ಕಳಸಾ ಬಂಡೂರಿ ಯೋಜನೆ ಡಿಪಿಆರ್ ಆಗೋದೆ ಇಲ್ಲ ಎನ್ನುತ್ತಿದ್ದವರಿಗೆ ಬಿಜೆಪಿ ಸರ್ಕಾರ ಉತ್ತರ ನೀಡಿದೆ: ಪ್ರಲ್ಹಾದ್ ಜೋಶಿ

ಮಹದಾಯಿ - ಕಳಾಸ ಭಂಡೂರಿ ಹೋರಾಟಕ್ಕೆ ಕೊನೆಗೂ ಕರ್ನಾಟಕಕ್ಕೆ ಜಯ ಸಿಕ್ಕಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ. ಕಳಸಾ ಬಂಡೂರಿ ಯೋಜನೆಯ ಡಿಪಿಆರ್ ಆಗುವುದೇ ಇಲ್ಲ ಎಂಬ ರೀತಿಯಲ್ಲಿ ಕಾಂಗ್ರೆಸ್ ಮಾತನಾಡಿತ್ತು.

BJP govt cleared the Kalasa-Banduri Nala project says union minister Pralhad Joshi gow

ಬೆಂಗಳೂರು (ಡಿ.29): ಮಹದಾಯಿ - ಕಳಾಸ ಭಂಡೂರಿ ಹೋರಾಟಕ್ಕೆ ಕೊನೆಗೂ ಕರ್ನಾಟಕಕ್ಕೆ ಜಯ ಸಿಕ್ಕಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ. ಕಳಸಾ ಬಂಡೂರಿ ಯೋಜನೆಯ ಡಿಪಿಆರ್ ಆಗುವುದೇ ಇಲ್ಲ ಎಂಬ ರೀತಿಯಲ್ಲಿ ಕಾಂಗ್ರೆಸ್ ಮಾತನಾಡಿತ್ತು. ಆದರೆ ಈ ಟೀಕೆಗೆ ಕೇಂದ್ರ ಸರ್ಕಾರ ಇಂದು ಉತ್ತರ ನೀಡಿದೆ. ಕೇಂದ್ರ ಜಲ ಆಯೋಗವು ಕರ್ನಾಟಕದ ಕಳಸಾ ಬಂಡೂರಿ ವಿಸ್ತೃತ ಯೋಜನಾ ವರದಿಗೆ ಅನುಮತಿಯನ್ನು ನೀಡಿದೆ. 

ಕಿತ್ತೂರು ಕರ್ನಾಟಕ, ಹುಬ್ಬಳ್ಳಿ ಧಾರವಾಡ, ಬೆಳಗಾವಿ ಜಿಲ್ಲೆಗಳಿಗೆ ಈ ಕುಡಿಯುವ ನೀರಿನ ಯೋಜನೆ ಅತ್ಯವಶ್ಯಕವಾಗಿತ್ತು. ಮಹದಾಯಿ ತೀರ್ಪು ಬಂದಾಗಲು ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ಗೆಜೆಟ್ ನೋಟಿಫಿಕೇಶನ್ ಹೊರಡಿಸಿ, ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಂಡಿತ್ತು. ಇದೀಗ ಕಳಸಾ ಮತ್ತು ಬಂಡೂರಿ ಕುಡಿಯುವ ನೀರಿನ ಯೋಜನೆಯ ಡಿಪಿಆರ್ ಗೂ ಸಹ ಅನಮೋದನೆ ನೀಡುವ ಮೂಲಕ ಸುಗಮವಾಗಿ ಯೋಜನೆ ಅನುಷ್ಠಾನಗೊಳಿಸಲು ಸಹಕರಿಸಿದೆ ಎಂದು ಪ್ರಲ್ಹಾದ್ ಜೋಶಿ ಅಭಿಪ್ರಾಯ ವ್ಯಕ್ತಪಡಿಸಿದರು. 

ಕರ್ನಾಟಕಕ್ಕೆ ಅತ್ಯಂತ ಅವಶ್ಯಕವಾಗಿದ್ದ ಈ ಯೋಜನೆ ಜಾರಿಯಾಗಲೇ ಬೇಕು ಎಂದು ಪ್ರಲ್ಹಾದ್ ಜೋಶಿ ಸೇರಿದಂತೆ ಕರ್ನಾಟಕದ ಹಲವು ರೈತ ಮುಖಂಡರು ಆಗ್ರಹಿಸಿದ್ದರು. ಈ ನಿಟ್ಟಿನಲ್ಲಿ ಸಿಎಂ ಬೊಮ್ಮಾಯಿ, ಕರ್ನಾಟಕದ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರ ಜೊತೆ ದೆಹಲಿಯಲ್ಲಿ ಕೇಂದ್ರ ಸವಿವ ಪ್ರಲ್ಹಾದ್ ಜೋಶಿ, ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರೊಂದಿಗೆ ಮಹತ್ವದ ಸಭೆ ನಡೆಸಿದ್ದರು.

ಕಳಸಾ ಬಂಡೂರಿ ಡಿಪಿಆರ್‌ಗೆ ಕೇಂದ್ರ ಒಪ್ಪಿಗೆ: ಹೋರಾಟ ನೆನೆದು ಭಾವುಕರಾದ ಸಿಎಂ ಬೊಮ್ಮಾಯಿ

ಸರಿಯಾದ ರೀತಿಯಲ್ಲಿ ಕರ್ನಾಟಕದಿಂದ ಡಿಪಿಆರ್ ಕಳಿಸುವಂತೆ ಗೋವಿಂದ ಕಾರಜೋಳ ಅವರಿಗೆ ಸೂಚಿಸಿದ್ದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಗಜೇಂದ್ರ ಸಿಂಗ್ ಶೇಖಾವತ್ ಅವರೊಂದಿಗೆ ಚರ್ಚಿಸಿ ಯೋಜನೆಯ ಡಿಪಿಆರ್ ಗೆ ಅನುಮತಿ ಕೊಡಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕಳಸಾ ಬಂಡೂರಿ ಯೋಜನೆಗೆ ಪ್ರಮುಖ ತಿರುವು, ಸುದೀರ್ಘ ಹೋರಾಟಕ್ಕೆ ಸಿಕ್ಕ ಗೆಲುವು!

ಕಳಸಾ ಬಂಡೂರಿ ಯೋಜನೆಯ ಡಿಪಿಆರ್ ಗೆ ಅನುಮೋದನೆ ನೀಡಿದ್ದಕ್ಕಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ, ಗೃಹ ಸಚಿವರಾದ ಅಮಿತ್ ಶಾ ಹಾಗೂ ಕೇಂದ್ರ ಜಲ ಶಕ್ತಿ ಸಚಿವರಾದ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಯವರು ಧನ್ಯವಾದಗಳನ್ನ ತಿಳಿಸಿದ್ದಾರೆ. ಅಲ್ಲದೇ ಯೋಜನೆಯ ಅನುಮೋದನೆಗಾಗಿ ರಚನಾತ್ಮಕ ಯೋಜನಾ ವರದಿಯನ್ನು ನಿರೂಪಿಸಿದ ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರಕ್ಕೆ ನಿಕಟಪೂರ್ವ ಮುಖ್ಯಮಂತ್ರಿಗಳಾದ  ಬಿ.ಎಸ್ ಯಡಿಯೂರಪ್ಪ ಅವರಿಗೆ ಹಾಗೂ ರಾಜ್ಯದ ನೀರಾವರಿ ಸಚಿವರಾದ ಗೋವಿಂದ್ ಕಾರಜೋಳ ಅವರಿಗೂ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು ಧನ್ಯವಾದಗಳನ್ನ ಅರ್ಪಿಸಿದ್ದಾರೆ.

Latest Videos
Follow Us:
Download App:
  • android
  • ios