ನಗರದ ದಕ್ಷಿಣ ಸಂಚಾರ ಉಪ ವಿಭಾಗದ ಪೊಲೀಸ್‌ ಠಾಣೆಗಳ ವ್ಯಾಪ್ತಿಯ ಸಾರ್ವಜನಿಕ ರಸ್ತೆಗಳಲ್ಲಿ ದ್ವಿಚಕ್ರ ವಾಹನಗಳಲ್ಲಿ ಅಪಾಯಕಾರಿ ವ್ಹೀಲಿಂಗ್‌ ಮಾಡಿದ ಘಟನೆಗಳ ಸಂಬಂಧ 26 ಪ್ರಕರಣ ದಾಖಲಿಸಿ, 26 ಮಂದಿ ಸವಾರರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.

ಬೆಂಗಳೂರು (ಜೂ.19) ನಗರದ ದಕ್ಷಿಣ ಸಂಚಾರ ಉಪ ವಿಭಾಗದ ಪೊಲೀಸ್‌ ಠಾಣೆಗಳ ವ್ಯಾಪ್ತಿಯ ಸಾರ್ವಜನಿಕ ರಸ್ತೆಗಳಲ್ಲಿ ದ್ವಿಚಕ್ರ ವಾಹನಗಳಲ್ಲಿ ಅಪಾಯಕಾರಿ ವ್ಹೀಲಿಂಗ್‌ ಮಾಡಿದ ಘಟನೆಗಳ ಸಂಬಂಧ 26 ಪ್ರಕರಣ ದಾಖಲಿಸಿ, 26 ಮಂದಿ ಸವಾರರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ದಕ್ಷಿಣ ಸಂಚಾರ ಉಪ ವಿಭಾಗದ ವ್ಯಾಪ್ತಿಯ ಚಾಮರಾಜಪೇಟೆ 5ನೇ ಕ್ರಾಸ್‌, ಹನುಮಂತನಗರ 7ನೇ ಕ್ರಾಸ್‌, ಜೆ.ಪಿ.ನಗರ ಕೆಳಸೇತುವೆ, ಇಲಿಯಾಸ್‌ ನಗರ, ಕೆ.ಎಸ್‌. ಲೇಔಟ್‌ ರಿಂಗ್‌ ರಸ್ತೆ, ಗುಬ್ಬಲಾಳ, ಅಂಜನಾಪುರ ಸೇರಿದಂತೆ ವಿವಿಧ ರಸ್ತೆಗಳಲ್ಲಿ ಯುವಕರು ದ್ವಿಚಕ್ರ ವಾಹನಗಳಲ್ಲಿ ವ್ಹೀಲಿಂಗ್‌ ಮಾಡುವ ಪ್ರವೃತ್ತಿ ಹೆಚ್ಚಿತ್ತು. ಈ ಹಿನ್ನೆಲೆಯಲ್ಲಿ ಮಫ್ತಿಯಲ್ಲಿ ಸಂಚಾರ ಪೊಲೀಸರು ರಸ್ತೆಗಳಿಗೆ ಬ್ಯಾರಿಕೇಡ್‌ ಅಳವಡಿಸಿ, ವ್ಹೀಲಿಂಗ್‌ ಮಾಡುವ ಪುಂಡರನ್ನು ಹಿಡಿದು ಪ್ರಕರಣ ದಾಖಲಿಸಿದ್ದಾರೆ.

Karnataka crime: ಬೈಕ್‌ ವ್ಹೀಲಿಂಗ್‌ ವೇಳೆ ಬಿದ್ದು ಇಬ್ಬರಿಗೆ ಗಾಯ

ಜತೆಗೆ ಸಾರ್ವಜನಿಕರು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದ ವ್ಹೀಲಿಂಗ್‌ ವಿಡಿಯೋಗಳು, ಸಾಮಾಜಿಕ ಜಾಲತಾಣ ಖಾತೆಗಳ ಪರಿಶೀಲನೆ ವೇಳೆ ಪತ್ತೆಯಾದ ವ್ಹೀಲಿಂಗ್‌ ವಾಹನಗಳು ಹಾಗೂ ಸವಾರರನ್ನು ಪತ್ತೆಹಚ್ಚಿ ಪ್ರಕರಣ ದಾಖಲಿಸಲಾಗಿದೆ.

ದಕ್ಷಿಣ ಸಂಚಾರ ಉಪವಿಭಾಗದ ಪೊಲೀಸ್‌ ಠಾಣೆಗಳ ವ್ಯಾಪ್ತಿಯಲ್ಲಿ ಕಳೆದ ಆರು ತಿಂಗಳಲ್ಲಿ ವ್ಹೀಲಿಂಗ್‌ ಸಂಬಂಧ 26 ಪ್ರಕರಣ ದಾಖಲಿಸಲಾಗಿದೆ. ಸಿಕ್ಕಿಬಿದ್ದ 26 ಮಂದಿ ಸವಾರರ ಪೈಕಿ 21 ಮಂದಿ 18 ವರ್ಷಕ್ಕಿಂತ ಮೇಲ್ಪಟ್ಟವರು ಹಾಗೂ 5 ಮಂದಿ ಅಪ್ರಾಪ್ತರು ಇದ್ದಾರೆ. ಈ ಪ್ರಕರಣದ ಸಂಬಂಧ ವಾಹನ ಮಾಲಿಕರಿಗೆ ನೋಟಿಸ್‌ ನೀಡಿ, ಸವಾರರಿಂದ ಮುಚ್ಚಳಿಕೆ ಬರೆಸಿಕೊಂಡು ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ.

ಬೆಂಗಳೂರಿನಲ್ಲಿ ಮಿತಿ ಮೀರುತ್ತಿದೆ ಪುಂಡರ ವ್ಹೀಲಿಂಗ್ ಹಾವಳಿ: ಕಡಿವಾಣಕ್ಕೆ ಟಾಸ್ಕ್‌ಫೋರ್ಸ್ ಟೀಂ ರಚನೆ

ವ್ಹೀಲಿಂಗ್‌ ಮಾಡಿದರೆ ಆರ್‌ಸಿ, ಡಿಎಲ್‌ ರದ್ದು

ಆರೋಪಿಗಳು ಎರಡನೇ ಬಾರಿ ವ್ಹೀಲಿಂಗ್‌ ಪ್ರಕರಣದಲ್ಲಿ ಭಾಗಿಯಾಗಿಯಾದರೆ ಕಠಿಣ ಕ್ರಮ ಎಚ್ಚರಿಕೆ ನೀಡಲಾಗಿದೆ. ನ್ಯಾಯಾಲಯದಲ್ಲಿ ಶಿಕ್ಷೆಯಾದ ಬಳಿಕ ಆರೋಪಿಗಳ ವಾಹನಗಳ ನೋಂದಣಿ ಪ್ರಮಾಣ ಪತ್ರ(ಆರ್‌ಸಿ) ಮತ್ತು ಚಾಲನಾ ಪರವಾನಗಿ (ಡಿಎಲ್‌) ರದ್ದುಗೊಳಿಸಲು ಕ್ರಮ ಕೈಗೊಳ್ಳಲಾಗುವುದು. ಮುಂದಿನ ದಿನಗಳಲ್ಲಿಯೂ ವ್ಹೀಲಿಂಗ್‌ ಮಾಡುವವರ ವಿರುದ್ಧ ಕಾರ್ಯಾಚರಣೆ ಮುಂದುವರೆಸುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.