Asianet Suvarna News Asianet Suvarna News

ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿ ಪಟ್ಟಿ ಪ್ರಕಟ, 1 ಕ್ಷೇತ್ರ ಜೆಡಿಎಸ್‌‌ಗೆ ಹಂಚಿಕೆ!

ಕರ್ನಾಟಕ ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟಗೊಂಡಿದೆ. 5 ಕ್ಷೇತ್ರಗಳಲ್ಲಿ ಬಿಜೆಪಿ ಸ್ಪರ್ಧಿಸಿದರೆ, ಒಂದು ಕ್ಷೇತ್ರವನ್ನು ಮಾತ್ರ ಜೆಡಿಎಸ್‌ಗೆ ಬಿಟ್ಟುಕೊಟ್ಟಿದೆ. 

BJP Announces Karnataka Legislative council elections candidates list ckm
Author
First Published May 11, 2024, 7:57 PM IST | Last Updated May 11, 2024, 8:11 PM IST

ಬೆಂಗಳೂರು(ಮೇ.11)  ಕರ್ನಾಟಕ ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗಿದೆ. 6 ಕ್ಷೇತ್ರದ ಪೈಕಿ ಐದು ಕ್ಷೇತ್ರದಲ್ಲಿ ಬಿಜೆಪಿ ಸ್ಪರ್ಧಿಸುತ್ತಿದೆ. ಬಿಜೆಪಿ ಮೈತ್ರಿ ಪಕ್ಷವಾಗಿರುವ ಜೆಡಿಎಸ್‌ಗೆ ಒಂದು ಸ್ಥಾನ ಬಿಟ್ಟುಕೊಡಲಾಗಿದೆ. ಈಶಾನ್ಯ ಪದವೀಧರ, ನೈರುತ್ಯ, ಬೆಂಗಳೂರು ಪದವೀಧರ, ಆಗ್ನೇಯ ಶಿಕ್ಷಕರ ಕ್ಷೇತ್ರ ಹಾಗೂ ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಬಿಜೆಪಿ ಸ್ಪರ್ಧಿಸುತ್ತಿದೆ. ಇತ್ತ ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ಜೆಡಿಎಸ್ ಸ್ಪರ್ಧೆ ಮಾಡುತ್ತಿದೆ.

ಬಿಜೆಪಿ ಅಭ್ಯರ್ಥಿ ಗಳ ಪಟ್ಟಿ ಬಿಡುಗಡೆ
ಈಶಾನ್ಯ ಪದವೀಧರ - ಅಮರನಾಥ ಪಾಟೀಲ್
ನೈರುತ್ಯ ಪದವೀಧರ - ಡಾ ಧನಂಜಯ ಸರ್ಜಿ
ಬೆಂಗಳೂರು ಪದವೀಧರ ಅ ದೇವೆಗೌಡ
ಆಗ್ನೇಯ ಶಿಕ್ಷಕರ - ವೈ ಎ ನಾರಾಯಣ ಸ್ವಾಮಿ
ದಕ್ಷಿಣ ಶಿಕ್ಷಕರ  - ಇ ಸಿ ನಿಂಗರಾಜು

ವಿಧಾನ ಪರಿಷತ್ ಚುನಾವಣೆಯಲ್ಲಿಯೂ ಬಿಜೆಪಿ- ಜೆಡಿಎಸ್ ಮೈತ್ರಿ ಮುಂದುವರೆಯುತ್ತದೆ: ಬಿ.ಎಸ್. ಯಡಿಯೂರಪ್ಪ

ಜೆಡಿಎಸ್‌ನಿಂದ ಎಸ್ ಎಲ್ ಬೋಜೇಗೌಡ ಸ್ಪರ್ಧೆ ಬಹುತೇಕ ಖಚಿತಗೊಂಡಿದೆ. ಶೀಘ್ರದಲ್ಲೇ ಜೆಡಿಎಸ್ ಅಭ್ಯರ್ಥಿಯನ್ನು ಘೋಷಿಸಲಿದೆ. ಭಾರಿ ಲೆಕ್ಕಾಚಾರದೊಂದಿಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ್ದು, ಇದೀಗ ಚುನಾವಣಾ ಕುತೂಹಲ ಮತ್ತಷ್ಟು ಹೆಚ್ಚಾಗಿದೆ.

ಈಶಾನ್ಯ ಪದವೀಧರ, ನೈರುತ್ಯ, ಬೆಂಗಳೂರು ಪದವೀಧರ, ಆಗ್ನೇಯ ಶಿಕ್ಷಕರ ಕ್ಷೇತ್ರ , ದಕ್ಷಿಣ ಶಿಕ್ಷಕರ ಕ್ಷೇತ್ರ ಹಾಗೂ  ನೈರುತ್ಯ ಶಿಕ್ಷಕರ ಕ್ಷೇತ್ರಕ್ಕೆ ಜೂನ್ 3ರಂದು ಚುನಾವಣೆ ನಡೆಯಲಿದೆ. ಮೇ.09ರಿಂದ ನಾಮಪತ್ರ ಸಲ್ಲಿಕೆ ಆರಂಭಗೊಂಡಿದೆ. ಮೇ.16 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಮೇ.17ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಇನ್ನು ನಾಮಪತ್ರ ಹಿಂಪಡೆಯಲು ಮೇ.20 ಕೊನೆಯ ದಿನವಾಗಿದೆ. ಲೋಕಸಭಾ ಚುನಾವಣೆ ಫಲಿತಾಂಶದ 2 ದಿನ ಬಳಿಕ ಅಂದರೆ ಜೂನ್ 6ರಂದು ವಿಧಾನ ಪರಿಷತ್ ಚುನಾವಣೆ ಫಲಿತಾಂಶ ಹೊರಬೀಳಲಿದೆ.

ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣ ಬಳಿಕ ಮಾಧ್ಯಮದ ಜೊತೆ ಮಾತನಾಡಿದ್ದ ಬಿಜೆಪಿ ನಾಯಕ ಬಿಎಸ್ ಯಡಿಯೂರಪ್ಪ, ಲೋಕಸಭಾ ಚುನಾವಣೆಗೆ ರಚನೆಯಾಗಿರುವ ಬಿಜೆಪಿ-ಜೆಡಿಎಸ್ ಮೈತ್ರಿ ವಿಧಾನ ಪರಿಷತ್ ಚುನಾವಣೆಯಲ್ಲೂ ಮುಂದುವರಿಯಲಿದೆ ಎಂದಿದ್ದರು. ಇದರಂತೆ ಇದೀಗ ಬಿಜೆಪಿ ಮೈತ್ರಿ ಪಕ್ಷ ಜೆಡಿಎಸ್‌ಗೆ ಒಂದು ಕ್ಷೇತ್ರ ಹಂಚಿಕೆ ಮಾಡಲಾಗಿದೆ. ಜೆಡಿಎಸ್‌ಗೆ 2 ಸ್ಥಾನ ಬಿಟ್ಟುಕೊಟ್ಟು, 4ರಲ್ಲಿ ಬಿಜೆಪಿ ಸ್ಪರ್ಧಿಸುವ ಸಾಧ್ಯತೆ ಇದೆ. ಅಂತಿಮ ನಿರ್ಧಾರ ಹೈಕಮಾಂಡ್ ತೆಗೆದುಕೊಳ್ಳಲಿದೆ ಎಂದು ಯಡಿಯೂರಪ್ಪ ಹೇಳಿದ್ದರು. ಆದರೆ ಒಂದು ಸ್ಥಾನ ಜೆಡಿಎಸ್‌ಗೆ ಹಾಗೂ 5 ಸ್ಥಾನ ಬಿಜೆಪಿ ಸೂತ್ರದಡಿ ಮೈತ್ರಿ ಸೀಟು ಹಂಚಿಕೆಯಾಗಿದೆ. 

ಲೋಕಸಭಾ ಚುನಾವಣೆ ಫಲಿತಾಂಶ ಹೊರಬರುತ್ತಿದ್ದಂತೆ ವಿಧಾನ ಪರಿಷತ್‌ಗೆ ಚುನಾವಣೆ

 

Latest Videos
Follow Us:
Download App:
  • android
  • ios