ನವೀಕರಿಸಬಹುದಾದ ಇಂಧನ ಉತ್ಪಾದನೆಗೆ ಕರಾವಳಿಯಲ್ಲಿ ದೊಡ್ಡ ಪ್ರಮಾಣದ ಹೂಡಿಕೆ: ಸಿಎಂ ಬೊಮ್ಮಾಯಿ
ರಾಜ್ಯದಲ್ಲಿ ಇತ್ತೀಚೆಗೆ ನಡೆದ ಬಂಡವಾಳ ಹೂಡಿಕೆದಾರರ ಸಮಾವೇಶದಿಂದ ನವೀಕರಿಸಬಹುದಾದ ಇಂಧನ, ಹೈಡ್ರೋಜನ್ ಇಂಧನ ಮತ್ತು ಕಡಲನೀರಿನಿಂದ ಅಮೋನಿಯಾ ಉತ್ಪಾದನೆಗೆ ಒಂದೂವರೆಯಿಂದ 2 ಲಕ್ಷ ಕೋಟಿ ಬಂಡವಾಳದ ನಿರೀಕ್ಷೆ ಇದೆ. ದೊಡ್ಡ ಪ್ರಮಾಣದ ಹೂಡಿಕೆ ಕರಾವಳಿಯಲ್ಲಿ ಆಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಮಂಗಳೂರು ( ನ.19): ಬಂಡವಾಳ ಹೂಡಿಕೆದಾರರ ಸಮಾವೇಶದಿಂದ ನವೀಕರಿಸಬಹುದಾದ ಇಂಧನ, ಹೈಡ್ರೋಜನ್ ಇಂಧನ ಮತ್ತು ಕಡಲನೀರಿನಿಂದ ಅಮೋನಿಯಾ ಉತ್ಪಾದನೆಗೆ ಒಂದೂವರೆಯಿಂದ 2 ಲಕ್ಷ ಕೋಟಿ ಬಂಡವಾಳದ ನಿರೀಕ್ಷೆ ಇದೆ. ದೊಡ್ಡ ಪ್ರಮಾಣದ ಹೂಡಿಕೆ ಕರಾವಳಿಯಲ್ಲಿ ಆಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಬಾವುಟಗದ್ದೆಯಲ್ಲಿ ಸ್ವಾತಂತ್ರ ಹೋರಾಟಗಾರ ರಾಮಯ್ಯಗೌಡ ಪ್ರತಿಮೆ ಲೋಕಾರ್ಪಣೆ ಹಿನ್ನೆಲೆಯುಲ್ಲಿ ಇಂದು ಬಜ್ಪೆ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (Bajpe International Airport) ಆಗಮಿಸಿ ಸುದ್ದಿಗಾರರೊಂದಿಗೆ ಮಾತನಾಡಿದರು. ರಾಜ್ಯದಲ್ಲಿ ಉತ್ಪಾದನೆಗೆ ಅಗತ್ಯವಿರುವ ಮೂಲ ಸೌಕರ್ಯ (Infrastructure)ಗಳನ್ನು ಕಲ್ಪಿಸಲು ತಯಾರಿ ನಡೆಸಲಾಗಿದೆ. ಈಗಾಗಲೇ 3 ನವೀಕರಿಸಬಹುದಾದ ಇಂಧನ ಕಂಪನಿಗಳೊಂದಿಗೆ ರಾಜ್ಯ ಉನ್ನತ ಮಟ್ಟದ ಅನುಮೋದನಾ ಸಮಿತಿಯಲ್ಲಿ ಅನುಮೋದನೆ (Approval) ನೀಡಲಾಗಿದೆ. ಬಹಳ ವೇಗದಲ್ಲಿ ಕೆಲಸಗಳಾಗುತ್ತಿದ್ದು, ಮಾರ್ಚ್ ಅಥವಾ ಏಪ್ರಿಲ್ ವೇಳೆಗೆ ಕೆಲಸ ಪ್ರಾರಂಭ ಮಾಡುವುದಾಗಿ 3 ಕಂಪನಿಗಳು (Companies) ಹೇಳಿವೆ. ನವೀಕರಿಸಬಹುದಾದ ಇಂಧನ ಉತ್ಪಾದನೆಯಲ್ಲಿ ಕರಾವಳಿ (Costal Area) ಅಂತರರಾಷ್ಟ್ರೀಯ ಮಟ್ಟದಲ್ಲಿ ಮುಖ್ಯ ಪಾತ್ರ ವಹಿಸಿದೆ ಎಂದು ಮಾಹಿತಿ ನೀಡಿದರು.
ನಳೀನ್ ಕುಮಾರ್ ಕಟೀಲ್ ಆರೋಗ್ಯ ವಿಚಾರಿಸಿದ ಸಿಎಂ ಬೊಮ್ಮಾಯಿ
ಸಂಪೂರ್ಣ ಹಸಿರು ಯೋಜನೆ: ಹೈಡ್ರೋಜನ್ ಹಾಗೂ ಅಮೋನಿಯಾ ಉತ್ಪಾದನೆಯ ಎರಡು ಪ್ರಮುಖ ಯೋಜನೆಗಳು ಅಂತರರಾಷ್ಟ್ರೀಯ ಮಟ್ಟದಲ್ಲಿ ಬರಲಿದ್ದು, ಗಲ್ಫ್ (Gulf) ದೇಶದಲ್ಲಿ ಮತ್ತು ಮಂಗಳೂರಿನಲ್ಲಿ (Mangalore) ತಲೆ ಎತ್ತಲಿದೆ. ಮಂಗಳೂರಿನ ಆಸುಪಾಸಿನಲ್ಲಿ ಕಡಲ ನೀರಿನಿಂದ ಅಮೋನಿಯಾ (ammonia) ತಯಾರು ಮಾಡುವ ಪ್ರಮುಖ ಘಟಕ ಬರಲಿದೆ. ನವೀಕರಿಸಬಹುದಾದ ಇಂಧನ ಘಟಕಕ್ಕೆ ಅಗತ್ಯ ವಿರುವ ಇಂಧವನ್ನೂ ನವೀಕರಿಸಬಹುದಾದ ಇಂಧನ ಮೂಲಗಳಾದ ಸೋಲಾರ್, ವಿಂಡ್ ಮಿಲ್ ಗಳಿಂದಲೇ ಪಡೆಯಲಾಗುವುದು. ಸಂಪೂರ್ಣವಾಗಿ ಇದು ಹಸಿರು ಯೋಜನೆ (Green plan)ಯಾಗಲಿದೆ. ಇದರಿಂದ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ದೊಡ್ಡ ಪ್ರಮಾಣದಲ್ಲಿ ಉದ್ಯೋಗ (Jobs) ಸೃಜನೆಯಾಗಿ ಈ ಭಾಗದ ಯುವಕರಿಗೆ ಅವಕಾಶಗಳ ಬಾಗಿಲು ತೆರೆಯಲಿದೆ ಎಂದರು.
ಶೀಘ್ರ ಮಂಗಳೂರು- ಬೆಂಗಳೂರು ಹೆದ್ದಾರಿ ದುರಸ್ತಿ: ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ (National Highway) ದುರಸ್ತಿ ಕಾಮಗಾರಿ ನಿರಂತರವಾಗಿ ಮಳೆ (Rain) ಬಂದಿದ್ದರಿಂದ ತಡವಾಗಿದೆ. ಮುಂದಿನ ವಾರ ದೆಹಲಿಗೆ ತೆರಳಲಿದ್ದು, ಕೇಂದ್ರ ಸಚಿವ ನಿತಿನ್ ಗಡ್ಕರಿ (Nitin Gadkari) ಅವರನ್ನು ಭೇಟಿಯಾಗಬೇಕಿದೆ. ಈ ವಾರದಲ್ಲಿ ಅದಕ್ಕೆ ಪೂರಕವಾಗಿ ಇಡೀ ರಾಜ್ಯದ ರಾಷ್ಟ್ರೀಯ ಹೆದ್ದಾರಿಗಳ ಬಗ್ಗೆ ಸಭೆ (Meeting) ಕರೆಯಲಾಗುವುದು. ಆದ್ಯತೆ ಮೇರೆಗೆ ಮಂಗಳೂರು- ಬೆಂಗಳೂರು ಹೆದ್ದಾರಿ ದುರಸ್ತಿ (Repair) ಕೆಲಸಗಳಾದ ಸುರಂಗ ಮಾರ್ಗ, ವೈಟ್ ಟಾಪಿಂಗ್ ಮುಂತಾದ ಕೆಲಸ ಕೈಗೆತ್ತಿಕೊಳ್ಳಲಾಗುವುದು. ಅಲ್ಪಾವಧಿ ಕಾಮಗಾರಿಯಲ್ಲಿ ರಸ್ತೆಯನ್ನು ಬಳಕೆಗೆ ಯೋಗ್ಯವಾಗಿಸುವುದು ಹಾಗೂ ದೀರ್ಘಾವಧಿ ಕಾಮಗಾರಿಗಳಲ್ಲಿ ಸುರಂಗ ಮಾರ್ಗ ನಿರ್ಮಾಣ ಕೈಗೊಳ್ಳಲಾಗುವುದು ಎಂದು ಮಾಹಿತಿ ನೀಡಿದರು.
ರಾಮಯ್ಯಗೌಡ ಪ್ರತಿಮೆ ನಿರ್ಮಾಣ ಅನಾಮಧೇಯ ಸ್ವಾತಂತ್ರ್ಯ ಹೋರಾಟಗಾರರ ಪತ್ತೆಗೆ ಪೂರಕ: ಸಿಎಂ ಬೊಮ್ಮಾಯಿ
ತೀವ್ರಗತಿಯಲ್ಲಿ ಪೊಲೀಸ್ ತನಿಖೆ : ಮತದಾರರ ಪಟ್ಟಿ ದುರುಪಯೋಗದ ಕುರಿತು ವಿರೋಧ ಪಕ್ಷದವರು (Opposition Party) ನ್ಯಾಯಮೂರ್ತಿಗಳಿಂದ ತನಿಖೆಗೆ (Investigation) ಒತ್ತಾಯಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಅವರು, ಎಲ್ಲದ್ದಕ್ಕೂ ವಿಪಕ್ಷ ನಾಯಕರು ನ್ಯಾಯಾಂಗ ತನಿಖೆಗೆ ಒತ್ತಾಯಿಸಿದ್ದಾರೆ. ಅವರು ಅಧಿಕಾರದಲ್ಲಿದ್ದಾಗ ಬಿಡಿಎ ವಿಚಾರದಲ್ಲಿ ನ್ಯಾಯಾಂಗ ತನಿಖೆಯಾದಾಗ ಅದರಿಂದ ಪಾರಾಗಲು ಅನುಕೂಲವಾಗಿತ್ತು. ಆದರೆ, ಈಗ ಅಪರಾಧದ ವಿರುದ್ಧ ಪೊಲೀಸರ ತಂಡ ಶೀಘ್ರವಾಗಿ ಕೆಲಸ ಮಾಡುತ್ತದೆ. ಈಗಾಗಲೇ ಕೆಲವರ ಬಂಧನವವೂ ( Arrest) ಆಗಿದೆ. ತೀವ್ರಗತಿಯಲ್ಲಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು.