ಬೆಳಗಾವಿಯ ಸೊಗಲದಲ್ಲಿ ಪಕ್ಷಿಧಾಮ: ಸಚಿವ ಈಶ್ವರ ಖಂಡ್ರೆ

ಕೇಂದ್ರ ಮೃಗಾಲಯ ಪ್ರಾಧಿಕಾರದ ಆದೇಶದಂತೆ ಈ ಜಿಂಕೆ ವನವನ್ನು ಮುಚ್ಚಲಾಗುತ್ತಿದೆ ಎಂಬ ಮಾಹಿತಿ ಇದೆ. ಜಿಂಕೆ ವನ ಪುನಶ್ಚೇತನಗೊಳಿಸಲು ಅಥವಾ ಆ ಜಾಗದಲ್ಲಿ ಪಕ್ಷಿಧಾಮ ನಿರ್ಮಿಸಲು ರಾಜ್ಯ ಸರ್ಕಾರ ಚಿಂತಿಸಿದೆ. ಪಕ್ಷಿಧಾಮ ನಿರ್ಮಿಸಲು ಪ್ರಸ್ತಾವನೆ ಸಿದ್ಧಪಡಿಸಿ, ನೀಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ: ಅರಣ್ಯ ಸಚಿವ ಈಶ್ವರ್‌ ಖಂಡ್ರೆ 

Bird Sanctuary at Sogala in Belagavi Says Minister Eshwar Khandre grg

ಬೆಂಗಳೂರು(ಜು.21): ಬೆಳಗಾವಿ ಜಿಲ್ಲೆಯ ಸೊಗಲ ಸೋಮೇಶ್ವರ ದೇವಸ್ಥಾನ ಬಳಿಯಲ್ಲಿನ ಕಿರು ಪ್ರಾಣಿ ಸಂಗ್ರಹಾಲಯ, ಜಿಂಕೆ ವನ ಪುನಶ್ಚೇತನ ಮಾಡುವುದು ಅಥವಾ ಆ ಜಾಗದಲ್ಲಿ ಪಕ್ಷಿಧಾಮ ನಿರ್ಮಿಸುವ ಕುರಿತು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಅರಣ್ಯ ಸಚಿವ ಈಶ್ವರ್‌ ಖಂಡ್ರೆ ತಿಳಿಸಿದರು. 

ಬೆಂಗಳೂರಿನಲ್ಲಿ ತಮ್ಮನ್ನು ಭೇಟಿಯಾದ ಬೈಲಹೊಂಗಲ ಶಾಸಕ ಮಹಾಂತೇಶ ಶಿವಾನಂದ ಕೌಜಲಗಿ ನೇತೃತ್ವದ ನಿಯೋಗದೊಂದಿಗೆ ಸಮಾಲೋಚನೆ ನಡೆಸಿ ಮಾತನಾಡಿ, ಕೇಂದ್ರ ಮೃಗಾಲಯ ಪ್ರಾಧಿಕಾರದ ಆದೇಶದಂತೆ ಈ ಜಿಂಕೆ ವನವನ್ನು ಮುಚ್ಚಲಾಗುತ್ತಿದೆ ಎಂಬ ಮಾಹಿತಿ ಇದೆ. ಜಿಂಕೆ ವನ ಪುನಶ್ಚೇತನಗೊಳಿಸಲು ಅಥವಾ ಆ ಜಾಗದಲ್ಲಿ ಪಕ್ಷಿಧಾಮ ನಿರ್ಮಿಸಲು ರಾಜ್ಯ ಸರ್ಕಾರ ಚಿಂತಿಸಿದೆ. ಪಕ್ಷಿಧಾಮ ನಿರ್ಮಿಸಲು ಪ್ರಸ್ತಾವನೆ ಸಿದ್ಧಪಡಿಸಿ, ನೀಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

ಬಿಜೆಪಿಯಿಂದ ಮತ್ತೆ ಕೋಮುಗಲಭೆ ಸೃಷ್ಟಿ: ಸಚಿವ ಈಶ್ವರ ಖಂಡ್ರೆ

ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ಅರಣ್ಯ ಪಡೆ ಮುಖ್ಯಸ್ಥರು) ರಾಜೀವ್‌ ರಂಜನ್‌, ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಸಂಜಯ ಎಸ್‌.ಬಿಜ್ಜೂರ್‌, ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ವನ್ಯಜೀವಿ) ಕುಮಾರ ಪುಷ್ಕರ್‌, ಬೆಳಗಾವಿಯ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮಂಜುನಾಥ ಆರ್‌. ಚೌಹಾಣ್‌ ಇತರರಿದ್ದರು.

Latest Videos
Follow Us:
Download App:
  • android
  • ios