ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಅವರು, ಡಿಸಿಎಂ ಡಿ.ಕೆ.ಶಿವಕುಮಾರ್‌ಗೆ ಮುಖ್ಯಮಂತ್ರಿ ಸ್ಥಾನ ನೀಡದಿದ್ದರೆ ಕಾಂಗ್ರೆಸ್ ಪಕ್ಷ ಧೂಳೀಪಟವಾಗಲಿದೆ ಎಂದು ಎಚ್ಚರಿಸಿದ್ದಾರೆ. ಅಧಿಕಾರ ಹಂಚಿಕೆ ವಿಚಾರವಾಗಿ ಸಿದ್ದರಾಮಯ್ಯ ಅವರು ಆಣೆ ಪ್ರಮಾಣ ಮಾಡಿದ್ದು, ಅದನ್ನು ಪಾಲಿಸದಿದ್ದರೆ ಪಕ್ಷಕ್ಕೆ ಕಂಟಕ ಎಂದರು.

ಮೈಸೂರು (ನ.23): ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ಗೆ ಸಿಎಂ ಸ್ಥಾನ ನೀಡದಿದ್ದರೆ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಧೂಳೀಪಟವಾಗಲಿದೆ ಎಂದು ಎಂದು ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.

.ಸಿಎಂ ಬದಲಾವಣೆ ವಿಚಾರವಾಗಿ ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ. ಎಂಎಲ್ ಸಿ ವಿಶ್ವನಾಥ ಅವರು, ಅಧಿಕಾರ ಹಂಚಿಕೆ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಐಎಸಿಸಿ ಅಧ್ಯಕ್ಷರ ಸಮಕ್ಷಮದಲ್ಲಿ ಆಣೆ ಪ್ರಮಾಣ ಮಾಡಿದ್ದಾರೆ ತಿಳಿಸಿದ್ದಾರೆ.

ಡಿಕೆ ಶಿವಕುಮಾರ ತಲೆಮೇಲೆ ಕೈಯಿಟ್ಟ ಸಿಎಂ?

ಕೆ.ಶಿವಕುಮಾರ್, ಡಿ.ಕೆ.ಸುರೇಶ್ ಸಹೋದರರ ಇಬ್ಬರ ತಲೆ ಮೇಲೆ ಸಿದ್ದರಾಮಯ್ಯ ಕೈ ಇಟ್ಟು ಎರಡೂವರೆ ವರ್ಷಗಳು ತುಂಬಿದ ಮೇಲೆ ಸಿಎಂ ಸ್ಥಾನ ಬಿಟ್ಟು ಕೊಡುವೆನೆಂದು ವಚನ ಕೊಟ್ಟಿದ್ದು, ಆ ಸಂದರ್ಭದಲ್ಲಿ ಕೆಲ ಹಿರಿಯ ಕಾಂಗ್ರೆಸ್ ನಾಯಕರು ಉಪಸ್ಥಿತರಿದ್ದರು. ಆದರೆ, ಈ ಬಗ್ಗೆ ಯಾರೊಬ್ಬರೂ ಈಗ ಬಾಯಿ ಬಿಡುತ್ತಿಲ್ಲ. ಡಿಕೆಶಿಗೆ ಅಧಿಕಾರ ಹಸ್ತಾಂತರ ಮಾಡದಿದ್ದರೆ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಧೂಳೀಪಟವಾಗಲಿದೆ ಎಂದು ಭವಿಷ್ಯ ನುಡಿದರು.