Asianet Suvarna News Asianet Suvarna News

ಲೋಕಸಭೆಯಲ್ಲಿ ಬಿಜೆಪಿ ಸೋಲುವ ಭಯದಿಂದ ತುರ್ತಾಗಿ, ಸಿಎಎ ಜಾರಿ ಮಾಡಿದೆ: ಗೃಹ ಸಚಿವ ಪರಮೇಶ್ವರ

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಸೋಲಿನ ಭಯ ಶುರುವಾಗಿದ್ದರಿಂದ ತುರ್ತಾಗಿ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಅಧಿಸೂಚನೆ ಹೊರಡಿಸಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ವ್ಯಂಗ್ಯವಾಡಿದರು. 

BJP government urgently implemented CAA for Lok sabha election defeat fear says Parameshwar sat
Author
First Published Mar 11, 2024, 8:11 PM IST

ಬೆಂಗಳೂರು (ಮಾ.11): ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಸೋಲಿನ ಭಯ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಅಧಿಸೂಚನೆ ಹೊರಡಿಸಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ವ್ಯಂಗ್ಯವಾಡಿದರು. 

ವಿಧಾನಸೌಧದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಪೌರತ್ವ ತಿದ್ದುಪಡಿ ಕಾಯ್ದೆಗೆ ಬಹಳಷ್ಟು ಜನರು ವಿರೋಧ ವ್ಯಕ್ತಪಡಿಸಿರುವುದನ್ನು ನಾವೆಲ್ಲ ನೋಡಿದ್ದೇವೆ. ಇದರ ನಡುವೆಯೂ ಕೇಂದ್ರ ಸರ್ಕಾರ ಇಂತಹ ನಿರ್ಧಾರಕ್ಕೆ ಬಂದಿದೆ. ಚುನಾವಣೆ ದೃಷ್ಟಿಯಿಂದ ಈ ತೀರ್ಮಾನ ತೆಗೆದುಕೊಂಡಿದ್ದಾರೆ. ಇದರಲ್ಲಿ ರಾಜಕಿಕಯ ಉದ್ದೇಶವಿದೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಬಿಜೆಪಿಯವರಿಗೆ ಎಲ್ಲೋ ಒಂದು ಕಡೇ ಸೋಲಿನ ಆತಂಕ ಕಾಡುತ್ತಿದೆ. ಹೆಚ್ಚು ಸ್ಥಾನ ಗೆಲ್ಲುತ್ತೇವೆ ಎಂದು ಹೇಳಿಕೊಳ್ಳುತ್ತರಾದರೂ ಸೋಲಿನ ಭಯವಿದೆ. ಬಿಜೆಪಿಯವರಿಗೆ ಮತ್ತೆ ಅಧಿಕಾರಕ್ಕೆ ಬರುತ್ತೇವೆ ಎಂಬ ವಿಶ್ವಾಸ ಕಡಿಮೆಯಾದಂತಿದೆ. ಅದಕ್ಕಾಗಿ ಇಂತಹ ತೀರ್ಮಾನ ತೆಗೆದುಕೊಂಡಿದ್ದಾರೆ ಎಂದು ಹೇಳಿದರು.

ಭಾರತದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಅಧಿಸೂಚನೆ ಜಾರಿಗೊಳಿಸಿದ ಕೇಂದ್ರ ಸರ್ಕಾರ

ಸೈಬರ್ ಕ್ರೈಂ ವಿಷಯಗಳ ಕುರಿತು ಸಭೆ: ಸುಳ್ಳು ಸುದ್ದಿ ಹರಡುವುದು, ಫೋಟೋ ಮತ್ತು ವಿಡಿಯೋಗಳನ್ನು ತಿರುಚಿ ಬಿತ್ತರಿಸುವುದು ಸೇರಿದಂತೆ ವಿವಿಧ ರೀತಿಯ ಸೈಬರ್ ಕ್ರೈಂ ನಡೆಯುತ್ತಿವೆ. ಇಂತಹ ಪ್ರಕರಣಗಳಿಗೆ ಯಾವ ರೀತಿ ಕ್ರಮ ತೆಗದುಕೊಳ್ಳಬೇಕು ಎಂಬುದರ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಂಮತ್ರಿ‌ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸೈಬರ್ ಕ್ರೈಂ ವಿಷಯಗಳ ಕುರಿತ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ. ಇನ್ನೆರಡು ದಿನಗಳಲ್ಲಿ ಸರ್ಕಾರ ಆದೇಶ‌ ಹೊರಡಿಸುತ್ತದೆ. ಮಲ್ಟಿ ಡಿಪಾರ್ಟ್‌ಮೆಂಟ್ ಕೋರ್ಡಿನೇಷನ್ ಕಮಿಟಿಯನ್ನು ರಚಿಸಲಾಗಿದೆ. ಇದಕ್ಕೆ ಹಿರಿಯ ಪೊಲೀಸ್ ಅಧಿಕಾರಿ ಮುಖ್ಯಸ್ಥರಾಗಿರುತ್ತಾರೆ. ನೋಡಲ್ ಅಧಿಕಾರಿಯನ್ನು ನೇಮಿಸಲಾಗುತ್ತದೆ. ನೋಡಲ್ ಅಧಿಕಾರಿಗೆ ಹೆಚ್ಚಿನ ಜವಾಬ್ಧಾರಿಯನ್ನು ವಹಿಸಲಾಗುತ್ತಿದೆ. ಡಿಜಿ ಮತ್ತು ಐಜಿಪಿ ಮೂಲಕ ಸರ್ಕಾರಕ್ಕೆ ಮಾಹಿತಿ ಕೊಡುತ್ತಾರೆ ಎಂದು ವಿವರಿಸಿದರು‌.

ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಪ್ರತಿಭಟನೆ: ಕೈಗೆ ಸಿಕ್ಕ ರೈತರನ್ನು ಎಳೆದೊಯ್ಯುತ್ತಿರುವ ಪೊಲೀಸರು!

ಬ್ಯಾಡಗಿ ಮಾರುಕಟ್ಟೆ ಅವಘಡದ ವರದಿ ಆಧರಿಸಿ ಕ್ರಮ: ಹಾವೇರಿ ಜಿಲ್ಲೆ ಬ್ಯಾಡಗಿಯಲ್ಲಿ ರೈತರ ಪ್ರತಿಭಟನೆ ಹಾಗೂ ಎಪಿಎಂಸಿ ಕಚೇರಿ ಮತ್ತು ಕಾರುಗಳಿಗೆ ಬೆಂಕಿ ಹಚ್ಚಿದ ಘಟನೆಯ ಕುರಿತು ಮಾತನಾಡಿದ ಅವರು, ಮೆಣಸಿನಕಾಯಿ ದರ ರೂ. 20 ಸಾವಿರ ರೂ.ದಿಂದ 12 ಸಾವಿರ ರೂ.ಗೆ ಕುಸಿತವಾಗಿದ್ದರಿಂದ ಹಾವೇರಿ ಎಪಿಎಂಸಿ ಮಾರುಕಟ್ಟೆಯಲ್ಲಿ ಗಲಾಟೆಯಾಗಿದೆ ಎಂಬುದು ಗೊತ್ತಾಗಿದೆ. ಈ ರೀತಿಯ ದರ ಕುಸಿತ ಎಲ್ಲ‌‌ ಎಪಿಎಂಸಿ ಮಾರುಕಟ್ಟೆಗಳಲ್ಲಿ ಆಗಿದಿಯಾ ಅಥವಾ ಹಾವೇರಿ ಮಾರುಕಟ್ಟೆಯಲ್ಲಿ ಮಾತ್ರ ಆಗಿದಿಯಾ ಎಂಬುದರ ಬಗ್ಗೆ ಪರಿಶೀಲಿಸಲಾಗುತ್ತಿದೆ. ಎಪಿಎಂಸಿ ಕಚೇರಿಗೆ ನುಗ್ಗಿ ಪೀಠೋಪಕರಣ ಧ್ವಂಸ ಮಾಡಲಾಗಿದೆ. ಒಂದೇ ದಿನದಲ್ಲಿ 12 ಸಾವಿರಕ್ಕೆ ದರ‌ ಕುಸಿಯಲು ಏನು ಕಾರಣವೇನು ಎಂಬುದನ್ನು ತಿಳಿಯಲು ವರದಿ ನೀಡುವಂತೆ ಮುಖ್ಯಮಂತ್ರಿಯವರು ಸೂಚಿಸಿದ್ದಾರೆ. ವರದಿ ಆಧರಿಸಿ  ಮುಂದಿನ ಕ್ರಮ ಕೈಗೊಳ್ಳಲಾಗುವುದು‌ ಎಂದು ತಿಳಿಸಿದರು.

Follow Us:
Download App:
  • android
  • ios