Asianet Suvarna News Asianet Suvarna News

ಇಡಿ, ಐಟಿ ನೋಟಿಸ್ ಪಡೆದು ಬೆಸತ್ತಿರೋ ಡಿ.ಕೆ.ಶಿವಕುಮಾರ್‌ ಮೇಲೆ ಮತ್ತೊಂದು ಎಫ್‌ಐಆರ್ ದಾಖಲಿಸಿದ ಬಿಜೆಪಿ

ಈಗಾಗಲೇ ಜಾರಿ ನಿರ್ದೇಶನಾಲಯ (ಇಡಿ) ಹಾಗೂ ಆದಾಯ ತೆರಿಗೆ ಇಲಾಖೆ (ಐಟಿ) ನೋಟಿಸ್ ಪಡೆದು ಬೇಸತ್ತಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಮೇಲೆ ಈಗ ಬಿಜೆಪಿ ಮತ್ತೊಂದು ಎಫ್‌ಐಆರ್ ದಾಖಲಿಸಿದೆ.

BJP filed another case against DK Sivakumar after receiving ED IT notice sat
Author
First Published Apr 1, 2024, 8:35 PM IST

ಬೆಂಗಳೂರು (ಏ.01): ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಈಗಾಗಲೇ ಜಾರಿ ನಿರ್ದೇಶನಾಲಯ (ಇಡಿ) ಹಾಗೂ ಆದಾಯ ತೆರಿಗೆ ಇಲಾಖೆ (ಐಟಿ) ನೋಟಿಸ್‌ಗಳನ್ನು ಪಡೆದು ಸಾಕಾಗಿದೆ. ಲೋಸಕಭಾ ಚುನಾವಣೆ ಪ್ರಚಾರದ ವೇಳೆಯೂ ನನಗೆ ನೋಟಿಸ್‌ಗಳು ಬರುತ್ತಿವೆ ಎಂದು ಹೇಳಿಕೊಂಡಿದ್ದರು. ಈಗ ಬಿಜೆಪಿಯಿಂದ ಡಿ.ಕೆ. ಶಿವಕುಮಾರ್ ವಿರುದ್ಧ ಮತ್ತೊಂದು ಕೇಸ್ ದಾಖಲಿಸಲಾಗಿದೆ. ಈಗ ಪುನಃ ರಾಜ್ಯ ಪೊಲೀಸರಿಂದ ಮತ್ತೊಂದು ನೋಟಿಸ್ ಜಾರಿಯಾಗಲಿದೆ..

ಬಿಜೆಪಿ ಅಭಿಯಾನದ ಪೋಸ್ಟರ್ ತಿರುಚಿ ಅವಹೇಳನಕಾರಿ ಪೋಸ್ಟ್ ಮಾಡಿದ ವಿಚಾರವಾಗಿ ಹಾಗೂ ಬಿಜೆಪಿ ನಾಯಕರ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ ಆರೋಪದಡಿ ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ (ಕೆಪಿಸಿಸಿ) ಅಧ್ಯಕ್ಷರು ಹಾಗೂ ಉಪಮುಖ್ಯಮಂತ್ರಿಯೂ ಆಗಿರುವ ಡಿ.ಕೆ. ಶಿವಕುಮಾರ್ ಹಾಗೂ ಮತ್ತೊಬ್ಬ ಕೆಪಿಸಿಸಿ ಸದಸ್ಯ ಬಿ.ಆರ್. ನಾಯ್ಡು ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಬಿಜೆಪಿ ಕಾನೂನು ಪ್ರಕೋಷ್ಟ ಮಾಜಿ ಸಂಚಾಲಕ ಯೋಗೇಂದ್ರ ಹೊಡಘಟ್ಟ ಅವರು ಹೈಗ್ರೌಂಡ್ ಠಾಣೆಗೆ ಕೊಟ್ಟ ದೂರಿನ ಆಧಾರದಲ್ಲಿ ಪೊಲೀಸರು ಎಫ್ಐಆರ್ ದಾಖಲು ಮಾಡಿದ್ದಾರೆ.

ಡಿ.ಕೆ.ಶಿವಕುಮಾರ್‌ಗೆ ಮತ್ತೆ ಆದಾಯ ತೆರಿಗೆ ಇಲಾಖೆಯಿಂದ ನೋಟಿಸ್‌!

ಬಿಜೆಪಿಯ ಯೋಗೇಂದ್ರ ಹೊಡಘಟ್ಟ ಅವರು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಗೆ ಖಾಸಗಿ ದೂರು ಸಲ್ಲಿಸಿದ್ದರು. ಬಿಜೆಪಿಯ ನಾನು ಕರಸೇವಕ, ನನ್ನನ್ನೂ ಬಂಧಿಸಿ ಅಭಿಯಾನವನ್ನು ಬಿಜೆಪಿ ಹಮ್ಮಿಕೊಂಡಿತ್ತು. ಈ ಬಿಜೆಪಿ ಅಭಿಯಾನದ ಪೋಸ್ಟರ್ ತಿರುಚಿ ಅವಹೇಳನಕಾರಿ ಪೋಸ್ಟ್ ಹಂಚಲಾಗಿದೆ. ಜೊತೆಗೆ, ಕಾಂಗ್ರೆಸ್ ಪಕ್ಷವೂ ಕೂಡ ತಿರುಚಿದ ಪೋಸ್ಟ್ ಹಂಚಿಕೊಂಡಿತ್ತು. ಫೋರ್ಜರಿ ಹಾಗೂ ಎರಡು ಗುಂಪುಗಳ‌ ನಡುವೆ ದ್ವೇಷ ಮೂಡಿಸಿದ ಆರೋಪವನ್ನೂ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ತನಿಖೆಗೆ ಆದೇಶಿಸಿತ್ತು. ವಿಶೇಷ ನ್ಯಾಯಾಲಯದ ಆದೇಶದ ಮೇರೆಗೆ ಹೈಗ್ರೌಂಡ್ಸ್‌ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಿಸಲಾಗಿದೆ.

BJP filed another case against DK Sivakumar after receiving ED IT notice sat

Follow Us:
Download App:
  • android
  • ios