Puttur News: ನಳಿನ್-ಡಿವಿಎಸ್ ಬ್ಯಾನರ್‌ಗ ಚಪ್ಪಲಿಹಾರ ಹಾಕಿದ ಪ್ರಕರಣ ಇಬ್ಬರ ಬಂಧನ
ನಗರದ ಬಸ್ ನಿಲ್ದಾಣದ ಬಳಿ ಬಿಜೆಪಿ ಮುಖಂಡರ ಕುರಿತು ಅವಹೇಳನಕಾರಿ ಒಕ್ಕಣೆಯ ಬ್ಯಾನರ್ ಅಳವಡಿಸಿ, ಚಪ್ಪಲಿ ಹಾರ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರಿನ ಇಬ್ಬರನ್ನು ಸೋಮವಾರ ಸಂಜೆ ವಶಕ್ಕೆ ಪಡೆದುಕೊಂಡಿರುವ ನಗರ ಠಾಣೆಯ ಪೊಲೀಸರು ಉಳಿದ ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ.
ಪುತ್ತೂರು (ಮೇ.16) ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್(Nalin kumar kateel) ಹಾಗೂ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ (DV Sadanandagowda) ಅವರೇ ಬಿಜೆಪಿ ಸೋಲಿಗೆ ಕಾರಣ ಎಂಬ ಒಕ್ಕಣೆ ಇರುವ ಬ್ಯಾನರ್ ಪುತ್ತೂರು ಕೆಸ್ಸಾರ್ಟಿಸಿ ಬಸ್ಸು ನಿಲ್ದಾಣದ ಬಳಿ ಸೋಮವಾರ ಬೆಳಗ್ಗೆ ಪ್ರತ್ಯಕ್ಷವಾಗಿದ್ದು, ಅದಕ್ಕೆ ಚಪ್ಪಲಿ ಹಾರ ಹಾಕಲಾಗಿದೆ.
ಭಾನುವಾರ ತಡರಾತ್ರಿಯೇ ಈ ಬ್ಯಾನರ್ ಅಳವಡಿಸಿದ್ದು, ಮುಂಜಾನೆ ಪೊಲೀಸರು ನಗರಸಭೆ ಸಿಬ್ಬಂದಿ ಮೂಲಕ ಅದನ್ನು ತೆರವುಗೊಳಿಸಿದರು. ಈ ಪ್ರಕರಣದ ಹಿಂದಿರುವ ವ್ಯಕ್ತಿ ಮತ್ತು ಸಂಘಟನೆ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಪುತ್ತೂರಿನ ನಿಕಟಪೂರ್ವ ಶಾಸಕ ಸಂಜೀವ ಮಠಂದೂರು ಆಗ್ರಹಿಸಿದ್ದಾರೆ. ಅಲ್ಲದೆ, ಪ್ರತಿಭಟನೆ ವೇಳೆ ಕಾರ‍್ಯಕರ್ತರೊಟ್ಟಿಗೆ ‘ಬಿಜೆಪಿ ತೇಜೋವಧೆ ಮಾಡಿದ ಹಿಂದೂ ಕಾರ್ಯಕರ್ತರಿಗೆ ಧಿಕ್ಕಾರ’ ಎಂದು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ಬಗ್ಗೆ ಪೊಲೀಸರು ಬಂಧಿಸಿದ್ದಾರೆ. ಪುತ್ತೂರು ತಾಲೂಕಿನ ನರಿಮೊಗರು ನಿವಾಸಿಗಳಾದ ವಿಶ್ವನಾಥ ಮತ್ತು ಮಾಧವ ಬಂಧಿತ ಆರೋಪಿಗಳು.
ಪುತ್ತೂರಿನಲ್ಲಿ ನಳಿನ್-ಡಿವಿಎಸ್‌ಗೆ ಶ್ರದ್ಧಾಂಜಲಿ ಬ್ಯಾನರ್: ಚಪ್ಪಲಿ ಹಾರ ಹಾಕಿ ಆಕ್ರೋಶ!
ಅವಹೇಳನಕಾರಿ ಬ್ಯಾನರ್: ಇಬ್ಬರ ಬಂಧನ
ನಗರದ ಬಸ್ ನಿಲ್ದಾಣದ ಬಳಿ ಬಿಜೆಪಿ ಮುಖಂಡರ ಕುರಿತು ಅವಹೇಳನಕಾರಿ ಒಕ್ಕಣೆಯ ಬ್ಯಾನರ್ ಅಳವಡಿಸಿ, ಚಪ್ಪಲಿ ಹಾರ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರಿನ ಇಬ್ಬರನ್ನು ಸೋಮವಾರ ಸಂಜೆ ವಶಕ್ಕೆ ಪಡೆದುಕೊಂಡಿರುವ ನಗರ ಠಾಣೆಯ ಪೊಲೀಸರು ಉಳಿದ ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ.
ಪುತ್ತೂರು ತಾಲೂಕಿನ ನರಿಮೊಗರು ನಿವಾಸಿಗಳಾದ ವಿಶ್ವನಾಥ ಮತ್ತು ಮಾಧವ ಬಂಧಿತ ಆರೋಪಿಗಳು.
ಪುತ್ತೂರು ನಗರಸಭೆಯ ಮುಖ್ಯಾಧಿಕಾರಿ ಮಧು ಎಸ್.ಮನೋಹರ್ ಪುತ್ತೂರು ನಗರ ಪೊಲೀಸ್ ಠಾಣೆಗೆ ನಗರಸಭಾ ವ್ಯಾಪ್ತಿಯ ಬಸ್ ನಿಲ್ದಾಣದ ಮುಂಭಾಗದಲ್ಲಿರುವ ಅರಣ್ಯ ಇಲಾಖೆಯ ಆವರಣದ ಬಳಿ ನಳಿನ್ ಕುಮಾರ್ ಕಟೀಲ್ ಮತ್ತು ಡಿ.ವಿ.ಸದಾನಂದ ಗೌಡರ ಹೆಸರಿನಲ್ಲಿ ಅವಹೇಳನಕಾರಿ ಬರಹ ಬರೆದು ಸರ್ಕಾರಿ ಆಸ್ತಿ ಪಾಸ್ತಿ ಮತ್ತು ಸಾರ್ವಜನಿಕ ಸ್ಥಳ ವಿರೂಪಗೊಳಿಸಿರುವ ಬಗ್ಗೆ ದೂರು ನೀಡಿದ್ದರು.
ದೂರು ದಾಖಲಿಸಿಕೊಂಡಿರುವ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದುಕೊಂಡು ಉಳಿದವರಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ.
ನಮಗೆ ಯಾರ ಮೇಲೂ ದ್ವೇಷ ಇಲ್ಲ: ಶಾಸಕ ರೈ
ಬಿಜೆಪಿ ನಡೆಸಿದ ಪ್ರತಿಭಟನೆಯಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು ಪ್ರತಿಭಟನೆಯಲ್ಲಿ ಪರೋಕ್ಷವಾಗಿ ಕಾಂಗ್ರೆಸ್ ಮೇಲೆ ಗೂಬೆ ಕೂರಿಸುವ ಪ್ರಯತ್ನ ನಡೆಸಿದ್ದಾರೆ. ಇದನ್ನು ತೀವ್ರವಾಗಿ ನಾನು ಖಂಡಿಸುತ್ತೇನೆ. ಕಾಂಗ್ರೆಸಿಗರು ಇಂತಹ ನೀಚಕೃತ್ಯಕ್ಕೆ ಯಾವತ್ತೂ ಕೈ ಹಾಕುವುದಿಲ್ಲ. ನಮಗೆ ಯಾರ ಮೇಲೂ ಧ್ವೇಷ ಇಲ್ಲ ಎಂದು ಶಾಸಕ ಅಶೋಕ್ ಕುಮಾರ್ ರೈ(MLA ashok kumar rai) ಹೇಳಿಕೆಯಲ್ಲಿ ಸ್ಪಷ್ಟಪಡಿಸಿದ್ದಾರೆ.
ಹೀನಾಯ ಸೋಲು: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕಟೀಲ್ ಶೀಘ್ರ ರಾಜೀನಾಮೆ?
ಇದು ಯಾರ ಕೃತ್ಯ ಎಂಬುದನ್ನು ಪೊಲೀಸ್ ಇಲಾಖೆ ತನಿಖೆ ನಡೆಸಬೇಕು. ಸುತ್ತಮುತ್ತಲಿರುವ ಸಿಸಿ ಕೆಮರಾ ಪರಿಶೀಲಿಸಿ ಆರೋಪಿಗಳನ್ನು ಪೊಲೀಸರು ಪತ್ತೆ ಮಾಡಬೇಕು ಎಂದು ಹೇಳಿರುವ ಅವರು, ರಾಜ್ಯದಲ್ಲಿ ಕಾಂಗ್ರೆಸ್‌ಗೆ ಮತದಾರ ನೀಡಿದ ಜನ ಬೆಂಬಲವನ್ನು ಕಂಡು ಬಿಜೆಪಿಗೆ ಆಘಾತವಾಗಿದೆ. ಹತಾಶರಾಗಿ ಅವರು ಏನೇನೋ ಹೇಳಿಕೆ ನೀಡುತ್ತಿದ್ದಾರೆ ಎಂದು ಟೀಕೆ ಮಾಡಿದ್ದಾರೆ.