ಬೆಂಗಳೂರು, (ಆ.12):  ಫೇಸ್‌ಬುಕ್‌ನಲ್ಲಿ ಹಾಕಲಾದ ವಿವಾದಿತ ಪೋಸ್ಟ್‌ಗೆ ಸಂಬಂಧಪಟ್ಟಂತೆ ಪುಲಿಕೇಶಿ ನಗರ ರಣರಂಗವಾಗಿದೆ. ಡಿ.ಜಿ.ಹಳ್ಳಿ ಪೊಲೀಸ್‌ ಠಾಣೆ ಸುತ್ತಮುತ್ತ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ದುಷ್ಕರ್ಮಿಗಳು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸುತ್ತಿದ್ದು, ಪೊಲೀಸ್‌ ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ.

ಈ ಸಂಬಂಧ ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದು, ಉತ್ತರ ಪ್ರದೇಶದ ಮಾದರಿಯಲ್ಲಿ ಕಾನೂನು ತನ್ನಿ ಎಂದು ಮನವಿ ಮಾಡಿಕೊಂಡಿದ್ದಾರೆ.

ಕರ್ನಾಟಕದಲ್ಲಿ ಉತ್ತರ ಪ್ರದೇಶ, ಕೇರಳ ಮಾದರಿಯ ಕಠಿಣ ರೂಲ್ಸ್...!

ಸರ್ಕಾರದ ಆಸ್ತಿ ದ್ವಂಸ ಮಾಡಿದವರ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುವ ಕಾನೂನು ಉತ್ತರ ಪ್ರದೇಶದಲ್ಲಿದೆ. ಇಂತಹ ಕಾನೂನು ರಾಜ್ಯದಲ್ಲೂ ಜಾರಿಗೆ ತರಬೇಕು ಎಂದು ಸಂಸದ ತೇಜಸ್ವಿ ಸೂರ್ಯ ಆಗ್ರಹಿಸಿದ್ದಾರೆ.

 ಸರ್ಕಾರದ ಆಸ್ತಿ ದ್ವಂಸ ಮಾಡಿದವರ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುವ ಕಾನೂನು ಉತ್ತರ ಪ್ರದೇಶದಲ್ಲಿದೆ. ಇಂತಹ ಕಾನೂನು ರಾಜ್ಯದಲ್ಲೂ ಜಾರಿಗೆ ತರಬೇಕು ಎಂದು ತೇಜಸ್ವಿ ಸೂರ್ಯ, ಸಿಎಂಗೆ ಪತ್ರದ ಮೂಲಕ ಒತ್ತಾಯಿಸಿದ್ದಾರೆ.

ಈ ಹಿಂದೆ ಪಾದರಾಯನಪುರ ಗಲಭೆ ವೇಳೆಯಲ್ಲೂ ಉತ್ತರ ಪ್ರದೇಶದ ಕಾನೂನು ರಾಜ್ಯದಲ್ಲಿ ಅಗತ್ಯವಿದೆ ಎನ್ನುವ ಕೂಗು ಕೇಳಿಬಂದಿದ್ದವು. ಈ ಬಗ್ಗೆ ರಾಜ್ಯ ಸರ್ಕಾರ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ಕೊನೆಗೆ ಅದನ್ನು ಅಲ್ಲಿಗೆ ಕೈಬಿಟ್ಟಿತ್ತು.