Weekend Curfew ಬಿಜೆಪಿ ನಾಯಕರಿಂದಲೇ ಆಕ್ಷೇಪ, ಕುತೂಹಲ ಮೂಡಿಸಿದ ಬೊಮ್ಮಾಯಿ ತೀರ್ಮಾನ?

* ಕರ್ನಾಟಕದಲ್ಲಿ ವೀಕೆಂಡ್ ಕರ್ಫ್ಯೂಗೆ ವಿರೋಧ
* ಬಿಜೆಪಿ ನಾಯಕರಿಂದಲೇ ಆಕ್ಷೇಪ
* ಕುತೂಹಲ ಮೂಡಿಸಿದ ಸಿಎಂ ಬೊಮ್ಮಾಯಿ ನಡೆ

BJP Leaders Opposes Weekend Curfew In Karnataka rbj

ಬೆಂಗಳೂರು, (ಜ.18): ಕರ್ನಾಟಕದಲ್ಲಿ(Karnataka) ಕೊರೋನಾ 3ನೇ (Coronavirus 3rd Wave) ಅಲೆ ತೀವ್ರವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿಅದನ್ನ ನಿಯಂತ್ರಿಸಲು ಸರ್ಕಾರ ನೈಟ್ ಹಾಗೂ ವೀಕೆಂಡ್ ಕರ್ಫ್ಯೂ ಸೇರಿದಂತೆ ಹಲವು ಕಠಿಣ ಕ್ರಮಗಳನ್ನು ಜಾರಿಗೊಳಿಸಿದೆ.

ಆದ್ರೆ,   ನೈಟ್ ಹಾಗೂ ವೀಕೆಂಡ್ ಕರ್ಫ್ಯೂಗೆ (Night And Weekend Curfew) ಬಿಜೆಪಿ ನಾಯಕರೇ ಅಸಮಾಧಾನ ಹೊರಹಾಕಿದ್ದಾರೆ. ಅಲ್ಲದೇ ಅದು ಬೇಡವೇ ಬೇಡ ಎಂದು ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.

Corinavirus: ಬೊಮ್ಮಾಯಿ ಸಭೆಯ ಪ್ರಮುಖ ನಿರ್ಧಾರಗಳು, ವೀಕೆಂಡ್ ಕರ್ಫ್ಯೂ ಕತೆ ಏನು?

ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ(CT Ravi) ಹಾಗೂ ಮೈಸೂರು ಬಿಜೆಪಿ ಸಂಸದ ಪ್ರತಾಪ್ ಸಿಂಹ(Pratap Simha) ವೀಕೆಂಡ್ ಕರ್ಫ್ಯೂ ವಿರೋಧಿಸಿದ್ದಾರೆ.

ಇನ್ನು ಈ ಬಗ್ಗೆ  ಸಿ.ಟಿ.ರವಿ (C.T.Ravi) ಸುದ್ದಿಗಾರರೊಂದಿಗೆ ಮಾತನಾಡಿ, ಕೊರೋನಾ ತಡೆಗೆ ಇಂಥ ನಿರ್ಬಂಧಗಳು ಪರಿಹಾರವಲ್ಲ. ಸೋಂಕು ಹರಡುವುದನ್ನು ತಡೆಯಲು ಲಾಕ್​ಡೌನ್ ಅಥವಾ ವೀಕೆಂಡ್ ಕರ್ಫ್ಯೂ ಪರಿಹಾರವಲ್ಲ.ಜನರು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಸರ್ಕಾರ ನಿರ್ಧಾರ ಬದಲಿಸಬೇಕು ಎಂದು ಸ್ಪಷ್ಟಪಡಿಸಿದರು. 

ನಾನು ಕರ್ನಾಟಕ ಸರ್ಕಾರದ ನಿರ್ಧಾರವನ್ನು ವಿರೋಧಿಸುತ್ತಿಲ್ಲ. ನಿರ್ಬಂಧಗಳು ಹೆಚ್ಚಾದರೆ, ಈಗಿನ ಪರಿಸ್ಥಿತಿಯಲ್ಲಿ ಜನಸಾಮಾನ್ಯರಿಗೆ ಹೊರೆಯಾಗಲಿದೆ. ಸರ್ಕಾರ ಇದರ ಬಗ್ಗೆ ಗಂಭೀರವಾಗಿ ಗಮನಹರಿಸಬೇಕು, ಚಿಂತನೆ ನಡೆಸಬೇಕು ಎಂದರು. 

ಲಾಕ್‍ಡೌನ್ ಮತ್ತು ನೈಟ್​ಕರ್ಫ್ಯೂ ವಿಧಿಸುವುದರಿಂದ ಜನರಿಗೆ ತೊಂದರೆಯಾಗುತ್ತದೆ. ಜನರ ಪರಿಸ್ಥಿತಿಯ ಬಗ್ಗೆ ಸರ್ಕಾರ ಗಂಭೀರ ಚಿಂತನೆ ನಡೆಸಬೇಕು. ಪರಿಸ್ಥಿತಿ ಪರಾಮರ್ಶಿಸಿ ತಜ್ಞರ ಸಲಹೆ ಪಡೆದು ಕ್ರಮಕೈಗೊಳ್ಳಬೇಕು. ಬಿಗಿಯಾದ ಕ್ರಮ ತೆಗೆದುಕೊಳ್ಳಬೇಕಾದ ಅಗತ್ಯವಿಲ್ಲ ಎಂದು ಅಭಿಪ್ರಾಯ ತಿಳಿಸಿದರು.

 ವೀಕೆಂಡ್ ಕರ್ಫ್ಯೂ ಅಗತ್ಯವಿಲ್ಲ ಎಂದ ಪ್ರಹ್ಲಾದ್ ಜೋಶಿ
ರಾಜ್ಯದಲ್ಲಿ ಸದ್ಯಕ್ಕೆ ವಿಕೇಂಡ್ ಕರ್ಫ್ಯೂ ಅಗತ್ಯವಿಲ್ಲ. ರಾಜ್ಯದ ಆರ್ಥಿಕತೆಯೂ ಕೂಡಾ ಸಾಗಬೇಕು. ಈಗಾಗಲೇ ಸಾಕಷ್ಟು ಪ್ರಮಾಣದಲ್ಲಿ ಲಸಿಕೆ ನೀಡಲಾಗಿದೆ. ಹಾಗಾಗಿ ಸರ್ಕಾರ ನೋಡಿಕೊಂಡು ವೀಕೆಂಡ್ ಕರ್ಫ್ಯೂ ಕುರಿತು ತೀರ್ಮಾನ ಮಾಡಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.

ಹುಬ್ಬಳ್ಳಿಯ ಕೇಶ್ವಾಪೂರದ ಫಾತಿಮಾ ಶಾಲೆಯಲ್ಲಿ 15 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಲಸಿಕೆ ನೀಡುವ ಅಭಿಯಾನದ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಜೋಶಿ, ವಿಕೇಂಡ್ ಕರ್ಫ್ಯೂ ಬಗ್ಗೆ ಸಿಎಂ ಅವರಿಗೂ ವೈಯಕ್ತಿಕ ಸಲಹೆ ನೀಡಿದ್ದೇನೆ. ವಿಕೇಂಡ್ ಕರ್ಫ್ಯೂ ಸಡಿಲಿಸಿ ಎಂದು ಕೇಳಿಕೊಂಡಿದ್ಸೇನೆ ಎಂದು ಹೇಳಿದರು.

ಭಾರತದ ಲಸಿಕಾ ಅಭಿಯಾನಕ್ಕೆ ಇಡೀ ವಿಶ್ವವೇ ಬೆರೆಗಾಗಿದ್ದು, ಇಷ್ಟು ಕಡಿಮೆ ಸಮಯದಲ್ಲಿ ಭಾರೀ ಪ್ರಮಾಣದಲ್ಲಿ ಜನರಿಗೆ ಲಸಿಕೆ ನೀಡುತ್ತಿರುವುದನ್ನು ಕಂಡು ಮೂಗಿನ ಮೇಲೆ ಬೆರಳಿಟ್ಟಿದೆ ಎಂದು ಪ್ರಹ್ಲಾದ್ ಜೋಶಿ ಇದೇ ವೇಳೆ ಹೆಮ್ಮೆ ವ್ಯಕ್ತಪಡಿಸಿದರು.

ಪ್ರತಾಪ್ ಸಿಂಹ ಹೇಳಿದ್ದೇನು?
 ರಾಜ್ಯದಲ್ಲಿ ಕೊರೊನಾ ಮೂರನೇ ಅಲೆ ವ್ಯಾಪಕವಾಗಿ ಹರಡುತ್ತಿರೋ ವಿಚಾರಕ್ಕೆ ಸಂಬಂಧಿಸಿದಂತೆ ಸಂಸದ ಪ್ರತಾಪ್ ಸಿಂಹ ರಾಜ್ಯ ಸರ್ಕಾರಕ್ಕೆ ಹಲವು ಸಲಹೆಗಳನ್ನು ನೀಡಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಲಾಕ್‌ಡೌನ್ ಕಠಿಣ ನಿಯಮಗಳನ್ನು ಸರ್ಕಾರ ಮಾಡಬೇಡಿ ಎಂದು ಒತ್ತಾಯಿಸಿದ್ದಾರೆ.

‘ಜನ ಜೀವ ಉಳಿಸಿಕೊಂಡಿದ್ದಾರೆ. ಜೀವನ ದುಸ್ಥರವಾಗಿದೆ. ಯಾವುದೇ ಕಾರಣಕ್ಕೂ ಲಾಕ್‌ಡೌನ್ ಕಠಿಣ ನಿಯಮ ಬೇಡ. ಆಸ್ಪತ್ರೆಯಲ್ಲಿ ಸೌಲಭ್ಯ ಹೆಚ್ಚಿಸಿ ಸೋಂಕು ಹರಡದಂತೆ ಎಚ್ಚರ ವಹಿಸಿ. 1 ಮತ್ತು 2ನೇ ಅಲೆಯಲ್ಲಿ ಆಸ್ಪತ್ರೆ, ಆಕ್ಸಿಜನ್, ವೆಂಟಿಲೇಟರ್ ಸಮಸ್ಯೆ ಇತ್ತು. ಈಗ ಎಲ್ಲ ಸಮಸ್ಯೆಗಳನ್ನು ಬಗೆಹರಿಸಲಾಗಿದೆ. ಆ ಕಾನೂನು ಈ ಕಾನೂನು ಅಂತಾ ಜನರನ್ನು ಸಂಕಷ್ಟಕ್ಕೆ ಸಿಲುಕಿಸಬೇಡಿ. ಆರ್ಥಿಕ ಸ್ಥಿತಿಗತಿಗಳ ಬಗ್ಗೆ ಚಿಂತಿಸಿ ಎಲ್ಲಾ ವರ್ಗದ ಜನರಿಗೆ ಅನುಕೂಲವಾಗೋ ರೀತಿಯಲ್ಲಿ ಸೂಕ್ತ ಕ್ರಮಕೈಗೊಳ್ಳಿ ಅಂತ ತಮ್ಮದೇ ಸರ್ಕಾರಕ್ಕೆ ಒತ್ತಾಯ ಮಾಡಿದರು.

ಶುಕ್ರವಾರ ಅಂತಿಮ ನಿರ್ಧಾರ
ವೀಕೆಂಡ್ ಕರ್ಫ್ಯೂ (Weekend Curfew) ಮತ್ತು ನೈಟ್ ಕರ್ಫ್ಯೂ (Night Curfew) ತೆರವುಗೊಳಿಸುವಂತೆ ಹಲವರು ಮನವಿ ಮಾಡುತ್ತಿದ್ದಾರೆ. ಅಲ್ಲದೇ ಕರ್ಫ್ಯೂಗಳ ಬಗ್ಗೆ ತಜ್ಞರಲ್ಲೇ ಭಿನ್ನಾಭಿಪ್ರಾಯವಿದೆ ಎಂದು ಮೇಲ್ನೋಟಕ್ಕೆ ಗೋಚರವಾಗುತ್ತಿದೆ. ತಜ್ಞರ ದ್ವಂದ ಅಭಿಪ್ರಾಯಗಳ ಹಿನ್ನೆಲೆ, ಶುಕ್ರವಾರ ಈ ಬಗ್ಗೆ ಅಂತಿಮ ನಿರ್ಧಾರ ಹೊರಬೀಳಲಿದೆ. ತಜ್ಞರು ಶುಕ್ರವಾರ ನೀಡುವ ವರದಿ ಆಧಾರದ ಮೇಲೆ ಮುಂದಿನ ನಿರ್ಧಾರ ಕೈಗೊಳ್ಳಲಾಗುತ್ತದೆ.

ತಜ್ಞರ ಸಮಿತಿಯ ಕೆಲ ತಜ್ಞರು ನೈಟ್ ಕರ್ಫ್ಯೂ ಹಾಗೂ ವಿಕೇಂಡ್ ಕರ್ಫ್ಯೂ ಅವಶ್ಯಕತೆ ಇಲ್ಲ. ಆಸ್ಪತ್ರೆಗೆ ದಾಖಲಾಗುವ ಸೋಂಕಿತರ ಪ್ರಮಾಣ ಕಡಿಮೆಯಿದೆ. ಪ್ರತಿಯೊಂದು ಮನೆಯಲ್ಲೂ ಶೀತ, ತಲೆನೋವು, ಜ್ವರ ಇರುವ ರೋಗಗಳು ಇದ್ದಾರೆ. ಹೀಗಾಗಿ ಕರ್ಫ್ಯೂ ಮಾಡುವ ಅಗತ್ಯವಿಲ್ಲ ಅಂತ ಹೇಳುತ್ತಿದ್ದಾರೆ. ಇನ್ನೂ ಕೆಲ ತಜ್ಞರು ವಿಕೇಂಡ್ ಕರ್ಫ್ಯೂ ಜೊತೆ ಜೊತೆಗೆ ಹತ್ತು ದಿನ ಲಾಕ್​ಡೌನ್ ಮಾಡಬೇಕು ಅಂತ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಫೆಬ್ರವರಿಯಲ್ಲಿ ಕೊರೊನಾ ಭಾರೀ ತೀವ್ರ ಸ್ವರೂಪ ಪಡೆಯಲಿದ್ದು, ಕಠಿಣ ರೂಲ್ಸ್ ಬೇಕು ಅಂತ ಮತ್ತೊಂದು ತಜ್ಞರ ತಂಡ ತಿಳಿಸಿದೆ. ಹೀಗಾಗಿ ಶುಕ್ರವಾರ ಈ ಬಗ್ಗೆ ಚರ್ಚೆ ನಡೆಸಿ ಕರ್ಫ್ಯೂ ಬಗ್ಗೆ ನಿರ್ಧರಿಸಲಾಗುತ್ತದೆ.

Latest Videos
Follow Us:
Download App:
  • android
  • ios