ಟ್ರ್ಯಾಕ್ಟರ್ ಪಲ್ಟಿಯಾಗಿ 13 ವರ್ಷದ ಪುಟ್ಟ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಆಘಾತಕಾರಿ ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಮದಕಟ್ಟಿ ಕ್ರಾಸ್ ಬಳಿ ನಡೆದಿದೆ. ಬಾಜೋಳಗಾ ನಿವಾಸಿ 13 ವರ್ಷದ ಶೋಹಮ್ ಮೃತ ಬಾಲಕ.

ಟ್ರ್ಯಾಕ್ಟರ್ ಪಲ್ಟಿಯಾಗಿ 13 ವರ್ಷದ ಪುಟ್ಟ ಬಾಲಕ ಸಾವು

ಬೀದರ್‌: ಟ್ರ್ಯಾಕ್ಟರ್ ಪಲ್ಟಿಯಾಗಿ 13 ವರ್ಷದ ಪುಟ್ಟ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಆಘಾತಕಾರಿ ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಮದಕಟ್ಟಿ ಕ್ರಾಸ್ ಬಳಿ ನಡೆದಿದೆ. ಬಾಜೋಳಗಾ ನಿವಾಸಿ 13 ವರ್ಷದ ಶೋಹಮ್ ಮೃತ ಬಾಲಕ. ಡಿಸೇಲ್ ತುಂಬಿಸಲು ಬಾಜೋಳಗಾ ಕ್ರಾಸ್‌ನಿಂದ ಹೊರಟಿದ್ದ ಟ್ರ್ಯಾಕ್ಟರ್ ಮದಕಟ್ಟಿ ಕ್ರಾಸ್ ಬಳಿ ಬರುತ್ತಿದ್ದಂತೆ ಪಲ್ಟಿಯಾಗಿದ್ದು, ಟ್ರ್ಯಾಕ್ಟರ್ ಮೇಲೆ ಕುಳಿತಿದ್ದ ಶೋಹಮ್ ಕೆಳಗೆ ಬಿದ್ದು ಸಾವನ್ನಪ್ಪಿದ್ದಾನೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಖಟಕ ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇದನ್ನೂ ಓದಿ: ಕಲಬುರಗಿ: ಚಲಿಸುತ್ತಿರುವ ರಥಕ್ಕೆ ಕೈ ಮುಗಿಯಲು ಹೋಗಿ ಎರಡೂ ಕಾಲು ಕಳೆದುಕೊಂಡ ಮಹಿಳೆ