ಕಾಂಗ್ರೆಸ್ ದುರಾಡಳಿತದ ಬಗ್ಗೆ ಪಕ್ಷದೊಳಗಿಂದಲೇ ನಮಗೆ ಮಾಹಿತಿ ಸಿಗುತ್ತಿದೆ: ಸಿಟಿ ರವಿ ಹೊಸ ಬಾಂಬ್
ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿನ ದುರಾಡಳಿತದ ಸತ್ಯಾಸತ್ಯತೆ ಸ್ವ ಪಕ್ಷದವರಿಂದಲೇ ಬಹಿರಂಗವಾಗುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದರು.
ವರದಿ: ಕಿರಣ್ಎಲ್ ತೊಡರನಾಳ್ ಏಷ್ಯಾನೆಟ್ ಸುವರ್ಣ ನ್ಯೂಸ್
ಚಿತ್ರದುರ್ಗ (ಅ.16) ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿನ ದುರಾಡಳಿತದ ಸತ್ಯಾಸತ್ಯತೆ ಸ್ವ ಪಕ್ಷದವರಿಂದಲೇ ಬಹಿರಂಗವಾಗುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದರು.
ಚಿತ್ರದುರ್ಗದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ ದೇಶ ಬೇಕು ಎನ್ನುವ ಜನರೇ ಹೆಚ್ವಾಗಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ನಡೆಸುತ್ತಿರುವ ದುರಾಡಳಿತದಿಂದ ಬೇಸತ್ತು ಹೋಗಿದ್ದಾರೆ. ಇದರಂದಲೇ ಸ್ವ ಪಕ್ಷದವರು ನಡೆಸುತ್ತಿರುವ ದುರಾಡಳಿತದ ಬಗ್ಗೆ ನಮಗೆ ಮಾಹಿತಿ ನೀಡಿ, ಅವುಗಳನ್ನು ತಡೆಯುವ ಯತ್ನಕ್ಕೆ ಕೈ ಜೋಡಿಸುತ್ತಿದ್ದಾರೆ. ಆದರೆ ಅಲ್ಲಿನ ಬೆರಳೆಣಿಕೆ ಮಂದಿ ಮಾತ್ರ ತಮ್ಮ ಬೆಳೆಕಾಳು ಬೇಯಿಸಿಕೊಳ್ಳಲು ಜನ ವಿರೋಧಿ, ದೇಶ ವಿರೋಧಿ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದರು.
ಭಾರೀ ಸಂಚಲನ ಮೂಡಿಸಿದ ಸತೀಶ ಜಾರಕಿಹೊಳಿ ನಡೆ ; 20ಕ್ಕೂ ಅಧಿಕ ಶಾಸಕರನ್ನು ಒಟ್ಟುಗೂಡಿಸಿ ಹೊರಟಿದ್ದು ಎಲ್ಲಿಗೆ?
ಧರ್ಮದ ಆಧಾರದ ಮೇಲೆ ಭಯೋತ್ಪಾದನೆ ನಡೆಯುತ್ತಿದೆ ಎಂಬ ಸಚಿವ ಈಶ್ವರ ಖಂಡ್ರೆ ಹೇಳಿಕೆಗೆ ಸಿಟಿ ರವಿ ಪ್ರತಿಕ್ರಿಯಿಸಿ, ಇಸ್ಲಾಂ ಹೆಸರಿನಲ್ಲಿ ಭಯೋತ್ಪಾದನೆ ನಡೆಯುತ್ತಿದೆ ಎಂಬುದು ತಡವಾಗಿ ಆದರೂ ತಿಳಿದು ಖಂಡ್ರೆ ಈಗ ಸತ್ಯ ಹೇಳಿದ್ದಾರೆ. ಇದು ಸ್ವಾಗತಾರ್ಹ. ಆದರೆ ಕಾಂಗ್ರೆಸ್ ನವರು ಸತ್ಯ ಹೇಳುವ ಧೈರ್ಯವನ್ನು ಇತ್ತೀಚೆಗೆ ಕಳೆದುಕೊಂಡಿದ್ದಾರೆ ಎಂದು ಲೇವಡಿ ಮಾಡಿದ ಅವರು, ಡಿ.ಕೆ.ಶಿವಕುಮಾರದು ಹೆದರಿಸಿ ರಾಜಕೀಯ ಮಾಡುವ ಸ್ಟೈಲ್ ಆಗಿದೆ. ಆದರೆ ಎಲ್ಲರನ್ನು ಎಲ್ಲಾ ಕಾಲದಲ್ಲೂ ಹೆದರಿಸಿ ರಾಜಕಾರಣ ಮಾಡಲು ಆಗುವುದಿಲ್ಲ ಎಂಬುದು ಡಿಕೆಶಿ ಅರ್ಥ ಮಾಡಿಕೊಳ್ಳಬೇಕು ಎಂದರು.
ರಾಜೀವ್ ತಾರನಾಥ್ ಅವರ ಬಳಿ ಹಣಕ್ಕೆ ಡಿಮ್ಯಾಂಡ್ ಮಾಡಿದ್ದಾರೆ. ಪರ್ಸೆಂಟೇಜ್ ಲೆಕ್ಕದಲ್ಲಿ ಕಲಾವಿದರ ಬಳಿ ಹಣ ಕೇಳಿದ ಕುಖ್ಯಾತಿ ಕಾಂಗ್ರೆಸ್ ಸರ್ಕಾರದ್ದಾಗಿದೆ. ಸಿದ್ದರಾಮಯ್ಯ ಅವರ ತವರು ಕ್ಷೇತ್ರದಲ್ಲೇ ಈ ಘಟನೆ ನಡೆದಿದೆ. ಆದರೂ ಕೂಡ ಸರ್ಕಾರ ತಮಗೆ ಸಂಬಂಧಿಸಿದಲ್ಲ ಎಂಬಂತೆ ಹೇಳಿಕೆ ನೀಡುತ್ತಿದ್ದಾರೆ. ಹಾಗಾದರೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಮಹದೇವಪ್ಪ, ತಂಗಡಗಿ ಇದ್ದ ಮೂವರಲ್ಲಿ ಕೇಳಿದವರು ಯಾರು ಎಂದು ಪ್ರಶ್ನಿಸಿದರು. ಬರಗಾಲದಲ್ಲಿ ಈ ಸಂದರ್ಭದಲ್ಲಿ ಐಟಿ ದಾಳಿ ವೇಳೆ ನೂರು ಕೋಟಿ ಹಣ ಸಿಕ್ಕಿದೆ. ಇದು ನೂರಕ್ಕೆ ನೂರು ಪಂಚರಾಜ್ಯಗಳ ಎಲೆಕ್ಷನ್ ಗೆ ಸರ್ಕಾರ ಸಂಗ್ರಹಿಸಿದ ಹಣವಾಗಿದೆ ಎಂದು ಆರೋಪಿಸಿದರು.
ಕೆಲವು ಭಾಗದಲ್ಲಿ ಹೆದರಿಸಿ, ಬೆದರಿಸಿ ಹಣ ಸಂಗ್ರಹಿಸಿದ್ದಾರೆ. ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ಇಬ್ಬರು ಪ್ರಾಮಾಣಿಕರು ಆಗಿದ್ರೆ, ಸಿಬಿಐ ತನಿಖೆಗೆ ನೀಡಲಿ ಎಂದು ಒತ್ತಯಿಸಿದರು. ರಾಜ್ಯದಲ್ಲಿ ಅಕ್ಟೋಬರ್ ತಿಂಗಳಲ್ಲೇ ವಿದ್ಯುತ್ ಸಮಸ್ಯೆ ಕಾಡುತ್ತಿದೆ. ಬರದ ಬೆಗೆಯಲ್ಲಿ ಪವರ್ ಕಟ್ ಮಾಡಿ ರೈತರಿಗೆ ಬರೆ ಹಾಕುತ್ತಿದ್ದಾರೆ. ಈಗಲೇ ಈ ಪರಿಸ್ಥಿತಿ ಎದುರಿಸಿದರೆ ಇನ್ನೂ ಏಪ್ರಿಲ್, ಮೇ ತಿಂಗಳಲ್ಲಿ ಯಾವ ಮಟ್ಟಕ್ಕೆ ಹೋಗಬಹುದು. ಈಗ ಗೃಹ ಜ್ಯೋತಿ ಕೊಟ್ಟಿದ್ದಾರೆ, ಮುಂದೆ ಕಂರೆಂಟ್ ಇಲ್ಲ ಉಚಿತ ಎಂದು ಹೇಳುತ್ತಾರೆ ಎಂದು ವ್ಯಂಗ್ಯವಾಡಿದರು.
ಈ ವೇಳೆ ಶಾಸಕ ಎಂ.ಚಂದ್ರಪ್ಪ, ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್, ಬಿಜೆಪಿ ಜಿಲ್ಲಾಧ್ಯಕ್ಷ ಮುರುಳಿ, ಅನಿತ್ ಕುಮಾರ್ ಸೇರಿದಂತೆ ಇತರರು ಹಾಜರಿದ್ದರು....