ದೇಶಕ್ಕಾಗಿ ಬಿಜೆಪಿ ಯಾವತ್ತೂ ಬಲಿದಾನ ಮಾಡಿಲ್ಲ: ಸಿದ್ದರಾಮಯ್ಯ
ಸ್ವಾತಂತ್ರ್ಯ ಪೂರ್ವ ಹಾಗೂ ಸ್ವಾತಂತ್ರ್ಯ ನಂತರದಲ್ಲಿ ದೇಶಕ್ಕಾಗಿ ತ್ಯಾಗ, ಬಲಿದಾನ ಮಾಡಿರುವುದು ಕಾಂಗ್ರೆಸ್ ಪಕ್ಷದವರು ಮಾತ್ರ. ಬಿಜೆಪಿ ಮುಖಂಡರು ಯಾವತ್ತೂ ತ್ಯಾಗ ಬಲಿದಾನ ಮಾಡಿಲ್ಲ. ಸ್ವಾತಂತ್ರ್ಯ ಹಾಗೂ ದೇಶಕ್ಕಾಗಿ ಹೋರಾಟ ಮಾಡಿ ತ್ಯಾಗ ಬಲಿದಾನ ಮಾಡಿದವರು ಬಿಜೆಪಿಲ್ಲಿ ಯಾರಾದರೂ ಇದ್ದಾರಾಯೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.

ಬೆಂಗಳೂರು (ನ.20): ಸ್ವಾತಂತ್ರ್ಯ ಪೂರ್ವ ಹಾಗೂ ಸ್ವಾತಂತ್ರ್ಯ ನಂತರದಲ್ಲಿ ದೇಶಕ್ಕಾಗಿ ತ್ಯಾಗ, ಬಲಿದಾನ ಮಾಡಿರುವುದು ಕಾಂಗ್ರೆಸ್ ಪಕ್ಷದವರು ಮಾತ್ರ. ಬಿಜೆಪಿ ಮುಖಂಡರು ಯಾವತ್ತೂ ತ್ಯಾಗ ಬಲಿದಾನ ಮಾಡಿಲ್ಲ. ಸ್ವಾತಂತ್ರ್ಯ ಹಾಗೂ ದೇಶಕ್ಕಾಗಿ ಹೋರಾಟ ಮಾಡಿ ತ್ಯಾಗ ಬಲಿದಾನ ಮಾಡಿದವರು ಬಿಜೆಪಿಲ್ಲಿ ಯಾರಾದರೂ ಇದ್ದಾರಾಯೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.
ಭಾನುವಾರ ಕೆಪಿಸಿಸಿ ಕಚೇರಿಯಲ್ಲಿ ಆಯೋಜಿಸಿದ್ದ ಮಾಜಿ ಪ್ರಧಾನಿ ದಿ.ಇಂದಿರಾ ಗಾಂಧಿ ಅವರ 106ನೇ ಜನ್ಮ ದಿನಾಚರಣೆಯಲ್ಲಿ ಮಾತನಾಡಿದ ಅವರು, ದೇಶದ ಸಮಸ್ಯೆಗಳಿಗೆ ಸ್ಪಂದಿಸಿ, ಜಾತ್ಯತೀತ ತತ್ವ, ಸಾಮಾಜಿಕ ನ್ಯಾಯ, ಬಡವರ ಪರ ಕಾಳಜಿ ತೋರುತ್ತಾ ಸಮ ಸಮಾಜ ನಿರ್ಮಾಣಕ್ಕೆ ಕಾನೂನು ಮಾಡಿದ್ದು ಕಾಂಗ್ರೆಸ್ ಪಕ್ಷ ಮಾತ್ರ. ಬ್ಯಾಂಕ್‌ಗಳನ್ನು ರಾಷ್ಟ್ರೀಕರಣ ಮಾಡಿ, ಅದರ ಬಾಗಿಲುಗಳನ್ನು ರೈತರು ಹಾಗೂ ಬಡವರಿಗೆ ತೆರೆಯುವಂತೆ ಮಾಡಿದರು. ಆದರೆ ಈಗ ಪ್ರಧಾನಿ ನರೇಂದ್ರ ಮೋದಿ ಬ್ಯಾಂಕುಗಳನ್ನು ಖಾಸಗಿಕರಣ ಮಾಡುತ್ತಿದ್ದಾರೆ. ಮೋದಿ ಶ್ರೀಮಂತರ ಸಾಲ ಮನ್ನಾ ಮಾಡುತ್ತಾರೆಯೇ ಹೊರತು ರೈತರು ಹಾಗೂ ಬಡವರದ್ದಲ್ಲ ಎಂದು ಟೀಕಿಸಿದರು
ನನ್ನನ್ನು ಸುಮ್ನೆ ಕೆಣಕಬೇಡಿ : ಸಿಎಂ ಸಿದ್ದುಗೆ ಎಚ್‌ಡಿಕೆ ವಾರ್ನಿಂಗ್!
ಕೆಪಿಸಿಸಿ ಅಧ್ಯಕ್ಷರೂ ಆದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾತನಾಡಿ, ದೇಶವು ಬದಲಾವಣೆಯಾಗಿದ್ದರೆ ಅದು ಇಂದಿರಾಗಾಂಧಿ ಮತ್ತು ನೆಹರೂ ಅವರ ಅಧಿಕಾರದ ಅವಧಿಯಲ್ಲಿ. ಯಾರೂ ಸಹ ಈ ಇತಿಹಾಸ ಬದಲಿಸಲು ಸಾಧ್ಯವಿಲ್ಲ ಎಂದರಲ್ಲದೇ, ಇಂದಿರಾಗಾಂಧಿ ಬಗ್ಗೆ ಸೋನಿಯಾ ಗಾಂಧಿ ಇಂಗ್ಲಿಷ್‌ನಲ್ಲಿ ಬರೆದಿರುವ ಪುಸ್ತಕವನ್ನು ಮುಂದಿನ ದಿನಗಳಲ್ಲಿ ಕನ್ನಡಕ್ಕೆ ಅನುವಾದಿಸಿ ಬಿಡುಗಡೆಗೊಳಿಸಲಾಗುವುದು ಎಂದರು.
ಅಧಿಕಾರ ಸ್ವೀಕಾರ:
ಬೆಂಗಳೂರು ನಗರ ಜಿಲ್ಲೆಯ ಪ್ರದೇಶ ಕಾಂಗ್ರೆಸ್ ಸಮಿತಿಯ ಐದು ಘಟಕಗಳ ಅಧ್ಯಕ್ಷರಾಗಿ ಹನುಮಂತರಾಯಪ್ಪ (ಪಶ್ಚಿಮ), ಅಬ್ದುಲ್ ವಾಜೀದ್ (ಉತ್ತರ), ಗೌತಮ್ (ಕೇಂದ್ರ) ಮತ್ತು ಓ.ಮಂಜುನಾಥ್ (ದಕ್ಷಿಣ) ಅಧಿಕಾರ ಸ್ವೀಕರಿಸಿದರು. ಮತ್ತೋರ್ವ ಅಧ್ಯಕ್ಷ ವಿಜಯ್ ಕುಮಾರ್ ಅನಾರೋಗ್ಯದಿಂದ ಗೈರಾಗಿದ್ದರು.
ಸಚಿವ ಬೈರತಿ ಸುರೇಶ್, ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ್, ಮಾಜಿ ಸಚಿವರಾದ ರಾಣಿ ಸತೀಶ್, ಎಚ್. ಆಂಜನೇಯ, ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್, ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಮತ್ತಿತರರು ಉಪಸ್ಥಿತರಿದ್ದರು.
ಟೆಂಟಲ್ಲಿ ನೀಲಿ ಚಿತ್ರ ತೋರಿಸಿ ಜೀವನ ಮಾಡಿದವನು ಡಿಕೆಶಿ: ಎಚ್‌ಡಿಕೆ ವಾಗ್ದಾಳಿ
ಲೋಕಸಭೆ ಗೆಲುವಿಗೆ ಟಾರ್ಗೆಟ್
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ರಾಜ್ಯದ ಎಲ್ಲ 28 ಸ್ಥಾನಗಳು ಮತ್ತು ಬೆಂಗಳೂರು ನಗರದ 3 ಸ್ಥಾನಗಳಲ್ಲಿಯೂ ಕಾಂಗ್ರೆಸ್ ಗೆಲ್ಲಬೇಕು. ಜತೆಗೆ ಬಿಬಿಎಂಪಿ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರ ಹಿಡಿಯಬೇಕು ಎಂದು ಬೆಂಗಳೂರು ನಗರ ಕಾಂಗ್ರೆಸ್ ಸಮಿತಿ ನೂತನ ಅಧ್ಯಕ್ಷರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿವಿ ಮಾತು ಹೇಳಿದರು.