Asianet Suvarna News Asianet Suvarna News

ಸಿಲಿಕಾನ್ ಸಿಟಿ ಮಂದಿ ಮತ್ತೆ ಬಿಸಿಲಿಗೆ ಹೈರಾಣು! ಏಪ್ರಿಲ್‌ನಲ್ಲೇ  2ನೇ ಬಾರಿ 37.6 ಡಿಗ್ರಿ ಸೆ.ದಾಖಲು!

ರಾಜಧಾನಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಬಿಸಿಲ ತಾಪ ಹೆಚ್ಚಾಗುತ್ತಿದ್ದು, ಮಂಗಳವಾರ ಮತ್ತೆ 37.6 ಡಿಗ್ರಿ ಸೆಲ್ಸಿಯಸ್‌ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಇದು ಪ್ರಸಕ್ತ ಏಪ್ರಿಲ್‌ ತಿಂಗಳಿನಲ್ಲಿ ದಾಖಲಾದ ಎರಡನೇ ಅತಿ ಹೆಚ್ಚು ಗರಿಷ್ಠ ಉಷ್ಣಾಂಶ.

Bengaluru record highest temperature in the month of April rav
Author
First Published Apr 25, 2024, 11:35 AM IST

 ಬೆಂಗಳೂರು (ಏ.25) : ರಾಜಧಾನಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಬಿಸಿಲ ತಾಪ ಹೆಚ್ಚಾಗುತ್ತಿದ್ದು, ಮಂಗಳವಾರ ಮತ್ತೆ 37.6 ಡಿಗ್ರಿ ಸೆಲ್ಸಿಯಸ್‌ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಇದು ಪ್ರಸಕ್ತ ಏಪ್ರಿಲ್‌ ತಿಂಗಳಿನಲ್ಲಿ ದಾಖಲಾದ ಎರಡನೇ ಅತಿ ಹೆಚ್ಚು ಗರಿಷ್ಠ ಉಷ್ಣಾಂಶ.

ಮಾರ್ಚ್‌ ಕೊನೆಯ ವಾರದಿಂದ ನಗರದ ತಾಪಮಾನ ಭಾರೀ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ಏಪ್ರಿಲ್‌ ಮೊದಲ ವಾರದಲ್ಲಿ ಮೊದಲ ಬಾರಿಗೆ 37 ಡಿಗ್ರಿ ಸೆಲ್ಸಿಯಸ್‌ನ ಗಡಿ ದಾಟಿತ್ತು. ಏ.6ರಂದು 37.6 ಡಿಗ್ರಿ ಸೆಲ್ಸಿಯಸ್‌ ದಾಖಲಾಗುವ ಮೂಲಕ ನಗರದಲ್ಲಿ ಎಂಟು ವರ್ಷದ ಏಪ್ರಿಲ್‌ನಲ್ಲಿ ದಾಖಲಾದ ಗರಿಷ್ಠ ಉಷ್ಣಾಂಶವಾಗಿತ್ತು. 

ಬೇಸಿಗೆ ಬಿಸಿಲಿಗೆ ಬಳಲಿದ ಜನತೆಗೆ ಟ್ರಾಫಿಕ್ ಪೊಲೀಸರಿಂದ ರಿಲೀಫ್; ಮಧ್ಯಾಹ್ನ ಟ್ರಾಫಿಕ್ ಸಿಗ್ನಲ್‌ಗಳು ಸ್ವಿಚ್ ಆಫ್

ಬಳಿಕ ಅದೇ ಆಸು ಪಾಸಿನಲ್ಲಿ ಉಷ್ಣಾಂಶ ದಾಖಲಾಗುತ್ತಿತ್ತು. ಏ.19 ರಂದು ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 38 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿತ್ತು. ಪ್ರಸಕ್ತ ವರ್ಷದ ಏಪ್ರಿಲ್‌ ನಲ್ಲಿ ದಾಖಲಾದ ಗರಿಷ್ಠ ಉಷ್ಣತೆಯಾಗಿದೆ ಎಂದು ಹವಾಮಾನ ಇಲಾಖೆ ಅಂಕಿ ಅಂಶದಲ್ಲಿ ತಿಳಿಸಲಾಗಿದೆ.2016ರಲ್ಲಿ 39.2 ಡಿಗ್ರಿ ಸೆಲ್ಸಿಯಸ್‌ ಗರಿಷ್ಠ ಉಷ್ಣಾಂಶ ಸಾರ್ವಕಾಲಿಕ ದಾಖಲೆಯಾಗಿತ್ತು. ಆ ಬಳಿಕ 2017ರಲ್ಲಿ 37.0, 2018ರಲ್ಲಿ 34.9, 2019ರಲ್ಲಿ 37.0, 2020ರಲ್ಲಿ 36.4, ಹಾಗೂ 2021ರಲ್ಲಿ 37.2 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿತ್ತು ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಂಗಳವಾರ 37.5 ಡಿಗ್ರಿ ಸೆಲ್ಸಿಯಸ್‌ ಗರಿಷ್ಠ ಉಷ್ಣಾಂಶ, ಎಚ್‌ಎಎಲ್‌ ವಿಮಾನ ನಿಲ್ದಾಣದಲ್ಲಿ 36.6 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ.

ಬಿರು ಬಿಸಿಲಿಗೆ ತತ್ತರಿಸಿದ ಕೊಡಗು ಜಿಲ್ಲೆ, ಗರಿಷ್ಟ 34 ಉಷ್ಣಾಂಶ ದಾಖಲು!

ಕಳೆದ ಐದು ದಿನಗಳ ನಗರದ ಗರಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)ದಿನಗರಿಷ್ಠ ಉಷ್ಣಾಂಶ ರಾಜ್ಯ ಹವಾಮಾನ ಇಲಾಖೆಯಿಂದ ಮಾಹಿತಿ

Follow Us:
Download App:
  • android
  • ios