ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಶ್ ಶೆಟ್ಟಿ ಹತ್ಯೆಯಿಂದಾಗಿ ಬಿಜೆಪಿ, ವಿಎಚ್‍ಪಿ ಸೇರಿದಂತೆ ಹಿಂದೂ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ. ಕಾಂಗ್ರೆಸ್ಸಿನ ಮುಸ್ಲಿಂ ಒಲೈಕೆ ನೀತಿಯೇ ಹತ್ಯೆಗೆ ಕಾರಣ ಎಂದು ಶಾಸಕ ಸುನೀಲ್ ಕುಮಾರ್ ಆರೋಪಿಸಿದ್ದಾರೆ. ಪೊಲೀಸರಿಗೆ ಮೊದಲೇ ಮಾಹಿತಿ ಇದ್ದರೂ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಹೇಳಿದ್ದಾರೆ. ದ.ಕ. ಜಿಲ್ಲೆಯಲ್ಲಿ ಬಂದ್ ನಡೆಸಲಾಗಿದೆ. ಎನ್ಐಎ ತನಿಖೆಗೆ ಆಗ್ರಹಿಸಲಾಗಿದೆ.

ಮಂಗಳೂರು(ಮೇ.02) ಹಿಂದೂ ಕಾರ್ಯಕರ್ತ ಸುಹಾಶ್ ಶೆಟ್ಟಿ ಹ*ತ್ಯೆ ಪ್ರಕರಣ ರಾಜ್ಯದಲ್ಲಿ ಭಾರಿ ಸಂಚಲನ ಸೃಷ್ಟಿಸಿದೆ. ಈ ಪ್ರಕರಣ ಹಿಂದೂ ಸಂಘಟನೆಗಳನ್ನು ಕೆರಳಿಸಿದೆ. ಶಾಂತವಾಗುತ್ತಿದ್ದ ಮಂಗಳೂರಿನಲ್ಲಿ ಇದೀಗ ಸತತ ಘಟನೆಗಳು ನಡೆಯುತ್ತಿದೆ. ಪ್ರಕರಣ ಖಂಡಿಸಿ ಹಿಂದೂಪರ ಸಂಘಟನೆಗಳು ಬಂದ್ ನಡೆಸುತ್ತಿದೆ. ಘಟನೆ ಕುರಿತು ರಾಜ್ಯ ಬಿಜೆಪಿ ನಾಯಕರು ಆಕ್ರೋಶ ಹೊರಹಾಕಿದ್ದಾರೆ. ಇದೀಗ ಕಾರ್ಕಳ ಶಾಸಕ ಸುನೀಲ್ ಕುಮಾರ್ ಕಾಂಗ್ರೆಸ್ ವಿರುದ್ದ ಹರಿಹಾಯ್ದಿದ್ದಾರೆ. ಅತೀಯಾದ ಮುಸ್ಲಿಮರ ಒಲೈಕೆಯಿಂದ ರಾಜ್ಯದಲ್ಲಿ ಇಂತಹ ಘಟನೆಗಳು ಮರುಕಳಿಸುತ್ತಿದೆ ಎಂದಿದ್ದಾರೆ. 

ಪೊಲೀಸರಿಗಿತ್ತು ಮೆಸೇಜ್
ಸುಹಾಶ್ ಶೆಟ್ಟಿ ಹ*ತ್ಯೆ ಕುರಿತು ಮಾಹಿತಿ ಪೊಲೀಸರಿಗೆ ಮೊದಲೇ ಇತ್ತು ಎಂದು ಸುನೀಲ್ ಕುಮಾರ್ ಹೇಳಿದ್ದಾರೆ. ಮುಸಲ್ಮಾನರ ಸೋಶಿಯಲ್ ಮೀಡಿಯಾದಲ್ಲಿ ಹತ್ಯೆಯ ಸಂದೇಶ ಹರಿದಾಡಿತ್ತು. ಪೊಲೀಸರಿಗೆ ಮೊದಲೇ ಗೊತ್ತಿದ್ದರೂ ಸುಮ್ಮನಾಗಿದ್ದಾರೆ ಎಂದು ಸನೀಲ್ ಕುಮಾರ್ ಹೇಳಿದ್ದಾರೆ. ಮುಸ್ಲಿಮರನ್ನು ಕೇಂದ್ರವಾಗಿಟ್ಟು ಕಾಂಗ್ರೆಸ್ ರಾಜಕಾರಣ ಮಾಡುತ್ತಿದೆ. ಶವದ ಮೇಲೆ ಕಾಂಗ್ರೆಸ್ ರಾಜಕಾರಣ ರಾಜ್ಯವನ್ನು ಈ ಪರಿಸ್ಥಿತಿಗೆ ತಂದು ನಿಲ್ಲಿಸಿದೆ ಎಂದು ಸುನೀಲ್ ಕುಮಾರ್ ಹೇಳಿದ್ದಾರೆ.

ಹಿಂದುತ್ವವೇ ನನ್ನ ಉಸಿರು ಎಂದವನ ಉಸಿರನ್ನೇ ಕಸಿದರು, ಸುಹಾಸ್ ಶೆಟ್ಟಿ ತಾಯಿ ಆಕ್ರಂದನ

ಆರೋಪಿಗಳು ಪರಾರಿಯಾಗಲು ಮುಸಲ್ಮಾನ ಮಹಿಳೆಯರ ನೆರವು
ಶಿವಮೊಗ್ಗ, ಮಂಡ್ಯ, ಹುಬ್ಬಳ್ಳಿಯಲ್ಲಿ ನಡೆದ ಘಟನೆಗಳಿಂದ ಸರ್ಕಾರ ಎಚ್ಚೆತ್ತುಕೊಂಡಿದ್ದರೆ ಇದೀಗ ಸುಹಾಸ್ ಶೆಟ್ಟಿ ಹ*ತ್ಯೆಯಾಗುತ್ತಿರಲಿಲ್ಲ, ಮಂಗಳೂರಲ್ಲಿ ಈ ಘಟನೆ ಮರುಕಳಿಸುತ್ತಿರಲಿಲ್ಲ ಎಂದಿದ್ದಾರೆ. ಈ ಘಟನೆ ಹಿಂದೆ ಅತೀ ದೊಡ್ಡ ಷಡ್ಯಂತ್ರವಿದೆ. ಎಳೆಂಟು ದುರ್ಷರ್ಮಿಗಳಿದ್ದಾರೆ. ಆರೋಪಿಗಳು ಪರಾರಿಯಾಗಲು ಮುಸಲ್ಮಾನ ಮಹಿಳೆಯರು ನೆರವು ನೀಡಿದ್ದಾರೆ. ಇದು ಆತಂಕಕಾರಿ ಘಟನೆ ಎಂದು ಸುನೀಲ್ ಕುಮಾರ್ ಹೇಳಿದ್ದಾರೆ.

 ಹಿಂದೂ ಸಮಾಜ ಎಚ್ಚೆತ್ತುಕೊಳ್ಳಬೇಕು
ಈ ಘಟನೆಯಿಂದ ಹಿಂದೂ ಸಮಾಜ ಎಚ್ಚೆತ್ತುಕೊಳ್ಳಬೇಕು. ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಾಗೂ ಪೊಲೀಸರು ಬಗ್ಗೆ ಹಿಂದೂ ಸಮಾಜಕ್ಕೆ ವಿಶ್ವಾಸವಿಲ್ಲ. ಪ್ರಕರಣದ ತನಿಖೆ ಸರಿಯಾದ ದಿಕ್ಕಿನಲ್ಲಿ ಸಾಗುವ, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗುವ ವಿಶ್ವಾಸವಿಲ್ಲ. ಹೀಗಾಗಿ ಈ ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸಬೇಕು ಎಂದು ಸುನೀಲ್ ಕುಮಾರ್ ಆಗ್ರಹಿಸಿದ್ದಾರೆ. ಸುಹಾಸ್ ಶೆಟ್ಟಿ ಕುಟುಂಬದ ಹಿಂದೆ ಸಮಸ್ತ ಹಿಂದೂ ಸಮಾಜವಿದೆ ಎಂದು ಸುನೀಲ್ ಕುಮಾರ್ ಹೇಳಿದ್ದಾರೆ. 

ಪ್ರಹ್ಲಾದ್ ಜೋಶಿ ಪ್ರತಿಕ್ರಿಯೆ
ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಪ್ರಕರಣ ರಾಜ್ಯ ಸರ್ಕಾರದ ಕುಮ್ಮಕ್ಕಿನಿಂದ ಆಗಿದೆ ಎಂದು ಪ್ರಹ್ಲಾದ್ ಜೋಶಿ ಹಳಿದ್ದಾರೆ. ಘಟನೆಯನ್ನು ಖಂಡಿಸಿದ ಕೇಂದ್ರ ಸಚವಿ ಪ್ರಹ್ಲಾದ್ ಜೋಶಿ ಪೊಲೀಸರು ಸರ್ಕಾರದ ಪ್ರತಿನಿಧಿಯಂತೆ ವರ್ತಿಸುತ್ತಿದ್ದಾರೆ. ಈ ಘಟನೆಯನ್ನ ತೀವ್ರವಾಗಿ ಬಿಜೆಪಿ ಖಂಡಿಸುತ್ತಿದೆ ಎಂದು ಜೋಶಿ ಹೇಳಿದ್ದಾರೆ.

ಹಿಂದೂ ಕಾರ್ಯಕರ್ತ ಸುಹಾಶ್ ಶೆಟ್ಟಿ ಹತ್ಯೆ ಪ್ರಕರಣದ ಆರೋಪಿಗಳ ಸುಳಿವು ಪತ್ತೆ

ದಕ್ಷಿಣ ಕನ್ನಡ ಜಿಲ್ಲಾ ಬಂದ್
ಸುಹಾಸ್ ಶೆಟ್ಟಿ ಪ್ರಕರಣ ಸಂಬಂಧ ವಿಶ್ವ ಹಿಂದೂ ಪರಿಷತ್ ದಕ್ಷಿಣ ಕನ್ನಡ ಜಿಲ್ಲಾ ಬಂದ್‌ಗೆ ಕರೆ ನೀಡಿತ್ತು. ಮಂಗಳೂರಿನಲ್ಲಿ ಬಹುತೇಕ ಸೇವೆಗಳು ಬಂದ್ ಆಗಿದೆ. ಇನ್ನು ಜಿಲ್ಲೆಯ ಹಲೆವೆಡೆ ಬಸ್‌ಗಳಿಗೆ ಕಲ್ಲು ತೂರಿದ ಘಟನೆಗಳು ನಡೆದಿದೆ. ಬಂದ್ ಬಹುತೇಕ ಯಶಸ್ವಿಯಾಗಿದೆ. ಅಂಗಡಿ ಮುಂಗಟ್ಟುಗಳನ್ನು ಮುಚ್ಚಲಾಗಿದೆ. ಈ ಘಟನೆ ಕುರಿತು ಖಂಡನೆ ವ್ಯಕ್ತಪಡಿಸಿರುವ ಹಿಂದೂ ಸಂಘಟನೆಗಳು ಆರೋಪಿಗಳ ಶೀಘ್ರ ಬಂಧಿಸಲು ಆಗ್ರಹಿಸಿದ್ದಾರೆ.