Asianet Suvarna News Asianet Suvarna News

ರಾಜ್ಯಾಧ್ಯಕ್ಷ, ವಿಪಕ್ಷ ನಾಯಕ ನೇಮಕ: ಶೀಘ್ರ ನೇಮಕಕ್ಕೆ ಕೋರ್ ಕಮಿಟಿ ಸಭೆಯಲ್ಲಿ ಬಿಜೆಪಿ ನಾಯಕರು ಆಗ್ರಹ

ಪಕ್ಷದ ಸಂಘಟನೆ ಬಲಪಡಿಸುವ ದೃಷ್ಟಿಯಿಂದ ನೆನೆಗುದಿಗೆ ಬಿದ್ದಿರುವ ರಾಜ್ಯಾಧ್ಯಕ್ಷ ಸ್ಥಾನ ಮತ್ತು ವಿಧಾನಮಂಡಲದ ಉಭಯ ಸದನಗಳ ಪ್ರತಿಪಕ್ಷ ನಾಯಕರ ನೇಮಕ ಪ್ರಕ್ರಿಯೆ ಶೀಘ್ರ ಮಾಡಬೇಕು ಎಂದು ಬಿಜೆಪಿ ಕೋರ್‌ ಕಮಿಟಿ ಸಭೆ ಆಗ್ರಹಪಡಿಸಿದೆ.

BJP leaders demand  to appoint  state president and the  opposition! leader at bengaluru rav
Author
First Published Aug 22, 2023, 10:36 AM IST

ಬೆಂಗಳೂರು (ಆ.22):  ಪಕ್ಷದ ಸಂಘಟನೆ ಬಲಪಡಿಸುವ ದೃಷ್ಟಿಯಿಂದ ನೆನೆಗುದಿಗೆ ಬಿದ್ದಿರುವ ರಾಜ್ಯಾಧ್ಯಕ್ಷ ಸ್ಥಾನ ಮತ್ತು ವಿಧಾನಮಂಡಲದ ಉಭಯ ಸದನಗಳ ಪ್ರತಿಪಕ್ಷ ನಾಯಕರ ನೇಮಕ ಪ್ರಕ್ರಿಯೆ ಶೀಘ್ರ ಮಾಡಬೇಕು ಎಂದು ಬಿಜೆಪಿ ಕೋರ್‌ ಕಮಿಟಿ ಸಭೆ ಆಗ್ರಹಪಡಿಸಿದೆ.

ಸೋಮವಾರ ಪಕ್ಷದ ಹಿರಿಯ ನಾಯಕರನ್ನು ಒಳಗೊಂಡ ಕೋರ್‌ ಕಮಿಟಿ ಸಭೆಯಲ್ಲಿ ಪಾಲ್ಗೊಂಡಿದ್ದ ಬಹುತೇಕ ನಾಯಕರು ಈ ನೇಮಕ ವಿಳಂಬವಾಗಿರುವುದು ಸರಿಯಲ್ಲ ಎಂಬರ್ಥದಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ತಿಳಿದು ಬಂದಿದೆ.

 

ಕಾಂಗ್ರೆಸ್‌ನ ಯಾವ ನಾಯಿ ಕೂಡ ತುರ್ತು ಪರಿಸ್ಥಿತಿ ವೇಳೆ ಹೋರಾಟ ಮಾಡಿಲ್ಲ: ಸಿಟಿ ರವಿ

ಪಕ್ಷಕ್ಕೆ ಪ್ರಬಲ ನಾಯಕತ್ವ ಇಲ್ಲದಿರುವುದರಿಂದ ಆಡಳಿತಾರೂಢ ಕಾಂಗ್ರೆಸ್‌ ವಿರುದ್ಧ ಪ್ರಬಲ ಹೋರಾಟ ರೂಪಿಸಲು ಸಮಸ್ಯೆಯಾಗುತ್ತಿದೆ. ಯಾರು ನಾಯಕತ್ವ ವಹಿಸಿಕೊಳ್ಳಬೇಕು ಎಂಬ ಗೊಂದಲವೂ ಉಂಟಾಗುತ್ತಿದೆ. ಹೀಗಾಗಿ, ಈ ನೇಮಕ ಪ್ರಕ್ರಿಯೆಯನ್ನು ಆದಷ್ಟುಬೇಗ ಕೈಗೊಂಡಲ್ಲಿ ಮುಂಬರುವ ಲೋಕಸಭಾ ಚುನಾವಣೆಗೆ ಈಗಿನಿಂದಲೇ ಭರದ ಸಿದ್ಧತೆ ಆರಂಭಿಸಲು ಅನುಕೂಲವಾಗುತ್ತದೆ. ವಿಧಾನಸಭಾ ಫಲಿತಾಂಶ ಹೊರಬಿದ್ದು ಮೂರು ತಿಂಗಳು ಕಳೆದರೂ ಇದುವರೆಗೆ ಈ ಎರಡೂ ಪ್ರಮುಖ ಹುದ್ದೆಗಳಿಗೆ ನೇಮಕದ ಗೊಂದಲ ಮುಂದುವರಿದಿರುವುದರಿಂದ ಕಾಂಗ್ರೆಸ್‌ ಪಕ್ಷ ಇದನ್ನು ತನ್ನ ಲಾಭಕ್ಕಾಗಿ ಬಳಸಿಕೊಳ್ಳುತ್ತಿದೆ ಎಂಬ ಅಂಶ ಸಭೆಯಲ್ಲಿ ಪ್ರಸ್ತಾಪವಾಗಿದೆ ಎನ್ನಲಾಗಿದೆ.

ಘರ್‌ ವಾಪಸಿ ತಡೆಗೆ ಇಂದು ಬಿಜೆಪಿ ಕೋರ್‌ ಕಮಿಟಿ ಸಭೆ

ಹೀಗಾಗಿ, ಕೋರ್‌ ಕಮಿಟಿ ಸಭೆಯ ಈ ನಿರ್ಧಾರ ಅಥವಾ ಅಭಿಪ್ರಾಯವನ್ನು ಪಕ್ಷದ ರಾಜ್ಯಾಧ್ಯಕ್ಷ ನಳಿನ್‌ಕುಮಾರ್‌ ಕಟೀಲ್‌, ಸಂಸದೀಯ ಮಂಡಳಿ ಸದಸ್ಯರಾಗಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹಾಗೂ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಅವರು ಪಕ್ಷದ ವರಿಷ್ಠರ ಗಮನಕ್ಕೆ ತರಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

Follow Us:
Download App:
  • android
  • ios