Asianet Suvarna News Asianet Suvarna News

ಬೆಂಗಳೂರು: ಚುಂಚನಗಿರಿ ಮಠದಿಂದ ರಾಜ್ಯಕ್ಕೆ ದೊಡ್ಡ ಕೊಡುಗೆ: ಸಿಎಂ ಬೊಮ್ಮಾಯಿ

ಬಿಜಿಎಸ್‌ ಸಂಸ್ಥೆಗಳು ಕರ್ನಾಟಕದ ಉತ್ತರ ಮತ್ತು ದಕ್ಷಿಣ ಬೆಸೆಯುವ ಕೊಂಡಿಗಳಾಗಿವೆ. ಇಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದ್ದು, ಭವ್ಯ ಕರ್ನಾಟಕ ನಿರ್ಮಾಣಕ್ಕೆ ಆದಿಚುಂಚನಗಿರಿ ಮಠ ದೊಡ್ಡ ಕೊಡುಗೆ ನೀಡಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಶಂಸೆ ವ್ಯಕ್ತಪಡಿಸಿದರು.

Big contribution to the state from Chunchanagiri Math says cm basavaraj bommai bengaluru rav
Author
First Published Feb 15, 2023, 6:09 AM IST

ಬೆಂಗಳೂರು (ಫೆ.15) : ಬಿಜಿಎಸ್‌ ಸಂಸ್ಥೆಗಳು ಕರ್ನಾಟಕದ ಉತ್ತರ ಮತ್ತು ದಕ್ಷಿಣ ಬೆಸೆಯುವ ಕೊಂಡಿಗಳಾಗಿವೆ. ಇಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದ್ದು, ಭವ್ಯ ಕರ್ನಾಟಕ ನಿರ್ಮಾಣಕ್ಕೆ ಆದಿಚುಂಚನಗಿರಿ ಮಠ ದೊಡ್ಡ ಕೊಡುಗೆ ನೀಡಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಶಂಸೆ ವ್ಯಕ್ತಪಡಿಸಿದರು.

ಹುಳಿಮಾವಿನ ಬಿಜಿಎಸ್‌ ನ್ಯಾಷನಲ್‌ ಪಬ್ಲಿಕ್‌ ಸ್ಕೂಲ್‌(BGS National Public School)ನಲ್ಲಿ ಮಂಗಳವಾರ ಏರ್ಪಡಿಸಿದ್ದ ಆದಿಚುಂಚನಗಿರಿ ಮಠದ ಡಾ ಶ್ರೀ ನಿರ್ಮಲಾನಂದ ನಾಥ ಸ್ವಾಮೀಜಿ(Nirmalananda swamiji)ಗಳ ಪಟ್ಟಾಭಿಷೇಕದ ದಶಮಾನೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ಚುಂಚನಗಿರಿಯಲ್ಲಿ ವಧು-ವರರ ಸಮಾವೇಶ: 250 ವಧುಗಳಿಗೆ, 11,750 ವರರ ನೋಂದಣಿ!

ಉತ್ತರ ಕರ್ನಾಟಕದ ಜನರು ಕಿಡ್ನಿ, ಲಿವರ್‌ ಕಸಿ ಮಾಡಿಸಿಕೊಳ್ಳಲು ಬಿಜಿಎಸ್‌ ಆಸ್ಪತ್ರೆ(BGS Hospital)ಗೆ ನೇರವಾಗಿ ಬರುವಷ್ಟುಸೌಲಭ್ಯಗಳು ಇಲ್ಲಿ ದೊರೆಯುತ್ತಿದ್ದು ಬಿಜಿಎಸ್‌ ಸಂಸ್ಥೆಗಳು ಉತ್ತರ ಮತ್ತು ದಕ್ಷಿಣ ಬೆಸೆಯುವ ಕೇಂದ್ರಗಳಾಗಿವೆ. 1.50 ಲಕ್ಷ ವಿದ್ಯಾರ್ಥಿಗಳಿಗೆ ಅಂತಾರಾಷ್ಟ್ರೀಯ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ. ಭವ್ಯ ಕರ್ನಾಟಕ ನಿರ್ಮಾಣಕ್ಕೆ ಆದಿಚುಂಚನಗಿರಿ ಮಠ ದೊಡ್ಡ ಕೊಡುಗೆ ನೀಡಲಿದೆ ಎಂದು ಅಭಿಪ್ರಾಯಪಟ್ಟರು.

ಆದಿಚುಂಚನಗಿರಿ ಮಠ ತನ್ನದೇ ಇತಿಹಾಸ ಹೊಂದಿದೆ. ನಿರ್ಮಲಾನಂದನಾಥ ಸ್ವಾಮೀಜಿಗಳ ಪಟ್ಟಾಭಿಷೇಕವಾಗಿ ಒಂದು ದಶಕ ಕಳೆದಿದ್ದು, ಇದು ಆತ್ಮಾವಲೋಕನ ಹಾಗೂ ಸಿಂಹಾವಲೋಕನ ಮಾಡಿಕೊಳ್ಳುವ ಕಾಲಘಟ್ಟವಾಗಿದೆ. ಹತ್ತು ವರ್ಷದಲ್ಲಿ ಸ್ವಾಮೀಜಿಗಳು ಅಪಾರ ಸಾಧನೆ ಮಾಡಿದ್ದಾರೆ. ಬಾಲಗಂಗಾಧರನಾಥ ಸ್ವಾಮೀಜಿಗಳು ಬಿತ್ತಿದ ಬೀಜ ಹೆಮ್ಮರವಾಗಿ ಬೆಳೆದಿದೆ. ನಿರ್ಮಲಾನಂದನಾಥ ಸ್ವಾಮೀಜಿಗಳ ಕಾಲದಲ್ಲಿ ಸಂಸ್ಥೆ ಬೆಳೆಯುತ್ತಿದೆ. ಪ್ರಕಾಶನಾಥ ಸ್ವಾಮೀಜಿ ಕೂಡ ಬೆಂಗಳೂರಿನ ಸಂಸ್ಥೆಗಳನ್ನು ಕಟ್ಟಿಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಸಚಿವರಾದ ಆರ್‌.ಅಶೋಕ್‌, ಡಾ ಕೆ.ಸುಧಾಕರ್‌, ಶಾಸಕ ಸತೀಶ್‌ ರೆಡ್ಡಿ, ಸಾಹಿತಿಗಳಾದ ಚಂದ್ರಶೇಖರ ಕಂಬಾರ, ದೊಡ್ಡರಂಗೇಗೌಡ, ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಮಹೇಶ್‌ ಜೋಶಿ ಉಪಸ್ಥಿತರಿದ್ದರು.

 

ಆದಿಚುಂಚನಗಿರಿ ಮಠಕ್ಕೆ ಭೇಟಿ‌ ನೀಡಿದ ಮಾಜಿ ಸಿಎಂ ಯಡಿಯೂರಪ್ಪ

ಅಪರೂಪದ ಸ್ವಾಮೀಜಿ

ನಿರ್ಮಲಾನಂದನಾಥ ಶ್ರೀಗಳು ಅಪರೂಪದ ಸ್ವಾಮೀಜಿ. ವಿಜ್ಞಾನ ಮತ್ತು ತಂತ್ರಜ್ಞಾನ ಒಂದೇ ನಾಣ್ಯದ ಎರಡು ಮುಖಗಳಾಗಿದ್ದು, ಇವೆರಡನ್ನೂ ಆಳವಾಗಿ ಅಧ್ಯಯನ ಮಾಡಿ ಸಮಾಜಕ್ಕೆ ನೀಡುವ ದೊಡ್ಡ ಸಾಧನೆ ಮಾಡಿದ್ದಾರೆ. ವಿಚಾರಗಳನ್ನು ವೈಜ್ಞಾನಿಕವಾಗಿ ನೋಡಿ ತತ್ವಜ್ಞಾನ ಅಳವಡಿಸಿ ಅಂತಿಮ ನಿರ್ಧಾರ ತೆಗೆದುಕೊಳ್ಳುವ ವಿಧಿವಿಧಾನ ಸ್ವಾಮೀಜಿಗಳಿದ್ದರೆ ಇಡೀ ಸಮಾಜಕ್ಕೆ ದಾರಿದೀಪವಾಗಬಹುದು ಎನ್ನಲು ಉತ್ತಮ ಉದಾಹರಣೆಯಾಗಿದ್ದಾರೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.

Follow Us:
Download App:
  • android
  • ios