Asianet Suvarna News Asianet Suvarna News

ಸರ್ಕಾರದ ಕಾರ್ಯಕ್ರಮ ಅನುಷ್ಠಾನಕ್ಕೆ ಬಿಜೆಪಿ ಅಡ್ಡಗಾಲು: ಗೃಹ ಸಚಿವ ಪರಮೇಶ್ವರ

ಜನರಿಗೆ ನೀಡಿರುವ ಭರವಸೆಗಳು ಮತ್ತು ಗ್ಯಾರಂಟಿ ಯೋಜನೆಗಳ ಅನುಷ್ಠಾನದತ್ತ ಗಮನ ಹರಿಸಬೇಕಿದೆ. ಬಿಜೆಪಿಯವರು ಸರ್ಕಾರವನ್ನು ಅಸ್ಥಿರಗೊಳಿಸಲು ಮತ್ತು ಸರ್ಕಾರದ ಕಾರ್ಯಕ್ರಮಗಳನ್ನು ತಡೆಯಲು ಈ ರೀತಿ ವರ್ತಿಸುತ್ತಿದ್ದಾರೆ.

BJP hindrance to Karnataka Govt program implementation Home Minister Parameshwara sat
Author
First Published Sep 11, 2024, 12:24 PM IST | Last Updated Sep 11, 2024, 12:24 PM IST

ಬೆಂಗಳೂರು (ಸೆ.11): ನಾವು ಜನರಿಗೆ ಕೊಟ್ಟ ಭರವಸೆಗಳನ್ನು, ಗ್ಯಾರಂಟಿ ಯೋಜನೆಗಳನ್ನು ಅನುಷ್ಟಾನಗೊಳಿಸುವ ನಿಟ್ಟಿನಲ್ಲಿ ಆಡಳಿತ ಮಾಡಬೇಕು. ಬಿಜೆಪಿಯವರು ಸರ್ಕಾರವನ್ನು ಅಸ್ಥಿರಗೊಳಿಸಲು, ಸರ್ಕಾರದ ಕಾರ್ಯಕ್ರಮಗಳು ಅನುಷ್ಟಾನ ಆಗಬಾರದು ಎಂಬ ಉದ್ದೇಶದಿಂದ ಈ ರೀತಿ ನಡೆದುಕೊಳ್ಳುತ್ತಿದ್ದಾರೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ ಹೇಳಿದ್ದಾರೆ.

ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನದ ಬಗ್ಗೆ ಚರ್ಚೆ ಅನಗತ್ಯ. ನಾವು ಜನರಿಗೆ ಕೊಟ್ಟ ಭರವಸೆಗಳನ್ನು, ಗ್ಯಾರಂಟಿ ಯೋಜನೆಗಳನ್ನು ಅನುಷ್ಟಾನಗೊಳಿಸುವ ನಿಟ್ಟಿನಲ್ಲಿ ಆಡಳಿತ ಮಾಡಬೇಕು. ಬಿಜೆಪಿಯವರು ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ಸರ್ಕಾರವನ್ನು ಅಸ್ಥಿರಗೊಳಿಸಲು, ಸರ್ಕಾರದ ಕಾರ್ಯಕ್ರಮಗಳು ಅನುಷ್ಟಾನ ಆಗಬಾರದು ಎಂಬ ಉದ್ದೇಶದಿಂದ ಈ ರೀತಿ ನಡೆದುಕೊಳ್ಳುತ್ತಿದ್ದಾರೆ. ಇದೆಲ್ಲವನ್ನು ಬದಿಗೊತ್ತಿ ನಾವು ಕೆಲಸ ಮಾಡಬೇಕಿದೆ ಎಂದು ಹೇಳಿದರು.

ಬೇರೊಬ್ಬರನ್ನು ಮದುವೆಯಾದ ಪ್ರೇಯಸಿಯನ್ನು ಗರ್ಭಿಣಿ ಮಾಡಿ ಪರಾರಿಯಾದ ರಹಮತ್ತುಲ್ಲಾ!

ತನಿಖಾ ಸಂಸ್ಥೆಗಳ ಹಂತದಲ್ಲಿ ವಿವಿಧ ಹಗರಣಗಳ ತನಿಖೆ ಬಾಕಿ ಇರುವ ಪ್ರಕರಣಗಳ ಪ್ರಗತಿ ಪರಿಶೀಲನೆಗೆ ವಾರದೊಳಗೆ ಸಮಿತಿ ಸಭೆ ನಡೆಸುತ್ತೇನೆ. ಎಲ್ಲ ಹಗರಣಗಳ ಪ್ರಕರಣಗಳನ್ನು ಗುರುತಿಸಿದ್ದೇವೆ. ಅವುಗಳ ತನಿಖೆ ಯಾವ ಹಂತದಲ್ಲಿವೆ ಎಂಬುದನ್ನು ಪರಿಶೀಲಿಸಿ, ವರದಿಯನ್ನು ಸಚಿವಸಂಪುಟಕ್ಕೆ ಸಲ್ಲಿಸುತ್ತೇವೆ. ತ್ವರಿತಗತಿಯಲ್ಲಿ ತನಿಖೆ ನಡೆಯಬೇಕು ಎಂಬ ಉದ್ದೇಶದಿಂದ ಸಮಿತಿ ರಚನೆ ಮಾಡಿದ್ದಾರೆ. ಪೊಲೀಸ್ ಇಲಾಖೆಯಲ್ಲಿ ಬಾಕಿ ಇರುವ ಪ್ರಕರಣಗಳನ್ನು ಪ್ರಗತಿ ಪರಿಶೀಲನೆ ವೇಳೆ ಗಮನಿಸಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಈ ವಿಚಾರ ಕ್ಯಾಬಿನೆಟ್ ಗಮನಕ್ಕೆ ಬಂದ ಬಳಿಕ ತ್ವರಿತಗತಿಯಲ್ಲಿ ಮಾಡಲು ಸಮಿತಿ ರಚಿಸಿದ್ದಾರೆ‌ ಎಂದು ಹೇಳಿದರು.

ದ್ವೇಷದ ರಾಜಕಾರಣ ಬಿಜೆಪಿಯ ಆರೋಪಕ್ಕೆ ಪ್ರತಿಕ್ರಿಯಿಸಿ, ಅವರು ಏನಾದರು ಹೇಳಿಕೊಳ್ಳಲಿ. ನಮ್ಮನ್ನು ಟೀಕೆ ಮಾಡುವುದಕ್ಕೆ,‌ ಸಲಹೆ‌ ನೀಡಲು, ತಪ್ಪು ಮಾಡಿದಾಗ ಹೇಳುವುದಕ್ಕೆ ಅವರಿಗೆ ಜವಾಬ್ಧಾರಿಗಳಿರುತ್ತವೆ. ಆಡಳಿತ ನಡೆಸುವರಿಗೂ ಅವರಿಗೆ ಆದಂತಹ ಜವಾಬ್ದಾರಿಗಳಿರುತ್ತವೆ. ಮುಖ್ಯಮಂತ್ರಿ ಸ್ಥಾನದ ಚರ್ಚೆಯ ಬಗ್ಗೆ ಶಿಸ್ತಿನ ಕ್ರಮದ ಕುರಿತು ಪಕ್ಷದ ಅಧ್ಯಕ್ಷರು ಕಡಿವಾಣ ಹಾಕುತ್ತಾರೆ. ಅಧ್ಯಕ್ಷರು ಅಮೇರಿಕ ಪ್ರವಾಸದಲ್ಲಿದ್ದು, ಬಂದನಂತರ ಈ ಬಗ್ಗೆ ಗಮನ ಹರಿಸುತ್ತಾರೆ ಎಂದು ಸ್ಪಷ್ಟಪಡಿಸಿದರು.

ಶಿವಮೊಗ್ಗ ಅಡಿಕೆ ತೂಕದಲ್ಲಿ ಮೋಸ: ವ್ಯಾಪಾರಿಗೆ ಗ್ರಾಮಸ್ಥರಿಂದ 20 ಲಕ್ಷ ರೂ. ದಂಡ

ವಾಲ್ಮೀಕಿ ನಿಗಮ ಹಗರಣದ ಇ.ಡಿ. ಚಾರ್ಜ್‌ಶೀಟ್ ಕುರಿತು ಪ್ರತಿಕ್ರಿಯಿಸಿ, ನಾವ್ಯಾರೋ ಹೇಳಿದ ಹೇಳಿಕೆ ಮುಖ್ಯವಲ್ಲ‌. ತನಿಖಾ ಸಂಸ್ಥೆಗಳು ಸಿಕ್ಕಂತಹ ಸಾಕ್ಷ್ಯಾಧಾರಗಳ ಆಧಾರದ ಮೇಲೆ ತೀರ್ಮಾನ ಮಾಡುತ್ತಾರೆ. ನಾವು ನೀಡುವ ಹೇಳಿಕೆಗಳು ಮೇಲ್ನೋಟಕ್ಕೆ ಮಾತ್ರ. ತನಿಖೆ ಕೈಗೊಂಡ ಬಳಿಕ ಸತ್ಯಾಸತ್ಯತೆ ಗೊತ್ತಾಗುತ್ತದೆ. ಮಾಜಿ ಸಚಿವ ನಾಗೇಂದ್ರ ಅವರ ಪಾತ್ರ ಇದೆ ಎಂದು ಇ.ಡಿ.ಯವರು ಹೇಳುತ್ತಿದ್ದಾರೆ. ಬೇಕಾದಷ್ಟು ಸಲ ಹಾಗೇ ಆಗುತ್ತದೆ. ಅವರು ಹೇಳಿರುವುದಕ್ಕೆ ನಮಗೆ ಸಾಕ್ಷ್ಯ ಸಿಕ್ಕಿರುವುದಿಲ್ಲ. ನಾವು ಹೇಳಿರುವುದಕ್ಕೆ ಅವರಿಗೆ ಸಾಕ್ಷ್ಯ ಸಿಕ್ಕಿರುವುದಿಲ್ಲ. ಬೇಕಾದಷ್ಟು ಸಲ ಹೀಗಾಗಿದೆ. ವಿವಿಧ ತನಿಖಾ ಸಂಸ್ಥೆಗಳ ತನಿಖಾ ವಿಧಾನವೇ ಬೇರೆ ಇರುತ್ತದೆ. ಆ ದೃಷ್ಟಿಯಿಂದ‌ ಮಾಡುತ್ತಾರೆ. ಇ.ಡಿ.ಯವರು ಮತ್ತು ಎಸ್‌ಐಟಿಯವರು ಇಬ್ಬರು ಚಾರ್ಜ್‌ಶೀಟ್ ಸಲ್ಲಿಸುತ್ತಾರೆ ಎಂದು ಹೇಳಿದರು.

Latest Videos
Follow Us:
Download App:
  • android
  • ios