ಛಲವಾದಿ ನಾರಾಯಣಸ್ವಾಮಿ ಮೇಲ್ಮನೆ ಪ್ರತಿಪಕ್ಷದ ನಾಯಕರಾಗಿ ನೇಮಕ!

ವಿಧಾನಪರಿಷತ್ತಿನ ಪ್ರತಿಪಕ್ಷದ ನಾಯಕರನ್ನಾಗಿ ಛಲವಾದಿ ನಾರಾಯಣಸ್ವಾಮಿ ಅವರನ್ನು ನೇಮಿಸಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಆದೇಶದ ಮೇರೆಗೆ ರಾಜ್ಯ ಉಸ್ತುವಾರಿ ರಾಧಾಮೋಹನ್ ದಾಸ್ ಅಗರ್‌ವಾಲ್  ಸೋಮವಾರ ಅಧಿಕೃತವಾಗಿ ಪ್ರಕಟಿಸಿದ್ದಾರೆ.

BJP appointed C Chalavadi Narayanaswamy as Leader of the Opposition in the Legislative Council rav

ಬೆಂಗಳೂರು (ಜು.23): ವಿಧಾನಪರಿಷತ್ತಿನ ಪ್ರತಿಪಕ್ಷದ ನಾಯಕರನ್ನಾಗಿ ಛಲವಾದಿ ನಾರಾಯಣಸ್ವಾಮಿ ಅವರನ್ನು ನೇಮಿಸಲಾಗಿದೆ.ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಆದೇಶದ ಮೇರೆಗೆ ರಾಜ್ಯ ಉಸ್ತುವಾರಿ ರಾಧಾಮೋಹನ್ ದಾಸ್ ಅಗರ್‌ವಾಲ್ ಅವರು ಛಲವಾದಿ ನಾರಾಯಣಸ್ವಾಮಿ ಅವರ ನೇಮಕವನ್ನು ಸೋಮವಾರ ಅಧಿಕೃತವಾಗಿ ಪ್ರಕಟಿಸಿದ್ದಾರೆ.

ಪ್ರತಿಪಕ್ಷದ ನಾಯಕನ ರೇಸ್‌ನಲ್ಲಿ ಎನ್.ರವಿಕುಮಾರ್‌, ಸಿ.ಟಿ.ರವಿ ಹಾಗೂ ಛಲವಾದಿ ನಾರಾಯಣಸ್ವಾಮಿ ಅವರ ಹೆಸರುಗಳು ಪ್ರಮುಖವಾಗಿ ಕೇಳಿಬಂದಿದ್ದವು. ಆದರೆ, ಪಕ್ಷದ ರಾಜ್ಯಾಧ್ಯಕ್ಷ ಸ್ಥಾನವನ್ನು ಲಿಂಗಾಯತ ಸಮುದಾಯಕ್ಕೆ ಮತ್ತು ವಿಧಾನಸಭೆಯ ಪ್ರತಿಪಕ್ಷದ ನಾಯಕನ ಸ್ಥಾನವನ್ನು ಒಕ್ಕಲಿಗ ಸಮುದಾಯಕ್ಕೆ ನೀಡಿರುವುದರಿಂದ ಪರಿಷತ್ತಿನ ಪ್ರತಿಪಕ್ಷದ ನಾಯಕನ ಸ್ಥಾನವನ್ನು ಹಿಂದುಳಿದ ವರ್ಗಗಳಿಗೆ, ಅದರಲ್ಲೂ ದಲಿತ ವರ್ಗಕ್ಕೆ ನೀಡಲು ಬಿಜೆಪಿ ವರಿಷ್ಠರು ನಿರ್ಧರಿಸಿ ಛಲವಾದಿ ನಾರಾಯಣಸ್ವಾಮಿ ಅವರನ್ನು ನೇಮಿಸಿದ್ದಾರೆ.

ನೀಟ್‌, 'ಒಂದು ದೇಶ ಒಂದು ಚುನಾವಣೆ’, ಕ್ಷೇತ್ರ ವಿಂಗಡಣೆ ವಿರದ್ಧ ನಿರ್ಣಯಕ್ಕೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ

ಈ ಸಂಬಂಧ ಕರ್ನಾಟಕದ ಎಲ್ಲ ಕಾರ್ಯಕರ್ತರು, ಎಲ್ಲ ಶಾಸಕರು, ಎಲ್ಲ ಮೇಲ್ಮನೆ ಸದಸ್ಯರು, ಎಲ್ಲ ಕೇಂದ್ರ ಸಚಿವರು, ಪಕ್ಷದ ಮುಖಂಡರ ಪರವಾಗಿ ಛಲವಾದಿ ಅವರನ್ನು ಅಗರ್‌ವಾಲ್ ಅವರು ಅಭಿನಂದಿಸಿದ್ದಾರೆ. ಮೇಲ್ಮನೆಯ ನೂತನ ವಿಪಕ್ಷ ನಾಯಕರಾಗಿ ಆಯ್ಕೆಯಾದ ಛಲವಾದಿ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ(BY Vijayendra) ಮತ್ತು ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್(R ashok) ಅವರು ಅಭಿನಂದಿಸಿದ್ದು, ಶುಭ ಹಾರೈಸಿದ್ದಾರೆ. ಅವರ ನೇತೃತ್ವದಲ್ಲಿ ಮೇಲ್ಮನೆಯಲ್ಲಿ ಪಕ್ಷವು ಅತ್ಯಂತ ಸಕ್ರಿಯವಾಗಿ ಕೆಲಸ ಮಾಡುವ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.

Latest Videos
Follow Us:
Download App:
  • android
  • ios