ಚಿಕ್ಕಬಳ್ಳಾಪುರ : ಬೆಂಗಳೂರಿನ ಪೊಲೀಸ್ ಕೇಂದ್ರ ಕಚೇರಿಯ ಎಸ್‌ಪಿ ಯೊಬ್ಬರ ಕಾರಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಭಾನುವಾರ ನಡೆದಿದೆ. ಕೇಂದ್ರ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಸ್‌ಪಿ ರಾಧಿಕಾ, ಅವರ ಪತಿ, ಮಗಳು, ತಾಯಿ, ಮತ್ತೊಬ್ಬ ಮಹಿಳೆಗೆ ಸಣ್ಣಪುಟ್ಟ ಗಾಯಗಳಾಗಿವೆ.

ದೊಡ್ಡಬಳ್ಳಾಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮತ್ತೊಂದು ಕಾರಿನಲ್ಲಿ ಬೆಂಗಳೂರಿಗೆ ಸುರಕ್ಷಿತವಾಗಿ ತಲುಪಿಸಿದ್ದಾರೆ. ರಾಧಿಕಾ ಅವರು ಕುಟುಂಬದೊಂದಿಗೆ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ವಿಧುರಾಶ್ವತ್ಥದಲ್ಲಿ ಪೂಜೆ ಮುಗಿಸಿಕೊಂಡು ವಾಪಸ್ ಆಗುತ್ತಿದ್ದರು. 

ಬೆಂಗಳೂರಿಗೆ ವಾಪಸ್ ಆಗುತ್ತಿದ್ದ ವೇಳೆ ಗೌರಿಬಿದ ನೂರು ತಾಲೂಕಿನ ಕಲ್ಲಿನಾಯಕನಹಳ್ಳಿ ಸಮೀಪ ಖಾಸಗಿ ಬಸ್ ಡಿಕ್ಕಿಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಇನ್ನೋವಾ ಕಾರಿನ ಮುಂಭಾಗ ತೀವ್ರ ಜಖಂ ಆಗಿದೆ. ಬಸ್ ಚಾಲಕ ಪರಾರಿಯಾಗಿದ್ದಾನೆ.