ಕೆಚ್ಚಲು ಕೊಯ್ದು ಹಸುಗಳ ಮೇಲೆ ಕ್ರೌರ್ಯ, ಬಿಗ್‌ಬಾಸ್‌ ಚೈತ್ರಾ ಕುಂದಾಪುರ ತೀವ್ರ ಖಂಡನೆ

ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಹಸುಗಳ ಮೇಲೆ ಕ್ರೌರ್ಯ ಮೆರೆದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಘಟನೆಯನ್ನು ಬಿಗ್‌ಬಾಸ್‌ ಸ್ಪರ್ಧಿ ಚೈತ್ರಾ ಕುಂದಾಪುರ ಖಂಡಿಸಿದ್ದು, ಹಿಂದೂ ಪರ ಸಂಘಟನೆಗಳು ಸೇರಿದಂತೆ ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

bigg boss kannada 11 contestants chaithra kundapura condem allegedly cutting off cow three in bengaluru

 ಬೆಂಗಳೂರಿನ  ಚಾಮರಾಜಪೇಟೆಯ ಓಲ್ಡ್​ ಪೆನ್ಷನ್​ ಮೊಹಲ್ಲಾದ ವಿನಾಯಕನಗರದಲ್ಲಿ ನಡೆದ ಹಸುಗಳ ಕೆಚ್ಚಲು ಕೊಯ್ದು ಕ್ರೌರ್ಯ ಮೆರೆದ ಓರ್ವ ಆರೋಪಿಯನ್ನು ಕಾಟನ್‌ಪೇಟೆ ಪೊಲೀಸರು ಬಂಧಿಸಿದ್ದಾರೆ. ಈತ ಬಿಹಾರ ರಾಜ್ಯದ ಚಂಪಾರನ್ ಜಿಲ್ಲೆ ಮೂಲದವನಾಗಿದ್ದು, ಘಟನೆ ನಡೆದ ಸ್ಥಳದಿಂದ 50 ಮೀಟರ್ ದೂರದಲ್ಲಿರುವ ಪ್ಲಾಸ್ಟಿಕ್ ಹಾಗೂ ಬಟ್ಟೆ ಹೊಲೆಯುವ ಅಂಗಡಿಯಲ್ಲಿ ಸಹಾಯಕನಾಗಿ ಈತ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ

ಈ ಘಟನೆಗೆ ಸಂಬಂಧಿಸಿದಂತೆ ಈಗ ಬಿಗ್‌ಬಾಸ್‌ ಸ್ಪರ್ಧಿ ಚೈತ್ರಾ ಕುಂದಾಪುರ ಖಂಡಿಸಿದ್ದಾರೆ. ಇಂದು ಹಸುವಿನ ಮೇಲೆ ದಾಳಿ ಮಾಡಿರೋನು ನಾಳೆ ಮನುಷ್ಯರ ಮೇಲು ದಾಳಿ ಮಾಡಬಹುದು. ನಾಯಿ, ಬೆಕ್ಕುಗಳಿಗೆ ಏನಾದರೂ ಅದರೆ ಧ್ವನಿ ಎತ್ತುವ ಪ್ರಾಣಿದಯಾ ಸಂಘ ಈಗ ಎಲ್ಲಿದೆ? ನಿಮ್ಮ ಪ್ರಾಣಿಗಳ ವಿಭಾಗದಲ್ಲಿ ಹಸುಗಳು ಬರುವುದಿಲ್ವಾ  ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.

ಮಲಗಿದ್ದ ಹಸುಗಳ ಕೆಚ್ಚಲು ಕೊಯ್ದ ಕಿಡಿಗೇಡಿಗಳು, ಬೆಂಗಳೂರಿನಲ್ಲಿ ಅಮಾನವೀಯ ಕೃತ್ಯ!

ಬಿಹಾರದ ವ್ಯಕ್ತಿ ಇಲ್ಲಿ ಬಂದು ಹಸುಗಳ ಮೇಲೆ ಕ್ರೌರ್ಯ ಮೆರೆದಿದ್ದಾನೆ. ಇಂತ ಘಟನೆ ಮರುಕಳಿಸದಂತೆ ಸರ್ಕಾರ ಕಠಿಣ ಕ್ರಮ ತೆಗೆದುಕೊಳ್ಳಬೇಕು. ಗೋವುವನ್ನು ನಾವು ಹಸು ಅಂತ ನೋಡಲ್ಲ ಮಾತೆ ಎಂದು ಪೂಜಿಸುತ್ತೇವೆ. ಕುಡಿದ ಮತ್ತಿನಲ್ಲಿ ಮಾಡಿರೋದು  ಎಂದಿದ್ದಾರೆ.  ಇದು ಬೇಕೆಂದೇ ಉದ್ದೇಶಪೂರ್ವಕವಾಗಿ ಮಾಡಿರುವಂತ ವಿಕೃತಿ ಕೆಲಸ. ಬಿಎನ್ ಎಸ್ ಆಕ್ಟ್ ಅಡಿಯಲ್ಲಿ ಕೇಸ್ ಹಾಕಿದ್ದಾರೆ. ಇದು ಬೇಸರದ ವಿಷ್ಯ. ಜೊತೆಗೆ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಮಾಡಿರುವ ಪ್ರಕರಣವನ್ನು ದಾಖಲಿಸಬೇಕು ಇದು ಖಂಡಿತ ಚಿಕ್ಕ ಘಟನೆ ಅಲ್ಲ, ಏನೋ ಸಂದೇಶ ಕೊಡ್ತಿದ್ದಾರೆ ಅನ್ನಿಸುತ್ತದೆ ಎಂದಿದ್ದಾರೆ.

ಇನ್ನು ಈ ಕೃತ್ಯದಲ್ಲಿ ಬೇರೆ ಯಾರೂ ಭಾಗಿಯಾಗಿರುವುದು ಕಂಡುಬಂದಿಲ್ಲ. ಬಂಧಿತ ಆರೋಪಿಗೆ ಜನವರಿ 24ರವರೆಗೆ ನ್ಯಾಯಾಂಗ ಬಂಧನವಾಗಿದೆ. ಹಸುಗಳಿಗೆ ಚಾಮರಾಜಪೇಟೆ ಪಶು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಹಸುಗಳು ಕ್ಷೇಮವಾಗಿವೆ. ಆದರೆ, ಇನ್ನೂ ಎರಡು ವಾರ ಗಾಯ ಮಾಸಲು ಸಮಯಬೇಕಿದೆ. ಚಿಕಿತ್ಸೆ ಬಳಿಕ ಹಸುಗಳು ಅಪಾಯದಿಂದ ಪಾರಾಗಿವೆ ಎಂದು ಡಿಸಿಪಿ (ಪಶ್ಚಿಮ) ಎಸ್ ಗಿರೀಶ್ ಮಾಹಿತಿ ನೀಡಿದ್ದಾರೆ.

ಮಲಗಿದ್ದ ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿಂದ ಇಂಥ ಪೈಶಾಚಿಕ ಕೃತ್ಯಗಳು ಹೆಚ್ಚಾಗಿವೆ: ಸೂಲಿಬೆಲೆ

ಚಾಮರಾಜಪೇಟೆಯ ಓಲ್ಡ್​ ಪೆನ್ಷನ್​ ಮೊಹಲ್ಲಾದ ವಿನಾಯಕನಗರದಲ್ಲಿ ಈ ದುರ್ಘಟನೆ ನಡೆದಿತ್ತು. ಹಸುಗಳ ಮಾಲೀಕ ಕರ್ಣ ಅವರು ಕಾಟನ್​ಪೇಟೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ​ದೂರು ಆಧರಿಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು. ಚಿಕ್ಕಪೇಟೆ ಉಪ ವಿಭಾಗದ ಎಸಿಪಿ ರಮೇಶ್ ನೇತೃತ್ವದಲ್ಲಿ 20ಕ್ಕೂ ಹೆಚ್ಚು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಈ ವಿಚಾರ ತಿಳಿಯುತ್ತಿದ್ದಂತೆ ಹಿಂದೂ ಪರ ಸಂಘಟನೆಗಳು, ವಿರೋಧ ಪಕ್ಷದ ಸದಸ್ಯರು ಸೇರಿದಂತೆ ಹಲವರು ಘಟನೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. ವಿಪಕ್ಷ ನಾಯಕ‌ ಆರ್. ಅಶೋಕ್ ವೈಯುಕ್ತಿಕವಾಗಿ ಒಂದು ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.
 

Latest Videos
Follow Us:
Download App:
  • android
  • ios