ನಗರದಲ್ಲಿ ನೀರಿನ ಕೊರತೆ ಇಲ್ಲ ಎಂದ ಡಿಕೆಶಿ; ಇತ್ತ ಬೆಳಗಿನ ಟಾಯ್ಲೆಟ್‌ಗೂ ನೀರಿಲ್ಲದೆ ಬೆಂಗಳೂರು ತೊರೆಯುತ್ತಿದ್ದಾರೆ ಟೆಕ್ಕಿಗಳು!
ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ನೀರಿನ ಬಿಕ್ಕಟ್ಟು ಉಲ್ಬಣಗೊಳ್ಳುತ್ತಿದ್ದು, ಅನೇಕ ಟೆಕ್ ಉದ್ಯೋಗಿಗಳು ತಾತ್ಕಾಲಿಕವಾಗಿ ನಗರವನ್ನು ತೊರೆಯುತ್ತಿದ್ದಾರೆ ಮತ್ತು ಅನೇಕರು ಹುಟ್ಟೂರುಗಳಿಗೆ ಹೋಗುತ್ತಿದ್ದಾರೆ. ಆದರೆ, ರಾಜ್ಯ ಸರ್ಕಾರ ಬೆಂಗಳೂರಿನಲ್ಲಿ ನೀರಿನ ಕೊರತೆ ಇಲ್ಲ, ನಗರದಲ್ಲಿ ನೀರಿನ ಕೊರತೆಯ ಬಗ್ಗೆ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ದೂರಿದೆ.
ಬೆಂಗಳೂರು (ಮಾ.12): ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ನೀರಿನ ಬಿಕ್ಕಟ್ಟು ಉಲ್ಬಣಗೊಳ್ಳುತ್ತಿದ್ದು, ಅನೇಕ ಟೆಕ್ ಉದ್ಯೋಗಿಗಳು ತಾತ್ಕಾಲಿಕವಾಗಿ ನಗರವನ್ನು ತೊರೆಯುತ್ತಿದ್ದಾರೆ ಮತ್ತು ಅನೇಕರು ಹುಟ್ಟೂರುಗಳಿಗೆ ಹೋಗುತ್ತಿದ್ದಾರೆ. ಆದರೆ, ರಾಜ್ಯ ಸರ್ಕಾರ ಬೆಂಗಳೂರಿನಲ್ಲಿ ನೀರಿನ ಕೊರತೆ ಇಲ್ಲ, ನಗರದಲ್ಲಿ ನೀರಿನ ಕೊರತೆಯ ಬಗ್ಗೆ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ದೂರಿದೆ.
ನಗರದಲ್ಲಿ ನೀರಿನ ಬಿಕ್ಕಟ್ಟು ಎಷ್ಟರ ಮಟ್ಟಿಗೆ ತಲೆದೋರಿದೆ ಎಂದರೆ ಬಹುರಾಷ್ಟ್ರೀಯ ಸಂಸ್ಥೆಗಳ ಅನೇಕ ಟೆಕ್ ಉದ್ಯೋಗಿಗಳು ಮೈಸೂರಿನಲ್ಲಿ ಆಶ್ರಯ ಪಡೆದಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿರುವ ಕೆಆರ್ ಪುರಂನ ಅಯ್ಯಪ್ಪ ನಗರದಲ್ಲಿ ವಾಸವಾಗಿರುವ ಉದ್ಯೋಗಿ ಸುಮಂತ, ತಾವು ಮತ್ತು ತಮ್ಮ ಪತ್ನಿ ಅಪಾರ್ಟ್‌ಮೆಂಟ್ ಸಮುಚ್ಚಯದಲ್ಲಿ ತೀವ್ರ ನೀರಿನ ಕೊರತೆಯನ್ನು ಎದುರಿಸುತ್ತಿದ್ದು, ಮೂಲಭೂತ ಅವಶ್ಯಕತೆಗಳಿಗಾಗಿಯೂ ಹೆಣಗಾಡುತ್ತಿದ್ದೇವೆ ಎನ್ನುತ್ತಾರೆ.
ಯಾವುದೇ ಕಾರಣಕ್ಕೂ ತಮಿಳನಾಡಿಗೆ ನೀರು ಬಿಡೊಲ್ಲ: ಡಿಕೆ ಶಿವಕುಮಾರ
ನಗರದಲ್ಲಿ ಉಂಟಾಗಿರುವ ನೀರಿನ ಸಮಸ್ಯೆಯಿಂದಾಗಿ ತಾತ್ಕಾಲಿಕವಾಗಿ ಸ್ಥಳಾಂತರಗೊಂಡಿದ್ದು, ಈ ಸ್ಥಿತಿಯಲ್ಲೂ ಫ್ಲಾಟ್‌ಗೆ ಮಾಸಿಕ 25 ಸಾವಿರ ರೂ. ಬಾಡಿಗೆ ನೀಡುತ್ತಿದ್ದೇವೆ. ತನ್ನ ಸಂಸ್ಥೆಯು ಮನೆಯಿಂದಲೇ ಕೆಲಸ ಮಾಡಲು ಅವಕಾಶ ನೀಡದಿರುವುದು ಪರಿಸ್ಥಿತಿ ಮತ್ತಷ್ಟು ದುರ್ಬಲಗೊಳ್ಳಲು ಕಾರಣವಾಯಿತು ಎನ್ನುತ್ತಾರೆ.
ಮತ್ತೊಬ್ಬ ಐಟಿ ಉದ್ಯೋಗಿ ಅನಿತಾ ಶ್ರೀನಿವಾಸ್ ಅವರು ಮುಂಬೈಗೆ ತೆರಳುವ ಮೂಲಕ ಸಮಸ್ಯೆಗೆ ಪರಿಹಾರ ಕಂಡುಕೊಂಡಿದ್ದಾರೆ. ಅಲ್ಲಿ ಅವರು ತಮ್ಮ ಎರಡನೇ ಸ್ವಂತ ಮನೆ ಹೊಂದಿದ್ದಾರೆ.
ಬೆಂಗಳೂರು ಸ್ವಿಮ್ಮಿಂಗ್ ಪೂಲ್‌ಗಳಿಗೆ ಕಾವೇರಿ ನೀರು ಬಳಕೆ ನಿಷೇಧ; ನಿಯಮ ಉಲ್ಲಂಘಿಸಿದರೆ ದಂಡ
ಈ ನಡುವೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಬೆಂಗಳೂರಿನಲ್ಲಿ ನೀರಿನ ಕೊರತೆಯ ಬಗ್ಗೆ ಬಿಜೆಪಿ ರಾಜಕೀಯ ಮಾಡುತ್ತಿದೆ. ನಗರದಲ್ಲಿ ನೀರಿನ ಕೊರತೆಯಿಲ್ಲ. ಬಿಜೆಪಿಯವರು ಮೊದಲು ಕೇಂದ್ರ ಸರ್ಕಾರವನ್ನು ಸಂಪರ್ಕಿಸಿ ಮಹದಾಯಿ ಮತ್ತು ಮೇಕೆದಾಟು ಯೋಜನೆಗಳಿಗೆ ಅನುಮತಿ ನೀಡುವಂತೆ ಕೇಳಲಿ ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಅಂತಹ ನೀರಿನ ಕೊರತೆ ಇಲ್ಲ, ಬಿಜೆಪಿಯವರು ಕೊರತೆಯನ್ನು ಸೃಷ್ಟಿಸಿದ್ದಾರೆ. ನಾವು ತಮಿಳುನಾಡಿಗೆ ಕಾನೂನಾತ್ಮಕವಾಗಿ ಕೇಳಿದ್ದಷ್ಟು ನೀರನ್ನು ಮಾತ್ರ ನೀಡುತ್ತಿದ್ದೇವೆ. ಬೆಂಗಳೂರಿಗೆ ನೀರು ಕೊಡುವುದು ನಮ್ಮ ಆದ್ಯತೆ. ನಗರದಲ್ಲಿ ಸುಮಾರು 7 ಸಾವಿರ ಬೋರ್‌ವೆಲ್‌ಗಳು ಸ್ಥಗಿತಗೊಂಡಿದ್ದು, ಸಮಸ್ಯೆ ಪರಿಹರಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಹೇಳಿದರು.