ಕಂಬ ಸ್ಪರ್ಶಿಸಿ ವ್ಯಕ್ತಿ ಸಾವು, ಕಾಂಪೌಂಡ್ ಕುಸಿದು 7 ಮಂದಿ ಮತೃಪಟ್ಟ ಬೆನ್ನಲ್ಲೇ ಇದೀಗ ವಿದ್ಯುತ್ ಸ್ಪರ್ಶಿಸಿ ಸಾವಾಗಿದೆ. ಒಂದೇ ಮಳೆ 8 ಮಂದಿಯನ್ನು ಬಲಿ ಪಡೆದಿದೆ.

ಬೆಂಗಳೂರು (ಏ.29) ಬೆಂಗಳೂರಿನಲ್ಲಿ ಸುರಿದ ಭಾರಿ ಮಳೆ ಜನರನ್ನು ಬೆಚ್ಚಿ ಬೀಳಿಸಿದೆ. ಶಿವಾಜಿನಗರದ ಬೌರಿಂಗ್ ಆಸ್ಪತ್ರೆ ಬಳಿ ಕಾಂಪೌಂಡ್ ಕುಸಿದು 7 ಮಂದಿ ಮೃತಪಟ್ಟ ಕರಾಳ ಘಟನೆ ಬೆನ್ನಲ್ಲೇ ಇದೀಗ ಜೆಪಿ ನಗರದ ಬಳಿ ವಿದ್ಯುತ್ ಸ್ಪರ್ಶಿಸಿ ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ನಡೆದಿದೆ. 30 ರಿಂದ 35 ವರ್ಷದ ವ್ಯಕ್ತಿಗೆ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟಿದ್ದಾರೆ. ಈ ಮೂಲಕ ಬೆಂಗಳೂರಿನ ರಣ ಮಳೆಗೆ ಮೃತಪಟ್ಟವರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ.

Add Asianetnews Kannada as a Preferred SourcegooglePreferred

ಜೆಪಿ ನಗರದ 15ನೇ ಕ್ರಾಸ್ ಬಳಿ ವ್ಯಕ್ತಿಯೊಬ್ಬ ವಿದ್ಯುತ್ ಕಂಬ ಹಿಡಿದು ಸಾವು ಕಂಡಿದ್ದಾರೆ. ಭಾರಿ ಮಳೆಯಿಂದ ವಿದ್ಯುತ್ ಕಂಬದಲ್ಲಿ ವಿದ್ಯುತ್ ಹರಿದಿದೆ. ಇದೇ ದಾರಿಯಲ್ಲಿ ಬರುತ್ತಿದ್ದ ವ್ಯಕ್ತಿ ಕಂಬ ಸ್ಪರ್ಶಿಸಿ ಸಾವು ಕಂಡಿದ್ದಾರೆ. ಜೆ ಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಘಟನೆ ನಡೆದು ಗಂಟೆಗಳಾದರೂ ಅಧಿಕಾರಿಗಳು ನಾಪತ್ತೆ

ಭಾರಿ ಮಳೆಯಲ್ಲಿ ವಿದ್ಯುತ್ ಸ್ಪರ್ಶಿಸಿ ವ್ಯಕ್ತಿಯೊಬ್ಬ ಮೃತಪಟ್ಟು ಗಂಟೆಗಳು ಕಳೆದರೂ ಕೆಇಬಿ ಅಧಿಕಾರಿಗಳು, ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ತೆರಳಿಲ್ಲ. ಸ್ಥಳಕ್ಕೆ ಜೆಪಿ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹ ವಶಕ್ಕೆ ಪಡೆದಿದ್ದಾರೆ. ಇತ್ತ ಸ್ಥಳೀಯ ಸಿಸಿಟಿವಿ ದೃಶ್ಯಗಳ ಪರಿಶೀಲನೆ ನಡೆಸಿದ್ದಾರೆ.

ಕೌಂಪೌಂಡ್ ಕುಸಿದ ದುರ್ಘಟನೆ

ಈ ಬಾರಿಯ ಒಂದೇ ಮಳೆಗೆ ಬೌರಿಂಗ್ ಆಸ್ಪತ್ರೆ ಬಳಿಯ ಕೌಂಪೌಂಡ್ ಕುಸಿದ ದುರ್ಘಟನೆ ಬೆಂಗಳೂರಿಗೆ ಕಪ್ಪು ಚುಕ್ಕೆಯಾಗಿದೆ. ಮೃತರ ಪೈಕಿ ಮೂವರು ಕರ್ನಾಟಕ ಮೂಲದವರಾಗಿದ್ದರೆ, ಇಬ್ಬರು ಕೇರಳ ಹಾಗೂ ಇತ್ತಿಬ್ಬರು ಅಸ್ಸಾಂ ಹಾಗೂ ಉತ್ತರ ಪ್ರದೇಶದ ಮೂಲದವರು. ಈ ಪೈಕಿ 6 ವರ್ಷದ ಮುಸಾವೀರ್ ಹಾಗೂ 19 ವರ್ಷದ ನಸೀಮುಲ್ಲಾ ಈ ಘಟನೆಯಲ್ಲಿ ಮೃತಪಟ್ಟಿದ್ದಾರೆ.

ಘಟನಾ ಸ್ಥಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ಪರಿಶೀಲನೆ ನಡೆಸಿದ್ದಾರೆ. ಇದೇ ವೇಳೆ ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಇದೇ ವೇಳೆ ಗಾಯಾಳುಗಳಿಗೆ ಉಚಿತ ಚಿಕಿತ್ಸೆಗೆ ಸೂಚಿಸಿದ್ದಾರೆ. ಸಿದ್ದರಾಮಯ್ಯ ಬಳಿಕ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದೀಗ ವಿಪಕ್ಷ ನಾಯಕ ಆರ್ ಅಶೋಕ್, ಸಂಸದ ಪಿಸಿ ಮೋಹನ್ ಕೂಡ ಭೇಟಿ ನೀಡಿದ್ದಾರೆ.