Yediyurappa POCSO Case ಬಂಧನ ಭೀತಿಯಲ್ಲಿದ್ದ ಬಿಎಸ್‌ವೈಗೆ ಬಿಗ್ ರಿಲೀಫ್ ನೀಡಿದ ಹೈಕೋರ್ಟ್
ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ.
ಬೆಂಗಳೂರು (ಜೂ.14): ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಜೂನ್ 17ಕ್ಕೆ ಮುಂದಿನ ವಿಚಾರಣೆಗೆ ಹಾಜರಾಗಲು ತಿಳಿಸಿದ ಕೋರ್ಟ್ ಮುಂದಿನ ಆದೇಶದವರೆಗೆ ಬಂಧಿಸದಂತೆ ಹೇಳಿದೆ.
ಮುಂದಿನ ಸೋಮವಾರ ವಿಚಾರಣೆ ನಡೆಸುವವರೆಗೂ ಒತ್ತಾಯದ ಕ್ರಮ ತೆಗೆದುಕೊಳ್ಳದಂತೆ ಕೋರ್ಟ್ ಆದೇಶಿಸಿದೆ. ಮಾಜಿ ಸಿಎಂ ಆಗಿದ್ದು, ಬಿಎಸ್‌ವೈ ಜೀವನದ ಸಂಧ್ಯಾಕಾಲದಲ್ಲಿ ಇದ್ದಾರೆ. ಸ್ವಾಭಾವಿಕವಾಗಿ ಆರೋಗ್ಯದ ಅಡಚಣೆ ಇರುತ್ತವೆ. ಓಡಿ ಹೋಗುವ ವ್ಯಕ್ತಿ ಅಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದ ಕೋರ್ಟ್, ಎರಡು ವಾರಗಳ ಕಾಲ ವಿಚಾರಣೆ ಮುಂದೂಡಿದೆ. ಆಕ್ಷೇಪಣೆ ಸಲ್ಲಿಸಲು ಸರ್ಕಾರದ ಪರ ವಕೀಲರಿಗೆ ನೋಟಿಸ್ ನೀಡಿದೆ.
ಬಂಧನದ ಭೀತಿ ಎದುರಿಸುತ್ತಿದ್ದ ಬಿಎಸ್‌ವೈ ಈ ಸಂಬಂಧ ನಿರೀಕ್ಷಣಾ ಜಾಮೀನು ಕೋರಿ ಹೈಕೊರ್ಟ್‌ಗೆ ಮೊರೆ ಹೋಗಿದ್ದರು. ಯಡಿಯೂರಪ್ಪ ಪರ ಸಿವಿ ನಾಗೇಶ್ ವಾದ ಮಂಡನೆ ಮಾಡಿದ್ದರೆ, ಸರ್ಕಾರದ ಪರ ಎಜಿ ಶಶಿಕಿರಣ್ ಶೆಟ್ಟಿ ವಾದಿಸಿದ್ದರು.
ಬಿಎಸ್‌ವೈ ವಿರುದ್ಧ ಪೋಕ್ಸೋ ಪ್ರಕರಣದಲ್ಲಿ ಕಾಂಗ್ರೆಸ್ ಸರ್ಕಾರದ ಪಾತ್ರ? ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದೇನು?
ತಮಗೆ 81 ವರ್ಷವಾಗಿದ್ದು, ಹಲವು ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದೇನೆ. ಜತೆಗೆ, ಕಾಲ ಕಾಲಕ್ಕೆ ವೈದ್ಯರ ಭೇಟಿ ಮಾಡುವುದು ಔಷಧಗಳನ್ನು ಪಡೆದುಕೊಳ್ಳಬೇಕಾಗುತ್ತದೆ. ತನ್ನ ವಿರುದ್ಧ ಮರಣದಂಡನೆ ಶಿಕ್ಷೆ ವಿಧಿಸಬಹದಾದ ಆರೋಪ ಇಲ್ಲ. ಕೇವಲ ಏಳು ವರ್ಷಗಳ ಶಿಕ್ಷೆಯಾಗುವಂತಹ ಆರೋಪವಿದೆ. ಇಂತಹ ಪ್ರಕರಣದಲ್ಲಿ ವಿಚಾರಣಾ ಸಂದರ್ಭದಲ್ಲಿ ಬಂಧನ ಮಾಡದೆ ಜಾಮೀನು ನೀಡಬಹುದು ಎಂದು ಸುಪ್ರೀಂಕೋರ್ಟ್ ಈಗಾಗಲೇ ಹಲವು ಪ್ರಕರಣಗಳಲ್ಲಿ ಆದೇಶಿಸಿದೆ. ಅದರಂತೆ ತಮಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಬೇಕು ಎಂದು ಯಡಿಯೂರಪ್ಪ ಅರ್ಜಿಯಲ್ಲಿ ಕೋರಿದ್ದರು.
ಬಿಎಸ್‌ವೈ ಮೇಲೆ ಇಲ್ಲಸಲ್ಲದ ಪ್ರಕರಣ ಎಳೆಯುತ್ತಿದ್ದೀರಿ: ಸಿದ್ದು ಸರ್ಕಾರದ ವಿರುದ್ಧ ಹರಿಹಾಯ್ದ ಸಚಿವ ಪ್ರಹ್ಲಾದ ಜೋಶಿ
ವ್ಯಾಪಾರದಲ್ಲಿ ತಮಗೆ ಕೆಲವರಿಂದ ಕೋಟ್ಯಂತರ ಹಣ ಮೋಸವಾಗಿದೆ. ಈ ಕುರಿತು ತನಿಖೆ ನಡೆಸಲು ಎಸ್‌ಐಟಿ ರಚನೆಯಾಗುವುದಕ್ಕೆ ನೆರವು ನೀಡುವಂತೆ ಕೋರಿ ದೂರುದಾರ ಮಹಿಳೆ ಅತ್ಯಾಚಾರ ಪ್ರಕರಣ ಸಂತ್ರಸ್ತೆಯಾದ ತನ್ನ ಅಪ್ರಾಪ್ತ ಪುತ್ರಿಯೊಂದಿಗೆ ನನ್ನ ಮನೆಗೆ ಬಂದಿದ್ದರು. 9 ನಿಮಿಷ ಕಾಲ ಮಾತನಾಡಿದ ನಂತರ ದೂರುದಾರ ಮಹಿಳೆಯ ಪುತ್ರಿಯನ್ನು ಕೊಠಡಿಗೆ ಕರೆದೊಯ್ದು ಲೈಂಗಿಕ ಕಿರುಕುಳ ನೀಡಿದ ಆರೋಪ ನನ್ನ ಮೇಲೆ ಹೊರಿಸಲಾಗಿದೆ. ಈ ಕುರಿತು ದೂರುದಾರ ಮಹಿಳೆಯು 2024ರ ಮಾ.3ರಂದು ತಮ್ಮ ವಿರುದ್ಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಫೋಕ್ಸೋ ಆರೋಪದಲ್ಲಿ ಪ್ರಕರಣ ದಾಖಲಿಸಿದ್ದರು ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ.