ಜಾತಿ ನಿಂದನೆ ಆರೋಪದಡಿ ವಕೀಲ್ ಜಗದೀಶ್ ಅರೆಸ್ಟ್ ಆಗಿದ್ದಾರೆ. ಬೆಂಗಳೂರಲ್ಲಿ ಪೊಲೀಸರು ಜಗದೀಶ್ ಬಂಧಿಸಿದ್ದಾರೆ.
ಬೆಂಗಳೂರು (ಆ.22) ಜಾತಿ ನಿಂದನೆ ಪ್ರಕರಣದಲ್ಲಿ ವಕೀಲ ಜಗದೀಶ್ ಬೆಂಗಳೂರಲ್ಲಿ ಅರೆಸ್ಟ್ ಆಗಿದ್ದಾರೆ.ಕೊಡಗೇಹಳ್ಳಿ ಪೊಲೀಸರು ವಕೀಲ ಜಗೀಶ್ ಬಂಧಿಸಿದ್ದಾರೆ. ಜಾತಿ ನಿಂದನೆ ಪ್ರಕರಣ ಸಂಬಂಧ ವಕೀಲ ಜಗದೀಶ್ ವಿರುದ್ಧ ದೂರು ದಾಖಲಾಗಿತ್ತು. ಈ ಸಂಬಂಧ ಬೆಂಗಳೂರು ಪೊಲೀಸರು ಆಗಸ್ಟ್ 21ರಂದು ಜಗದೀಶ್ ಮನೆಗೆ ತೆರಳಿ ಬರಿಗೈಯಲ್ಲಿ ವಾಪಾಸ್ಸಾಗಿದ್ದರು. ಮನೆ ಬಾಗಿಲು ತೆರೆಯದ ಸತಾಯಿಸಿದ್ದ ಜಗದೀಶ್ ಇಂದು ಅರೆಸ್ಟ್ ಆಗಿದ್ದಾರೆ. ಮಂಜುನಾಥ್ ಅನ್ನೋ ವ್ಯಕ್ತಿ ನೀಡಿದ್ದ ದೂರಿನ ಆಧಾರದಲ್ಲಿ ಲಾಯರ್ ಜಗದೀಶ್ ವಿರುದ್ಧ ಪ್ರಕರಣ ದಾಖಲಾಗಿತ್ತು.
ಕೂಡಿಗೆಳ್ಳಿ ಠಾಣೆಗೆ ಕರೆತಂದು ವಿಚಾರಣೆ
ಬಿಗ್ ಬಾಸ್ ಮಾಜಿ ಸ್ಪರ್ಧಿ ವಕೀಲ ಜಗದೀಶ್ ಬಂಧಿಸಿದ ಪೊಲೀಸರು ಕೂಡಿಗೆಹಳ್ಳಿ ಠಾಣೆಗೆ ಕರೆತಂದು ವಿಚಾರಣೆ ಆರಂಭಿಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಜಾತಿ ಬಗ್ಗೆ ಮಾತನಾಡಿದ್ದ ಜಗದೀಶ್
ಸಾಮಾಜಿಕ ಮಾಧ್ಯಮಗಳಲ್ಲಿ ಜಾತಿ ನಿಂದನೆ ಕುರಿತು ಹೇಳಿಕೆ ನೀಡಿದ್ದರು. ಈ ಪ್ರಕರಣ ಸಂಬಂಧ ಆಗಸ್ಟ್ 21ರಂದು ಕೊಡಿಗೆಹಳ್ಳಿ ಪೊಲೀಸರು ಜಗದೀಶ್ ಅರೆಸ್ಟ್ ಮಾಡಲು ಮನೆಗೆ ತೆರಳಿದ್ದರು. ಈ ವೇಳೆ ಮನೆ ಬಾಗಿಲು ತಗೆಯಲಿಲ್ಲ. ಇಷ್ಟೇ ಅಲ್ಲ ಪೊಲೀಸರ ನೋಟಿಸ್ ಸ್ವೀಕರಿಸಲು ನಿರಾಕರಿಸಿದ್ದರು. ಹಲವು ಗಂಟೆಗಳ ವರೆಗೆ ಕಾದರೂ ಲಾಯರ್ ಜಗದೀಶ್ ಮನೆ ಬಾಗಿಲು ತರೆಯಲೇ ಇಲ್ಲ. ಹೀಗಾಗಿ ಪೊಲೀಸರು ಬರಿಗೈಯಲ್ಲಿ ವಾಪಾಸ್ಸಾಗಿದ್ದರು. ಭಾರತೀಯ ನ್ಯಾಯ ಸಂಹಿತೆ ಸೆಕ್ಷನ್ 196 ಅಡಿಯಲ್ಲಿ ದೂರು ದಾಖಲಾಗಿತ್ತು. ಬಂಧನಕ್ಕಾಗಿ ಕೂಡಿಗೆಹಳ್ಳಿ ಪೊಲೀಸರು ಸಜ್ಜಾಗಿದ್ದರು. ಆದರೆ ಲಾಯರ್ ಜಗದೀಶ್ ಪೊಲೀಸರಿಗೆ ಸಹಕರಿಸಲಿಲ್ಲ. ಹೀಗಾಗಿ ನಿನ್ನೆಯ ಕಾರ್ಯಾಚರಣೆ ವಿಫಲಗೊಂಡಿತ್ತು.
ಜಗದೀಶ್ ವಿರುದ್ದ ಹಕ್ಕುಚ್ಯುತಿ ಮಂಡಿಸಿದ್ದ ಬಿಜೆಪಿ ನಾಯಕ
ಬಿಜೆಪಿ ನಾಯಕ ಎಸ್ಆರ್ ವಿಶ್ವನಾಥ್ ಇತ್ತೀಚೆಗೆ ವಿಧಾನಸಭೆಯಲ್ಲಿ ಲಾಯರ್ ಜಗದೀಶ್ ವಿರುದ್ದ ಹಕ್ಕುಚ್ಯುತಿ ಮಂಡಿಸಿದ್ದರು. ಧರ್ಮಸ್ಥಳ ಸೇರಿದಂತೆ ಇತರ ಕೆಲ ಪ್ರಕರಣಗಳಲ್ಲಿ ಲಾಯರ್ ಜಗದೀಶ್ ತನ್ನ ವಿರುದ್ದ ಯಾವುದೇ ಸಾಕ್ಷಿ ಆಧಾರಗಳಿಲ್ಲದೆ ಆರೋಪ ಮಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ನನ್ನ ವಿರುದ್ಧ ಕೆಟ್ಟದಾಗಿ ಮಾತನಾಡಿದ್ದಾರೆ. ಧರ್ಮಸ್ಥಳ ಬಗ್ಗೆ ಅಪಪ್ರಚಾರವಾಗುತ್ತಿದೆ ಎಂದು ಮಾತನಾಡುವುದು ನನ್ನ ಹಕ್ಕು. ಆದರೆ ವಕೀಲ ಜಗದೀಶ್ ಆಧಾರ ರಹಿತ ಆರೋಪ, ತೇಜೋವಧೆ ಮಾಡುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಎಸ್ಆರ್ ವಿಶ್ವನಾಥ್ ಹಕ್ಕುಚ್ಯುತಿ ಮಂಡಿಸಿದ್ದರು.
