ಹಾಸನ, (ಮೇ.22): ಮೂರನೇ ಅಲೆಗೆ ರಾಜ್ಯದಲ್ಲಿ ಎಲ್ಲಾ ವ್ಯವಸ್ಥೆ ಮಾಡುತ್ತೇವೆ. ಮುಂದಿನ ಮೂರು ತಿಂಗಳಲ್ಲಿ ಆರೋಗ್ಯ ಕ್ಷೇತ್ರದಲ್ಲಿ ಬಹಳ ದೊಡ್ಡ ಬದಲಾವಣೆ ಮಾಡುತ್ತೇವೆ ಎಂದು ಡಿಸಿಎಂ ಅಶ್ವಥ್​ ನಾರಾಯಣ್ ಹೇಳಿದ್ದಾರೆ. 

ಹಾಸನದಲ್ಲಿ ಇಂದು (ಶನವಾರ) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಜಿಲ್ಲಾ ಆಸ್ಪತ್ರೆಗಳಲ್ಲಿ ಎಲ್ಲಾ ವ್ಯವಸ್ಥೆ ಮಾಡುತ್ತೇವೆ. ಮುಂದಿನ ಮೂರು ತಿಂಗಳಲ್ಲಿ ಎಲ್ಲಾ ಅವಶ್ಯಕತೆಯನ್ನು ಪೂರೈಸುತ್ತೇವೆ ಎಂದು ಭರವಸೆ ನೀಡಿದರು.

ಕರ್ನಾಟಕದಲ್ಲಿ ಮೊದಲ ವೈಟ್ ಫಂಗಸ್ ಪತ್ತೆ..!

 ಇನ್ನು ಮಕ್ಕಳಿಗೆ ಬರುತ್ತದೆಂಬ ಮಾಹಿತಿ ಇದೆ ಎಂದು ಹೇಳಲಾಗಿದೆಯೋ, ಆ ನಿಟ್ಟಿನಲ್ಲಿಯೂ ಕೂಡ ಪ್ರಯತ್ನ ಮಾಡಲಾಗುವುದು. ಸಿಎಂ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಉತ್ತಮ ನಿರ್ಹವಣೆ ಮಾಡಲಾಗುತ್ತಿದೆ ಎಂದು ತಮ್ಮ ಸರ್ಕಾರದ ಕಾರ್ಯ ವೈಖರಿ ಬಗ್ಗೆ ಸಮರ್ಥನೆ ಮಾಡಿಕೊಂಡರು. 

ಸದ್ಯ ಮೂರನೇ ಅಲೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಪ್ರಯತ್ನ ಮಾಡುತ್ತೇವೆ. ವೆಂಟಿಲೇಟರ್, ಇಂಜೆಕ್ಷನ್, ಆಕ್ಸಿಜನ್ ಸೇರಿ ಎಲ್ಲಾ ವ್ಯವಸ್ಥೆ ಒದಗಿಸುತ್ತೇವೆ. ಈ ವರ್ಷದ ಒಳಗೆ ಒಂದು ಡೋಸ್ ಕೊಡುವ ವ್ಯವಸ್ಥೆ ಮಾಡುತ್ತೇವೆ. ಮುಂದಿನ ದಿನಗಳಲ್ಲಿ 18 ರೊಳಗಿನ ಮಕ್ಕಳಿಗೂ ಲಸಿಕೆ ಬಗ್ಗೆ ಅವಶ್ಯಕತೆ ಇದೆಯೋ ಎಂಬುದನ್ನು ನೋಡಲಾಗುವುದು. ಮುಂದಿನ ಮೂರು ತಿಂಗಳಲ್ಲಿ ಆರೋಗ್ಯ ಕ್ಷೇತ್ರದಲ್ಲಿ ಬಹಳ ದೊಡ್ಡ ಬದಲಾವಣೆ ಮಾಡುತ್ತೇವೆ ಎಂದು ಹೇಳಿದರು.