Asianet Suvarna News Asianet Suvarna News

ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ ಒಂದು ವಾರದಲ್ಲಿ ಅಂತಿಮ ಸ್ಥಳ ಘೋಷಣೆ: ಸಚಿವ ಎಂ.ಬಿ. ಪಾಟೀಲ

ಬೆಂಗಳೂರಿಗೆ 2ನೇ ವಿಮಾನ ನಿಲ್ದಾಣದ ನಿರ್ಮಾಣಕ್ಕೆ 5 ಸ್ಥಳ ಅಂತಿಮ ಮಾಡಲಾಗಿದ್ದು, ಇನ್ನೊಂದು ವಾರದಲ್ಲಿ ಒಂದು ಸ್ಥಳ ಅಂತಿಮಗೊಳಿಸಿ ಘೋಷಣೆ ಮಾಡಲಾಗುವುದು ಎಂದು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ತಿಳಿಸಿದ್ದಾರೆ.

Bengaluru Second Airport Location to Be Finalised Soon Says MB Patil sat
Author
First Published Oct 18, 2024, 8:36 PM IST | Last Updated Oct 18, 2024, 8:37 PM IST

ಬೆಂಗಳೂರು (ಅ.18): ಬೆಂಗಳೂರಿಗೆ 2ನೇ ವಿಮಾನ ನಿಲ್ದಾಣದ ನಿರ್ಮಾಣಕ್ಕೆ 5 ಸ್ಥಳ ಅಂತಿಮ ಮಾಡಲಾಗಿದ್ದು, ಇನ್ನೊಂದು ವಾರದಲ್ಲಿ ಒಂದು ಸ್ಥಳ ಅಂತಿಮಗೊಳಿಸಿ ಘೋಷಣೆ ಮಾಡಲಾಗುವುದು ಎಂದು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ತಿಳಿಸಿದ್ದಾರೆ.

ಶುಕ್ರವಾರ ವಿಧಾನಸಭಾ ಕಚೇರಿಯಲ್ಲಿ ಕರೆದಿದ್ದ ಮಹತ್ತ್ವದ ಸಭೆಯ ನಂತರ ಮಾತನಾಡಿದ ಪಾಟೀಲ ಅವರು,ಜಾಗತಿಕ ಮಟ್ಟದಲ್ಲಿ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಬೆಂಗಳೂರು ಮಹಾನಗರದ ಸಾರ್ವಜನಿಕರು ಮತ್ತು ಉದ್ಯಮಗಳಿಗೆ ಇನ್ನೊಂದು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಅತ್ಯಗತ್ಯವಾಗಿದೆ. ಇದಕ್ಕಾಗಿ ಸರಕಾರವು ಐದು ಸ್ಥಳಗಳನ್ನು ಗುರುತಿಸಿದೆ. ಆದರೆ ಇವುಗಳ ಪೈಕಿ ಯಾವುದನ್ನೂ ಆಖೈರು ಮಾಡಿಲ್ಲ.  ಈ ಸಂಬಂಧ ಇನ್ನೊಂದು ವಾರದಲ್ಲಿ ಸಭೆ ಸೇರಿ, ಅಂತಿಮ ತೀರ್ಮಾನಕ್ಕೆ ಬರಲಾಗುವುದು ಎಂದಿದ್ದಾರೆ.

ಎರಡನೆಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸ್ಥಳವನ್ನು ಈಗಾಗಲೇ ತೀರ್ಮಾನಿಸಲಾಗಿದೆ ಎನ್ನುವ ವರದಿಗಳಿಗೆ ಆಧಾರವಿಲ್ಲ. ಡಾಬಸಪೇಟೆ, ನೆಲಮಂಗಲ, ಬಿಡದಿ, ಹಾರೋಹಳ್ಳಿ ಸೇರಿದಂತೆ ಒಟ್ಟು ಐದು ಸ್ಥಳಗಳನ್ನು ನಾವು ಮುಕ್ತವಾಗಿ ಇಟ್ಟುಕೊಂಡಿದ್ದೇವೆ. ಇವತ್ತು ಇನ್ನೂ ಒಂದು ಸ್ಥಳದ ಬಗ್ಗೆ ಯೂ ಚರ್ಚೆ ಆಗಿದೆ. ಇವುಗಳ ಬಗ್ಗೆ ವಸ್ತುಸ್ಥಿತಿ ಆಧರಿಸಿ ಮತ್ತು ಸಾಧಕ-ಬಾಧಕಗಳನ್ನು ಗಮನಿಸಿ, ವರದಿ ಕೊಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಇನ್ನೊಂದು ವಾರದಲ್ಲಿ ಮತ್ತೊಂದು ಸುತ್ತು ಸಭೆ ಸೇರಿ, ಸ್ಥಳವನ್ನು ಬಹಿರಂಗ ಮಾಡಲಾಗುವುದು’ ಎಂದು ವಿವರಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರಿಗೆ 2ನೇ ವಿಮಾನ ನಿಲ್ದಾಣಕ್ಕೆ 7 ಸ್ಥಳಗಳು ಆಯ್ಕೆ; ಸರ್ಕಾರದಿಂದ ಗಂಭೀರ ಚರ್ಚೆ!

ವಿಮಾನ ನಿಲ್ದಾಣಕ್ಕೆ ಸ್ಥಳ ಆಯ್ಕೆ ಮಾಡುವಲ್ಲಿ ಯಾರಿಗೂ ರಾಜಕೀಯ ಹಿತಾಸಕ್ತಿಗಳೇನಿಲ್ಲ. ಬೆಂಗಳೂರಿನ ಜನತೆಗೆ ಮತ್ತು ಉದ್ಯಮಿಗಳ ಅನುಕೂಲವಷ್ಟೇ ಇಲ್ಲಿ ಮುಖ್ಯ. ಇದರಿಂದ ನಮ್ಮ ಆರ್ಥಿಕ ಬೆಳವಣಿಗೆಗೆ ಒಳ್ಳೆಯ ಕೊಡುಗೆ ಬರಬೇಕು. ಇದರ ಜೊತೆ ನಾವು ರಾಜಿ ಮಾಡಿಕೊಳ್ಳುವುದಿಲ್ಲ. ಅಂತಿಮವಾಗಿ ಬೆಂಗಳೂರು ನಗರವು ಇನ್ನೊಂದು ಸ್ತರಕ್ಕೆ ಏರಬೇಕು ಎನ್ನುವುದಷ್ಟೇ ಸರಕಾರದ ಗುರಿಯಾಗಿದೆ. ಎರಡನೆಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ನಮಗೆ ಸ್ಥಳಾವಕಾಶಕ್ಕೇನೂ ಕೊರತೆ ಇಲ್ಲ. ಬೆಂಗಳೂರಿನ ಸುತ್ತಮುತ್ತಲೂ ಜಾಗವಿದ್ದು, ಇದರಲ್ಲಿ ಸೂಕ್ತವಾದುದನ್ನು ಆಯ್ಕೆ ಮಾಡಲಾಗುವುದು ಎಂದು ಅವರು ವಿವರಿಸಿದ್ದಾರೆ.

ಇದನ್ನೂ ಓದಿ: ರಾಯಚೂರು, ಹಾಸನ, ವಿಜಯಪುರ ವಿಮಾನ ನಿಲ್ದಾಣ ಕಾಮಗಾರಿಗಳಿಗೆ ಚುರುಕು ಕೊಟ್ಟ ಎಂ.ಬಿ. ಪಾಟೀಲ!

ಮೆಟ್ರೋ ಕೇಳಿರುವ ಜಾಗ ನಮ್ಮದಲ್ಲ: ಮೆಟ್ರೋ ರೈಲು ಸಂಸ್ಥೆಯವರು (ಬಿಎಂಆರ್ಸಿಎಲ್) ಹೆಬ್ಬಾಳದ ಬಳಿ ಬಹುಮಾದರಿ ಸಾರಿಗೆ ಜಂಕ್ಷನ್ ರೂಪಿಸಲು 45 ಎಕರೆ ಜಾಗ ಕೇಳಿದ್ದಾರೆ. ಆದರೆ, ಆ ಜಾಗ ಕೆಐಎಡಿಬಿ ವಶದಲ್ಲಿಲ್ಲ. ಅದನ್ನು 2001ರಲ್ಲಿಯೇ ಸಿಂಗಲ್ ಯೂನಿಟ್ ಕಾಂಪ್ಲೆಕ್ಸ್’ ಪರಿಕಲ್ಪನೆಯಡಿ ಖಾಸಗಿ ಸಂಸ್ಥೆಗೆ ಸ್ವಾಧೀನ ಪಡಿಸಿ ಕೊಡಲಾಗಿದೆ. ಆದ್ದರಿಂದ ಮೆಟ್ರೋ ನಿಗಮಕ್ಕೆ ಆ ಸಂಸ್ಥೆಯೊಂದಿಗೆ ಮಾತುಕತೆ ನಡೆಸಲು ತಿಳಿಸಲಾಗಿದೆ ಎಂದು ಸಚಿವರು ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುಗಮ ಸಂಚಾರ ವ್ಯವಸ್ಥೆ ಬರಬೇಕು ಎನ್ನುವುದು ಸರಕಾರದ ಆಶಯವಾಗಿದೆ. ಆದರೆ, ಮೆಟ್ರೋದವರು ಕೇಳಿರುವ ಜಾಗ ಖಾಸಗಿಯವರ ಸ್ವತ್ತಾಗಿದೆ. ಇದರಲ್ಲಿ ಕೆಐಎಡಿಬಿ ಪಾತ್ರವೇನೂ ಇಲ್ಲ. ಬಹುಮಾದರಿ ಸಾರಿಗೆ ಸಂಕೀರ್ಣವು ಒಂದೇ ಕಡೆ ಬಂದರೆ ಜನರಿಗೂ ಅನುಕೂಲವಾಗಲಿದೆ. ಇದರಿಂದ ವಾಹನ ದಟ್ಟಣೆಯೂ ಕಡಿಮೆಯಾಗುವ ಸಂಭವವಿದೆ ಎಂದು ಹೇಳಿದರು.

Latest Videos
Follow Us:
Download App:
  • android
  • ios