ಬಿಜೆಪಿ ಕೋಮುವಾದಿ, ಮತೀಯವಾದಿ ಪಕ್ಷ: ಸ್ವಪಕ್ಷದ ವಿರುದ್ಧವೇ ತಿರುಗಿಬಿದ್ದ ಸಂಸದ ಬಚ್ಚೇಗೌಡ!
ಬಿಜೆಪಿ ಕೋಮುವಾದಿ, ಮತೀಯವಾದಿ ಪಕ್ಷ ಎಂದು ಬಿಜೆಪಿ ಸಂಸದ ಬಿ.ಎನ್.ಬಚ್ಚೇಗೌಡ ತಮ್ಮ ಪಕ್ಷದ ವಿರುದ್ಧವೇ ಟೀಕಾಪ್ರಹಾರ ನಡೆಸಿದರು.
ಚಿಕ್ಕಬಳ್ಳಾಪುರ (ಸೆ.9) : ಬಿಜೆಪಿ ಕೋಮುವಾದಿ, ಮತೀಯವಾದಿ ಪಕ್ಷ ಎಂದು ಬಿಜೆಪಿ ಸಂಸದ ಬಿ.ಎನ್.ಬಚ್ಚೇಗೌಡ ತಮ್ಮ ಪಕ್ಷದ ವಿರುದ್ಧವೇ ಟೀಕಾಪ್ರಹಾರ ನಡೆಸಿದರು.
ನಗರ ಹೊರವಲಯದ ಜಿಲ್ಲಾಡಳಿತ ಭವನದ ಭಾರತ ರತ್ನ ಸರ್ ಎಂ.ವಿಶ್ವೇಶ್ವರಯ್ಯ ಜಿಲ್ಲಾಪಂಚಾಯತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಜಿಲ್ಲಾ ಅಭಿವೃದ್ದಿ ಸಮನ್ವಯ ಸಮಿತಿ ಮತ್ತು ಉಸ್ತುವಾರಿ ಸಮಿತಿ ಸಭೆಯ(ದಿಶಾ)ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ದೇವೇಗೌಡರು ಇರುವವರೆಗೂ ಬಿಜೆಪಿ ಜೊತೆ ಜೆಡಿಎಸ್ ಹೋಗುವುದಿಲ್ಲ ಎಂದುಕೊಂಡಿದ್ದೆ. ಜಾತ್ಯತೀತ ಎನಿಸಿರುವ ಜೆಡಿಎಸ್ ಕೋಮುವಾದಿ ಬಿಜೆಪಿ ಜೊತೆ ಹೋಗುವುದು ಅಚ್ಚರಿಯಾಗಿದೆ ಎಂದರು.
ಮೈತ್ರಿಯಿಂದ ಬಿಜೆಪಿ ಶಕ್ತಿಗುಂದಲಿದೆ
ಜೆಡಿಎಸ್ ಮತ್ತು ಬಿಜೆಪಿ(BJP JDS alliance) ಒಂದಾಗುತ್ತದೆ ಎನ್ನುವುದು ಜನರಿಗೆ ಕನಸಿನ ಮಾತಾಗಿತ್ತು. ಆದರೆ ಇತ್ತೀಚೆಗೆ ಒಂದಾಗುತ್ತಾರೆ ಎಂದು ಉಹಾ ಪೋಹ ಹರಿದಾಡುತ್ತಿತ್ತು. ಈಗ ಜನರಿಗೆ ಸ್ಪಷ್ಟವಾಗಿ ಗೊತ್ತಾಗಿದೆ. ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡರೆ ಬಿಜೆಪಿಗೆ ಒಳ್ಳೆಯದಾಗುವುದಿಲ್ಲ. ಪಕ್ಷದ ಶಕ್ತಿ ಕ್ಷೀಣಿಸುತ್ತದೆ ಎಂದು ಅವರು ಹೇಳಿದರು.
ರಾಜ್ಯದಲ್ಲಿ ದುರ್ಬಲವಾದ ಎರಡು ಪಕ್ಷಗಳು ಒಂದಾಗಿವೆ; ಬಿಜೆಪಿ-ಜೆಡಿಎಸ್ ಮೈತ್ರಿಗೆ ಶೆಟ್ಟರ್ ವ್ಯಂಗ್ಯ
ರಾಜ್ಯದಲ್ಲಿ ಬಿಜೆಪಿ ಆಡಳಿತ ನಡೆಸಿದೆ. ದೊಡ್ಡ ಮಟ್ಟದ ನಾಯಕರು ಇದ್ದಾರೆ. ಆದರೂ ಪಕ್ಷದ ರಾಜ್ಯ ನಾಯಕ ಮತ್ತು ವಿಧಾನಸಭೆ ಪ್ರತಿಪಕ್ಷದ ನಾಯಕ ಮತ್ತು ರಾಜ್ಯ ಘಟಕದ ಅಧ್ಯಕ್ಷರ ನೇಮಕವಾಗಿಲ್ಲ. ಜೆಡಿಎಸ್ ಮತ್ತು ಬಿಜೆಪಿ ಒಂದಾಗುವ ಕಾರಣದಿಂದಾಗಿಯೇ ಮೇಲಿನವರು (ಹೈಕಮಾಂಡ್) ಆಯ್ಕೆಗೆ ತಡ ಮಾಡಿದ್ದಾರೆ. ಈ ಒಂದಾಗುವ ತೀರ್ಮಾನದ ಮೇಲೆ ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆ ನಡೆಯುತ್ತದೆ ಎಂದು ನನಗೆ ಹೊಳೆಯುತ್ತಿದೆ ಎಂದು ಹೇಳಿದರು.
ಬಿಜೆಪಿಯವರು ಮಾಡುವುದೆಲ್ಲ ಸರಿ ಎಂದು ಹೇಳಲು ಆಗುವುದಿಲ್ಲ. ನಾನೂ ಪಕ್ಷದಲ್ಲಿ ಹಿರಿಯನಿದ್ದೇನೆ. ಸುಮ್ಮನೆ ಇರಬೇಕಾಗುತ್ತದೆ ಸುಮ್ಮನೆ ಇದ್ದೇನೆ ಎಂದ ಸಂಸದರು. ಸನಾತನ ಧರ್ಮ ನಮಗೆ ಬೇಕು. ಸನಾತನ ಧರ್ಮದಲ್ಲಿ ನಾವು ಬಂದಿರುವುದು. ಸಾವಿರಾರು ವರ್ಷಗಳಿಂದ ಸನಾತನ ಧರ್ಮಇದೆ. ಸನಾತನ ಧರ್ಮದ ವಿರುದ್ಧ ಮಾತನಾಡುವುದು ಯಾರೇ ಆಗಲಿ ತಪ್ಪು ಎಂದರು.
ಸಿಕೆಬಿ-1 ಚಿಕ್ಕಬಳ್ಳಾಪುರದಲ್ಲಿ ಸಂಸದ ಬಿ.ಎನ್.ಬಚ್ಚೇಗೌಡ ಮಾಧ್ಯಮಗಳ ಜತೆ ಮಾತನಾಡಿದರು.
ಮಗನ ಗೆಲುವಿಗಾಗಿ ಬಚ್ಚೇಗೌಡ ಕಾಂಗ್ರೆಸ್ ಪರ ಕೆಲಸ: ಎಂಟಿಬಿ ತಿರುಗೇಟು
ಹೊಸಕೋಟೆ: ಸಂಸದ ಬಿ.ಎನ್.ಬಚ್ಚೇಗೌಡರು ಚುನಾವಣೆ ಸಂದರ್ಭದಲ್ಲಿ ತನ್ನ ಮಗನ ಗೆಲುವಿಗಾಗಿ ಕಾಂಗ್ರೆಸ್ ಪಕ್ಷದ ಪರವಾಗಿ ಕೆಲಸ ಮಾಡಿ ಈಗ ಬಿಜೆಪಿ ಪಕ್ಷ ಹಾಗೂ ನನ್ನ ಬಗ್ಗೆ ಮಾತನಾಡುವ ಯಾವುದೇ ನೈತಿಕತೆ ಅವರಿಗಿಲ್ಲ ಎಂದು ಮಾಜಿ ಸಚಿವ ಎಂಟಿಬಿ ನಾಗರಾಜ್ ಕಿಡಿಕಾರಿದರು.
ಸಂಸದ ಬಚ್ಚೇಗೌಡರು ಇತ್ತೀಚೆಗೆ ಚುನಾವಣೆ ಸ್ಪರ್ಧೆಯಿಂದ ಹಿಂದೆ ಸರಿಯುತ್ತಿರುವ ಬಗ್ಗೆ ಹಾಗೂ ಹಿಂದಿನ ಸರ್ಕಾರದಲ್ಲಿ ಉಸ್ತುವಾರಿ ಸಚಿವರಾಗಿದ್ದ ಎಂಟಿಬಿ ನಾಗರಾಜ್ ಅವರು ಪಕ್ಷದ ಕಾರ್ಯ ಚಟುವಟಿಕೆಗೆ ಬಳಕೆ ಮಾಡಿಕೊಂಡಿಲ್ಲ ಎಂಬ ಹೇಳಿಕೆ ನೀಡಿರುವ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿ, ನಾನು ಚಿಕ್ಕಬಳ್ಳಾಪುರ ಜಿಲ್ಲೆ ಉಸ್ತುವಾರಿ ಸಚಿವನಾಗಿದ್ದ ಸಂದರ್ಭದಲ್ಲಿ ಶಿಷ್ಟಾಚಾರವಾಗಿ ಎಲ್ಲಾ ಕಾರ್ಯಕ್ರಮಕ್ಕೆ ಆಹ್ವಾನ ಪತ್ರಿಕೆಯಲ್ಲಿ ಹೆಸರು ಮುದ್ರಿಸಿ ಆಹ್ವಾನ ಪ್ರತಿಕೆ ಕಳುಹಿಸುತ್ತಿದ್ದೆ. ಅವರಿಗೆ ಯಾವುದೇ ಕಾರ್ಯಕ್ರಮಕ್ಕೆ ಬರೋಕೆ ಮುಖ ಇರ್ತಿರಲಿಲ್ಲ ಎಂದು ಹೇಳಿದರು.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಹೊಸಕೋಟೆಯಲ್ಲಿ ತನ್ನ ಮಗನ ಗೆಲುವಿಗಾಗಿ ಕಾಂಗ್ರೆಸ್ ಪಕ್ಷಕ್ಕೆ ಕೆಲ್ಸ ಮಾಡಿದ್ದು ಎರಡು ಜಿಲ್ಲೆಯಲ್ಲಿ ಒಬ್ಬ ಬಿಜೆಪಿ ಅಭ್ಯರ್ಥಿ ಪರ ಕೆಲಸ ಮಾಡಿಲ್ಲ. ಪ್ರಮುಖವಾಗಿ ಸಂಸದರ 5 ಕೋಟಿ ಅನುದಾನ ಪಡೆದು ಜಿಲ್ಲೆಯ ಯಾವುದೇ ತಾಲೂಕಿಗೆ1 ರುಪಾಯಿ ಅನುದಾನ ಕೊಟ್ಟಿಲ್ಲ. ಇದನ್ನು ಪ್ರಶ್ನೆ ಮಾಡಲು ಅಲ್ಲಿನ ಕಾರ್ಯಕರ್ತರು ಕಾಯುತ್ತಿದ್ದರು. ಕಾರ್ಯಕರ್ತರಿಂದ ತಪ್ಪಿಸಿಕೊಳ್ಳಲು ಸಭೆ, ಸಮಾರಂಭಗಳಿಗೂ ಬರುತ್ತಿರಲಿಲ್ಲ. ಅದನ್ನು ಬಿಟ್ಟು ವಿನಾಕಾರಣ ಬಿಜೆಪಿ ಪಕ್ಷ ಅಥವಾ ನನ್ನ ಮೇಲೆ ಸುಳ್ಳು ಆರೋಪ ಮಾಡುವುದು ಸರಿಯಲ್ಲ ಎಂದರು.
ಹಿಂದೂ ಧರ್ಮಕ್ಕೆ ಸೊಳ್ಳೆ, ನೊಣಗಳನ್ನೆಲ್ಲ ನುಂಗಿ ಜೀರ್ಣಸಿಕೊಳ್ಳುವ ಶಕ್ತಿ ಇದೆ: ಸಂಸದ ಪ್ರತಾಪ್ ಸಿಂಹ
ಸರ್ಕಾರದ ಆಡಳಿತ ವೈಫಲ್ಯ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ನೂರು ದಿನ ಪೂರೈಸಿದೆ. ಈ ನಡುವೆ ಸರ್ಕಾರದ ಆಡಳಿತ ವೈಫಲ್ಯ ಎದ್ದು ಕಾಣುತ್ತಿದೆ. ಬರಪೀಡಿತ ತಾಲೂಕುಗಳ ಘೋಷಣೆ, ತಮಿಳುನಾಡಿಗೆ ಕಾವೇರಿ ನೀರು ಬಿಡುವ ವಿಚಾರ ಸೇರಿದಂತೆ ಅಭಿವೃದ್ಧಿ ಕುಂಠಿತವಾಗಿರುವ ಬಗ್ಗೆ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ ಹಮ್ಮಿಕೊಂಡಿದೆ. ಎಂದರು.