Asianet Suvarna News Asianet Suvarna News

ಪೆನ್‌ ಡ್ರೈವ್ ಪ್ರಕರಣ: ಪ್ರಜ್ವಲ್ ರೇವಣ್ಣ ಅಂದರ್‌, ತಾಯಿ ಭವಾನಿ ನಾಪತ್ತೆ

ಶನಿವಾರ ಸಂಜೆಯೊಳಗೆ ವಿಚಾರಣೆ ಬರುವಂತೆ ಭವಾನಿ ರೇವಣ್ಣ ಅವರಿಗೆ ಸೂಚಿಸಿದ್ದಾರೆ. ವಿಚಾರಣೆಗೆ ಹಾಜರಾದ ವೇಳೆ ವಶಕ್ಕೆ ಪಡೆದು ವಿಚಾರಣೆಗೊಳಪಡಿಸಲಿದ್ದಾರೆ. ಈ ಸಂದರ್ಭದಲ್ಲಿ ಬಂಧನ ಮಾಡುವ ಸಾಧ್ಯತೆ ಹೆಚ್ಚಿದೆ. ಬಂಧನ ಭೀತಿಯಿಂದಾಗಿ ಭವಾನಿ ತಲೆಮರೆಸಿಕೊಂಡಿದ್ದಾರೆ. 

Bhavani Revanna Missing on Pendrive Case grg
Author
First Published Jun 1, 2024, 6:03 AM IST | Last Updated Jun 1, 2024, 6:03 AM IST

ಬೆಂಗಳೂರು(ಜೂ.01): ಒಂದು ತಿಂಗಳು ಸತಾಯಿಸಿ ಭಾರತಕ್ಕೆ ಮರಳಿದ ಪೆನ್‌ ಡ್ರೈವ್ ಪ್ರಕರಣದ ರೂವಾರಿ, ಹಾಸನದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಕೊನೆಗೂ ತನಿಖೆಗೆ ಲಭಿಸಿದ್ದಾರೆ. ಆದರೆ, ಇದೇ ಪ್ರಕರಣಕ್ಕೆ ಸಂಬಂಧಿಸಿದ ಸಂತ್ರಸ್ತ ಮಹಿಳೆಯ ಕಿಡ್ನಾಪ್ ಪ್ರಕರಣದಲ್ಲಿ ಪ್ರಜ್ವಲ್ ತಾಯಿ ಭವಾನಿ ರೇವಣ್ಣ ನಾಪತ್ತೆಯಾಗಿದ್ದಾರೆ. ಅವರಿಗಾಗಿ ಈಗ ಎಸ್‌ಐಟಿ ಬಲೆ ಬೀಸಿದೆ.

ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ, ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶದಿಂದ ಮರಳುತ್ತಿದ್ದಂತೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗುರುವಾರ ರಾತ್ರಿ ಬಂಧಿಸಿದ್ದ ವಿಶೇಷ ತನಿಖಾ ದಳವು (ಎಸ್‌ಐಟಿ) ಶುಕ್ರವಾರ ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿ ಆರು ದಿನಗಳ ಕಾಲ ತಮ್ಮ ವಶಕ್ಕೆ ಪಡೆದು ವಿಚಾರಣೆ ಆರಂಭಿಸಿದೆ.

35 ದಿನಗಳ ಬಳಿಕ ಬೆಂಗಳೂರಿನತ್ತ ಪ್ರಜ್ವಲ್ ರೇವಣ್ಣ..ಏರ್‌ಪೋರ್ಟ್‌ನಲ್ಲೇ ವಶಕ್ಕೆ ಪಡೆದ ಎಸ್‌ಐಟಿ!

ಜರ್ಮನಿಯ ಮ್ಯೂನಿಕ್ ನಗರದಿಂದ ಬಂದಿಳಿದ ಕೂಡಲೇ ಕೆಐಎನಲ್ಲಿ ಬಂಧನ ವಾಗಿದ್ದ ಪ್ರಜ್ವಲ್ ಅವರನ್ನು ಶುಕ್ರವಾರ ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಎಸ್‌ಐಟಿ ಅಧಿಕಾರಿಗಳು ಹಾಜರುಪಡಿಸಿದರು. ಬಳಿಕ ಅತ್ಯಾಚಾರ ಪ್ರಕರಣಗಳ ತನಿಖೆಗೆ 15 ದಿನಗಳು ತಮ್ಮ ವಶಕ್ಕೆ ನೀಡುವಂತೆ ಎಸ್‌ಐಟಿ ವಕೀಲರು ಮನವಿ ಮಾಡಿದರು. ಆದರೆ ಈ ಮನವಿಯನ್ನು ತಿರಸ್ಕರಿಸಿದ ನ್ಯಾಯಾಲ ಯವು, ವಾದ-ಪ್ರತಿವಾದ ಆಲಿಸಿ ಕೊನೆಗೆ ಆರು ದಿನ ಎಸ್‌ಐಟಿ ವಶಕ್ಕೆ ನೀಡಿ ಆದೇಶಿಸಿತು.

ಈ ಆದೇಶ ಬೆನ್ನಲ್ಲೇ ನ್ಯಾಯಾಲಯದಿಂದ ಜೀಪಿನಲ್ಲಿ ಕೂರಿಸಿಕೊಂಡು ಮತ್ತೆ ಅರಮನೆ ರಸ್ತೆಯಲ್ಲಿರುವ ಸಿಐಡಿ ಕಚೇರಿಯಲ್ಲಿರುವ ಎಸ್‌ಐಟಿ ಕ್ಯಾಂಪ್‌ಗೆ ಕರೆತಂದು ಪ್ರಜ್ವಲ್ ಅವರಿಗೆ ಎಸ್‌ಐಟಿ ವಿಚಾರಣೆ ನಡೆಸಿದೆ.  ಇನ್ನು ಆರು ದಿನಗಳು ಪ್ರಜ್ವಲ್‌ಗೆ ಪ್ರಶ್ನೆಗಳ ಮುಂದಿಟ್ಟು ಎಸ್‌ಐಟಿ ಬೆವರಿಳಿಸಲಿದೆ. ಇದಕ್ಕೆ ತನಿಖಾ ತಂಡವು ಸಜ್ಜಾಗಿದೆ.

ಪ್ರಜ್ವಲ್ ಅವರನ್ನು ಶುಕ್ರವಾರ ಬೆಳಗ್ಗೆ ಪ್ರಾಥಮಿಕ ಹಂತದ ವಿಚಾರಣೆಗೊಳಿಸಿದ ತನಿಖಾಧಿಕಾರಿಗಳು, ಮಧ್ಯಾಹ್ನ 1 ಗಂಟೆಗೆ ವೈದ್ಯಕೀಯ ತಪಾಸಣೆಗೆ ಬೌರಿಂಗ್ ಆಸ್ಪತ್ರೆಗೆ ಅವರನ್ನು ಕರೆದೊಯ್ದರು. ಆಸ್ಪತ್ರೆಯಲ್ಲಿ ಸಾಮಾನ್ಯ ವೈದ್ಯಕೀಯ ತಪಾಸಣೆ ನಂತರ ಮಧ್ಯಾಹ್ನ 3 ಗಂಟೆಗೆ ಜನಪ್ರತಿನಿಧಿಗಳ ನ್ಯಾಯಾಲಯದ ಹಾಜರುಪಡಿಸಿದರು. ಮುಂದೆ ಆಗ ಹೆಚ್ಚಿನ ತನಿಖೆಗೆ ತಮ್ಮ ವಶಕ್ಕೆ ನೀಡುವಂತೆ ನ್ಯಾಯಾಲಯಕ್ಕೆ ಎಸ್‌ಐಟಿ ಪರ ಸರ್ಕಾರಿ ಅಭಿಯೋಜಕರು ಮನವಿ ಮಾಡಿದರು. ಆದರೆ ಇದಕ್ಕೆ ಪ್ರಜ್ವಲ್ ಪರ ವಕೀಲರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಕೊನೆಗೆ ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯವು, ಆರು ದಿನಗಳು ಎಸ್‌ಐಟಿ ವಶಕ್ಕೆ ಪ್ರಜ್ವಲ್ ಅವರನ್ನು ನೀಡಿತು. ಈ ಆದೇಶ ಬಳಿಕ ಎಸ್‌ಐಟಿ ಕ್ಯಾಂಪ್‌ಗೆ ಕರೆತಂದು ಪ್ರಜ್ವಲ್ ಅವರ ವಿಚಾರಣೆ ಮುಂದುವರೆಸಿದೆ.

ಭವಾನಿಗೆ ಬೇಲ್ ಇಲ್ಲ, ಬಂಧನಕ್ಕೆ ಹುಡುಕಾಟ

ಬೆಂಗಳೂರು: ತೀವ್ರ ಕುತೂಹಲ ಮೂಡಿಸಿದ್ದ ಮಹಾಗೊಂಡ ಬೆನ್ನಲ್ಲೇ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋದಸಂತ್ರಸ್ತ ಅವಹರಣ ಪ್ರಕರಣದಲ್ಲಿ ಭವಾನಿ ರೇವಣ್ಣ ಅರ್ಜಿಯ ಆದೇಶವನ್ನು ಕಾಯ್ದಿರಿಸಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ಶುಕ್ರವಾರ ತೀರ್ಪನ್ನು ಪ್ರಕಟಿಸಿದ್ದು, ಅರ್ಜಿಯನ್ನು ತಿರಸ್ಕರಿಸಿದೆ. ಈ ನಡುವೆ, ಎಸ್‌ಐಟಿ ಅಧಿಕಾರಿ ಗಿದೆ. ಬಂಧನ ಭೀತಿಯಿಂದ ತಲೆಮರೆಸಿಕೊಂಡಿರುವ ಭವಾನಿ ರೇವಣ್ಣ ಅವರಿಗೆ ವಿಚಾರಕೊಂಡಿರುವ ಭವಾನಿ ರೇವಣ್ಣ ಅವರನ್ನು ವಿಚಾರಣೆಗಾಗಿ ಹಾಜರಾಗುವಂತೆ ನೊಟೀಸ್ ವಶಕ್ಕೆ ಪಡೆಯುವ ನಿಟ್ಟಿನಲ್ಲಿ ಎಸ್‌ಐಟಿ ಜಾರಿಗೊಳಿಸಿದ್ದಾರೆ.

ಶನಿವಾರ ಸಂಜೆಯೊಳಗೆ ವಿಚಾರಣೆ ಬರುವಂತೆ ಸೂಚಿಸಿದ್ದಾರೆ. ವಿಚಾರಣೆಗೆ ಹಾಜರಾದ ವೇಳೆ ವಶಕ್ಕೆ ಪಡೆದು ವಿಚಾರಣೆಗೊಳಪಡಿಸಲಿದ್ದಾರೆ. ಈ ಸಂದರ್ಭದಲ್ಲಿ ಬಂಧನ ಮಾಡುವ ಸಾಧ್ಯತೆ ಹೆಚ್ಚಿದೆ. ಬಂಧನ ಭೀತಿಯಿಂದಾಗಿ ಭವಾನಿ ತಲೆಮರೆಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ನಿರೀಕ್ಷಣಾ ಜಾಮೀನು ನಿರಾಕರಣೆಯಾದ ಹಿನ್ನೆಲೆ ಸದ್ಯ ಪ್ರಕರಣದ ಬಗ್ಗೆ ಭವಾನಿ ರೇವಣ್ಣ ಅವರನ್ನು ವಿಚಾರಣೆ ನಡೆ ಸಲು ಎಸ್‌ಐಟಿ ವಶಕ್ಕೆ ಪಡೆಯುವ ಸಾಧ್ಯತೆ ಹೆಚ್ಚಿದೆ. ಭವಾನಿ ರೇವಣ್ಣ ಎಲ್ಲಿದ್ದಾರೆ ಎಂಬುದು ಎಸ್‌ಐಟಿ ತಂಡಕ್ಕೆ ಮಾಹಿತಿ ಇಲ್ಲ. ಈ ಹಿನ್ನೆಲೆಯಲ್ಲಿ ಶೋಧ ಆರಂಭಿಸಿದೆ.

ಮನೆಯಲ್ಲಿ ಇಲ್ಲದ ಕಾರಣಕ್ಕೆ ಶುಕ್ರವಾರ ಬೆಳಿಗ್ಗೆ ಎಸ್‌ಐಟಿ ಅಧಿಕಾರಿಗಳು ನೋಟಿಸ್ ಅನ್ನು ಬಾಗಿಲಿಗೆ ಅಂಟಿಸಿ ಬಂದಿದ್ದರು. ಬೆಂಗಳೂರು, ಹಾಸನ, ಹೊಳೆನರಸೀಪುರದಲ್ಲಿ ಹುಡುಕಾಟ ಆರಂಭಿಸಲಾಗಿದೆ. ಮಾತ್ರವಲ್ಲ, ಸಂಬಂಧಿಕರ ಮನೆಗಳಲ್ಲೂ ಶೋಧ ಕಾರ್ಯ ನಡೆದಿದೆ.

ಪ್ರಜ್ವಲ್ ರೇವಣ್ಣ ಬಂಧನ..ಹೇಗಿರುತ್ತೆ ತನಿಖೆ..? ಮೊಬೈಲ್ ಮದರ್ ಡಿವೈಸ್ ಬಗ್ಗೆ ಎಸ್‌ಐಟಿ ತನಿಖೆ!

ಈಗಾಗಲೇ ಇದೇ ಪ್ರಕರಣದಲ್ಲಿ ಎಚ್.ಡಿ.ರೇವಣ್ಣ ಬಂಧನವಾಗಿ ಜಾಮೀನಿನ ಮೇಲೆ ಹೊರ ಬಂದಿದ್ದಾರೆ. ಇದೀಗ ಅವರ ಪತ್ನಿ ಭವಾನಿ ರೇವಣ್ಣ ಅವರು ಸಹ ಬಂಧನಕ್ಕೊಳಗಾಗುವ ನಿರೀಕ್ಷೆ ಇದೆ. ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ಪ್ರಕರಣದ ವಿಚಾರಣೆಯನ್ನು ನ್ಯಾಯಾಲ ಯವು ಬುಧವಾರ ನಡೆಸಿತ್ತು. ಈ ವೇಳೆ ಭವಾನಿ ರೇವಣ್ಣ ಪರ ವಕೀಲರು, ಎಸ್‌ಐಟಿ ಜಾರಿ ಮಾಡಿರುವ ನೊಟೀಸ್‌ನಲ್ಲಿ ಯಾವುದೇ ಕಾನೂನಿನ ನಿಬಂಧನೆ ಉಲ್ಲೇಖ ಇಲ್ಲ, ಹೀಗಾಗಿ ಅರ್ಜಿದಾರರಿಗೆ ಬಂಧನ ಭೀತಿ ಇದೆ. ಈ ಹಿನ್ನೆಲೆಯಲ್ಲಿ ನಿರೀಕ್ಷಣಾ ಜಾಮೀನು ನೀಡಬೇಕು ಎಂದು ವಾದಿಸಿದ್ದರು.

ಇನ್ನು, ಎಸ್‌ಐಟಿ ಪರ ವಕೀಲರು, ಮಹಿಳೆ ಅಪಹರಣ ಪ್ರಕರಣದಲ್ಲಿ ಅರ್ಜಿದಾರರಾದ ಭವಾನಿ ವಿರುದ್ಧ ಗಂಭೀರ ಆರೋಪ ಇದೆ. ಅವರನ್ನು ವಿಚಾರಣೆಗೊಳಪಡಿಬೇಕಾಗಿದೆ. ಪ್ರಕರಣವು ಗಂಭೀರ ಸ್ವರೂಪದಿಂದ ಕೂಡಿರು ವುದರಿಂದ ನಿರೀಕ್ಷಣಾ ಜಾಮೀನು ನೀಡಬಾ ರದು ಎಂದು ಕೋರಿದ್ದರು. ವಾದ-ಪ್ರತಿವಾದ ಆಲಿಸಿದ್ದ ನ್ಯಾಯಾಲಯವು ನಿರೀಕ್ಷಣಾ ಜಾಮೀನು ಅರ್ಜಿಯ ತೀರ್ಪನ್ನು ಕಾಯ್ದಿರಿಸಿ ಶುಕ್ರವಾರ ಅರ್ಜಿಯನ್ನು ವಜಾಗೊಳಿಸಿದೆ.

Latest Videos
Follow Us:
Download App:
  • android
  • ios