Asianet Suvarna News Asianet Suvarna News

ಜಾತಿ ಗಣತಿ ಬಗ್ಗೆ ಸರ್ಕಾರ ಮಗು ಚಿವುಟಿ, ತೊಟ್ಟಿಲು ತೂಗುತ್ತಿದೆ: ಸಿ.ಟಿ.ರವಿ

ನನಗಿರೋ ಮಾಹಿತಿ ಪ್ರಕಾರ ಕಾಂತರಾಜು ವರದಿಯಲ್ಲಿ ಒಂದೂವರೆ ಕೋಟಿ ಜನರ ವಿವರ ದಾಖಲಾಗಿಲ್ಲ. ಮುಖ್ಯಮಂತ್ರಿ ವರದಿ ಪರ ಇದ್ದು, ಉಪಮುಖ್ಯಮಂತ್ರಿ ವರದಿಗೆ ಸಹಮತ ಇಲ್ಲ. ಮುಖ್ಯಮಂತ್ರಿಗಳ ತೀರ್ಮಾನ ಇಷ್ಟವಿಲ್ಲ ಎಂದಾದರೆ ರಾಜೀನಾಮೆ ಕೊಟ್ಟು ಹೊರಗೆ ಬರಬೇಕು ಎಂದು ಒತ್ತಾಯಿಸಿದ ಮಾಜಿ ಸಚಿವ ಸಿ.ಟಿ.ರವಿ 

BJP Leader CT Ravi Talks Over Caste Census in Karnataka grg
Author
First Published Nov 23, 2023, 11:39 AM IST

ಬೆಂಗಳೂರು(ನ.23):  ಜಾತಿಗಣತಿ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಗುವನ್ನು ಜಿಗುಟಿ ಅಳಿಸಿ, ತೊಟ್ಟಿಲು ತೂಗುವ ಕೆಲಸ ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ಸಿ.ಟಿ.ರವಿ ಆರೋಪಿಸಿದ್ದಾರೆ.

ಬುಧವಾರ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ನನಗಿರೋ ಮಾಹಿತಿ ಪ್ರಕಾರ ಕಾಂತರಾಜು ವರದಿಯಲ್ಲಿ ಒಂದೂವರೆ ಕೋಟಿ ಜನರ ವಿವರ ದಾಖಲಾಗಿಲ್ಲ. ಮುಖ್ಯಮಂತ್ರಿ ವರದಿ ಪರ ಇದ್ದು, ಉಪಮುಖ್ಯಮಂತ್ರಿ ವರದಿಗೆ ಸಹಮತ ಇಲ್ಲ. ಮುಖ್ಯಮಂತ್ರಿಗಳ ತೀರ್ಮಾನ ಇಷ್ಟವಿಲ್ಲ ಎಂದಾದರೆ ರಾಜೀನಾಮೆ ಕೊಟ್ಟು ಹೊರಗೆ ಬರಬೇಕು ಎಂದು ಒತ್ತಾಯಿಸಿದರು.

ಜಾತಿಗಣತಿ ವರದಿಯಲ್ಲಿ ಏನಿದೆ ಯಾರಿಗೂ ಗೊತ್ತಿಲ್ಲ: ಇದಕ್ಕೆ ವಿರೋಧವೇಕೆ ಎಂದ ಸಿದ್ದರಾಮಯ್ಯ?

ಸಿದ್ದರಾಮಯ್ಯಗೆ ಬದ್ಧತೆ ಇದ್ದರೆ ಹಿಂದಿನ ಅಧಿಕಾರಾವಧಿಯಲ್ಲೇ ವರದಿ ಬಿಡುಗಡೆ ಮಾಡಬೇಕಿತ್ತು. ಆದರೆ ಆ ಕೆಲಸವನ್ನು ಮಾಡಲಿಲ್ಲ. ಈಗಾಗಲೇ ವೀರಶೈವ ಸಮಾಜ, ಒಕ್ಕಲಿಗ ಸಮಾಜದವರು ವರದಿ ವೈಜ್ಞಾನಿಕವಾಗಿಲ್ಲ ಎಂದಿದ್ದಾರೆ. ಜಾತಿ ಗಣತಿ ಮಾಡುವ ಅಧಿಕಾರ ಕೇಂದ್ರ ಸರ್ಕಾರಕ್ಕೆ ಇದೆಯೇ ಹೊರತು ರಾಜ್ಯ ಸರ್ಕಾರಕ್ಕೆ ಇಲ್ಲ ಎಂದರು.

Latest Videos
Follow Us:
Download App:
  • android
  • ios