Asianet Suvarna News Asianet Suvarna News

ಬಿಜೆಪಿ ಸರ್ಕಾರದ ಜಾರಿಗೆ ತಂದಿದ್ದ ಕಾನೂನುಗಳ ವಾಪಸ್? ಭೂ ಕಂದಾಯ ತಿದ್ದುಪಡಿ ವಿಧೇಯಕಕ್ಕೆ ಕೊಕ್!

ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾರಿಗೆ ತರಲಾಗಿದ್ದ ಪ್ರಮುಖ ಕಾನೂನುಗಳನ್ನು ರದ್ದುಗೊಳಿಸಲು ಕಾಂಗ್ರೆಸ್ ಸರ್ಕಾರದಿಂದ ತೀರ್ಮಾನಿಸಲಾಗಿದೆ.

BJP government implemented Land Revenue Amendment Bill will cancelled sat
Author
First Published Dec 7, 2023, 11:11 PM IST

ಬೆಂಗಳೂರು (ಡಿ.07): ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾರಿಗೆ ತರಲಾಗಿದ್ದ ಕೆಲವು ಕಾನೂನುಗಳನ್ನು ರದ್ದುಗೊಳಿಸಲು ಹಾಲಿ ಕಾಂಗ್ರೆಸ್ ಸರ್ಕಾರ ಸಚಿವ ಸಂಪುಟ ಸಭೆಯನ್ನು ತೀರ್ಮಾಣ ಕೈಗೊಳ್ಳಲಾಗಿದೆ. ಅವುಗಳಲ್ಲಿ ಮುಖ್ಯವಾಗಿ ಕರ್ನಾಟಕ ಭೂ ಕಂದಾಯ ತಿದ್ದುಪಡಿ ಕಾನೂನನ್ನು ವಾಪಸ್ ಪಡೆಯಲು ತೀರ್ಮಾನಿಸಲಾಗಿದೆ ಎಂದು ತಿಳದುಬಂದಿದೆ.

ಹೌದು, ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾರಿಯಾಗಿದ್ದ ಕಾನೂನಿಗೆ ಕೋಕ್ ಕೊಡಲು ಕಾಂಗ್ರೆಸ್ ಸರ್ಕಾರ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದ ಬಳಿಕ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಣಯ ಕೈಗೊಳ್ಳಲಾಗಿದೆ. ಮುಖ್ಯವಾಗಿ ಬಿಜೆಪಿ ಸರ್ಕಾರದಲ್ಲಿ ಜಾರಿಗೆ ತರಲಾಗಿದ್ದ ಕರ್ನಾಟಕ ಭೂ ಕಂದಾಯ ತಿದ್ದುಪಡಿ ವಿಧೇಯಕಯನ್ನು  ವಾಪಾಸ್ ಪಡೆಯಲು ಸಚಿವ ಸಂಪುಟದಲ್ಲಿ ತೀರ್ಮಾನ ಮಾಡಲಾಗಿದೆ ಎಂದು ತಿಳಿದುಬಂದಿದೆ.

ದೇಶದ ಸಂಪತ್ತು ಒಂದೇ ಕೋಮಿಗೆ ಹಂಚಲು ಅದೇನು ಸಿದ್ದರಾಮಯ್ಯನವರ ಪಿತ್ರಾರ್ಜಿತ ಆಸ್ತಿಯೆ?: ಕುಯಿಲಾಡಿ

ಕೃಷಿ ಭೂಮಿಯನ್ನು ಯಾರು ಬೇಕಾದರೂ ಖರೀದಿ ಮಾಡಬಹುದೆನ್ನುವ ಕಾನೂನು ರದ್ದು ಮಾಡಲಾಗುತ್ತಿದೆ ಎಂಬ ಸುಳಿವು ಸಿಕ್ಕಿದೆ. ಈ ಅಧಿವೇಶನದಲ್ಲಿ ತಿದ್ದುಪಡಿ ವಿಧೇಯಕ ಮಂಡನೆ ಮಾಡಲು ಸರ್ಕಾರ ನಿರ್ಣಯ ಮಾಡಿದೆ. ಈ ಮೊದಲು ಕೃಷಿ ಭೂಮಿ‌ ಹೊಂದಿದವರು ಮಾತ್ರ ಕೃಷಿ ಭೂಮಿ ಖರೀದಿಗೆ ಅವಕಾಶ ಇತ್ತು. ಆದರೆ, 2022ರಲ್ಲಿ ಕರ್ನಾಟಕ ಭೂ ಕಂದಾಯ ತಿದ್ದುಪಡಿ ವಿದೇಯಕದ ಮೂಲಕ ಯಾರು ಬೇಕಾದರು ಕೃಷಿ ಭೂಮಿ ಖರೀದಿಗೆ ಅವಕಾಶ ಮಾಡಿ ಕೊಡಲಾಗಿತ್ತು. ಬಿಜೆಪಿ ಸರ್ಕಾರದ ಅವಧಿಯಲ್ಲಿ ಈ ಕಾನೂನು ಜಾರಿಯಾಗಿತ್ತು.

ನನಗೆ ಅವಕಾಶ ಕೊಟ್ರೆ ಸಾವರ್ಕರ್ ಫೋಟೋವನ್ನು ಇವತ್ತೇ ತೆಗೀತೀನಿ: ಪ್ರಿಯಾಂಕ ಖರ್ಗೆ

ಇನ್ನು ಬಿಜೆಪಿ ಆಡಳಿತಾವಧಿಯಲ್ಲಿ ಜಾರಿಗೆ ತಂದ ಈ ಕಾನೂನಿಗೆ ಕಾಂಗ್ರೆಸ್ ತೀವ್ರ ವಿರೋಧ ವ್ಯಕ್ತಪಡಿಸಿತ್ತು. ಎಷ್ಟೇ ಹೋರಾಟ ನಡೆಸಿದರೂ ಬಿಜೆಪಿ ಸರ್ಕಾರ ಕ್ಯಾರೇ ಎನ್ನದೇ ಕಾಯ್ದೆ ಜಾರಿ‌ ಮಾಡಿತ್ತು. ಆದರೆ, ಸಿದ್ದರಾಮಯ್ಯ ಸರ್ಕಾರದಲ್ಲಿ ಕಾಯಿದೆ ಬದಲಾವಣೆ ಮಾಡಲು ತಿರ್ಮಾನ ಮಾಡಲಾಗಿದೆ. ಈ ಮೂಲಕ ಕರ್ನಾಟಕ ಭೂ ಕಂದಾಯ ತಿದ್ದುಪಡಿ ವಿದೇಯಕವನ್ನ ವಾಪಾಸ್ ಪಡೆಯಲು ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಹೇಳಲಾಗುತ್ತಿದೆ. ಜೊತೆಗೆ, ಕೆಲವೊಂದು ಹೊಸ  ತಿದ್ದುಪಡಿಯೊಂದಿಗೆ ನೂತ‌ನ ವಿದೇಯಕವನ್ನು ಈ ಬಾರಿಯ ಅದಿವೇಶನದಲ್ಲೆ ಮಂಡಿಸಲು ತೀರ್ಮಾನಿಸಲಾಗಿದೆ. ಈ ಮೂಲಕ ಶ್ರೀಮಂತರು ರೈತರಿಂದ ಕೃಷಿ ಭೂಮಿ ಖರೀದಿ ಮಾಡುವುದನ್ನು ತಡೆಗಟ್ಟಲು ಹೊಸ ವಿಧೇಯಕ ತರಲಾಗುತ್ತದೆ ಎಂದು ರಾಜ್ಯ ಸರ್ಕಾರ ಹೇಳುತ್ತಿದೆ. ಇನ್ನು ಸರ್ಕಾರದ ನಿರ್ಧಾರಕ್ಕೆ ಪ್ರತಿಪಕ್ಷ ವಿರೋಧ ವ್ಯಕ್ತಪಡಿಸುವ ಸಾಧ್ಯತೆಯಿದೆ.

Follow Us:
Download App:
  • android
  • ios