ಹಂಸಲೇಖ ಪತ್ನಿಗೆ ಅಭಿನಂದನೆ ಹೇಳಿದ ಸುರೇಶ್ ಕುಮಾರ್
* ಖ್ಯಾತ ಸಂಗೀತ ನಿರ್ದೇಶಕ, ಸಿನಿಮಾ ಸಾಹಿತಿ ಹಂಸಲೇಖ ಹೇಳಿಕೆ
* ಸಾಮಾಜಿಕ ಜಾಲತಾಣಗಳಲ್ಲಿ ಪರ-ವಿರೋಧ ಚರ್ಚೆ
* ಹಂಸಲೇಖ ಪತ್ನಿಗೆ ಅಭಿನಂದನೆ ಹೇಳಿದ ಸುರೇಶ್ ಕುಮಾರ್
ಬೆಂಗಳೂರು, (ನ.15): ಖ್ಯಾತ ಸಂಗೀತ ನಿರ್ದೇಶಕ, ಸಿನಿಮಾ ಸಾಹಿತಿ ನಾದ ಬ್ರಹ್ಮ ಹಂಸಲೇಖ(Hamsalekha) ಅವರು ಪೇಜಾವರ ಶ್ರೀಗಳ೯pejavara shree) ಕುರಿತು ಆಡಿದ ಮಾತುಗಳಿಗೆ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಅದರಲ್ಲೂ ಜಾಲತಾಣಗಳಲ್ಲಿ ಒಂದಷ್ಟು ಚರ್ಚೆ ಆಗ್ತಿದೆ . ಭಾರಿ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಹಂಸಲೇಖ ಅವರು ಕ್ಷಮೆಯಾಚಿಸಿದ್ದಾರೆ.
ಸಂಗೀತ ನಿರ್ದೇಶಕ 'ನಾದಬ್ರಹ್ಮ' ಹಂಸಲೇಖ ಅವರು ಈಚೆಗೆ ಮೈಸೂರಿನಲ್ಲಿ ನಡೆದ ಪ್ರಶಸ್ತಿ ಪುರಸ್ಕಾರ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಹೋಗಿದ್ದರು. ಆ ವೇಳೆ ಅವರು ದಲಿತರು, ಅಸ್ಪೃಶ್ಯತೆ ಕುರಿತಂತೆ ಮಾತಾನಾಡಿದ್ದರು, ಜೊತೆಗೆ ಪೇಜಾವರ ಶ್ರೀಗಳ ಹೆಸರನ್ನು ಪ್ರಸ್ತಾಪ ಮಾಡಿದ್ದರು. ಆ ವಿಡಿಯೋ ಈಗ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಅವರು ಕ್ಷೆಮ ಕೋರಿದ್ರು ಸಹ ಕೆಲವರು ತಮ್ಮದೇ ರೀತಿಯ ಅಭಿಪ್ರಾಯಗಳನ್ನ ವ್ಯಕ್ತಪಡಿಸುತ್ತಿದ್ದಾರೆ.
ಪೇಜಾವರ ಶ್ರೀಗಳ ಬಗ್ಗೆ ಹಂಸಲೇಖ ವಿವಾದಾತ್ಮಕ ಹೇಳಿಕೆ, ದಲಿತರ ಜೊತೆ ನಾವಿದ್ದೇವೆ ಎಂದ ಶ್ರೀಗಳು
ಅದರಂತೆ ಮಾಜಿ ಸಚಿವ ಎಸ್. ಸುರೇಶ್ ಕುಮಾರ್ (Suresh Kumar) ಸಹ ಹಂಸಲೇಖ ಅವರ ಹೇಳಿಕೆ ಬಗ್ಗೆ ಪೇಸ್‌ಬುಕ್ ಮೂಲಕ ಪ್ರತಿಕ್ರಿಯಿಸಿದ್ದಾರೆ. ಹಾಗಾದ್ರೆ, ಅವರು ಏನು ಹೇಳಿದ್ದಾರೆ ಎನ್ನುವುದು ಈ ಕೆಳಗಿನಂತಿದೆ.
ಸುರೇಶ್ ಕುಮಾರ್ ಅಭಿಪ್ರಾಯ
ಮನಸ್ಸಿನ ಕಹಿಯನ್ನೆಲ್ಲ ಕಕ್ಕಿದ ಮೇಲೆ "ಕೆಲವೊಂದು ಮಾತು ವೇದಿಕೆ ಗಲ್ಲ" ಎಂದು ಹೇಳುತ್ತಲೂ ಕ್ಷಮೆ ಕೇಳಬಹುದು ಎಂಬ ವಿಶೇಷ ಸಂಗತಿ ಇಂದು ಗೊತ್ತಾಯಿತು.
ಬೇಷರತ್ತಾಗಿ ಕ್ಷಮೆ ಕೇಳುವ ದೊಡ್ಡ ಗುಣವೂ ಇಲ್ಲವಲ್ಲ.
ಎದುರಿಗಿನ ಜನ ಚಪ್ಪಾಳೆ ತಟ್ಟುತ್ತಾರೆ & ಶಿಳ್ಳೆ ಹಾಕುತ್ತಾರೆ ಎಂದು ಸಂದರ್ಭ ಪ್ರಜ್ಞೆ, ಸಭಾ ಪ್ರಜ್ಞೆ ಕಳೆದುಕೊಂಡು ಅನಗತ್ಯವಾಗಿ ಏನೆಲ್ಲಾ ಹೇಳಿಬಿಟ್ಟ ಮೇಲೆ "ಕ್ಷಮೆ, ಕ್ಷಮೆ" ಎಂದು ಕೇಳುವುದೂ ಸಂಗೀತ ನಿರ್ದೇಶಕರು ಹೊರಹೊಮ್ಮಿಸಿರುವ ಕೆಟ್ಟ ಅಪಸ್ವರ.
ಎದುರಿಗೆ ಚಪ್ಪಾಳೆ ತಟ್ಟುವ ಜನರಿಗಿಂತ, ತನ್ನ ಚುಚ್ಚು ಮಾತುಗಳಿಂದ ಘಾಸಿಯಾಗುವ ಅಪಾರ ಸಂಖ್ಯೆಯ ಜನರ ಭಾವನೆ ಇಷ್ಟು ವರ್ಷ ಸಾರ್ವಜನಿಕ ಜೀವನ ನೋಡಿರುವವರಿಗೆ ಅರ್ಥವಾಗಬೇಕಿತ್ತು.
ಈಗ ಕ್ಷಮೆ ಕೇಳೋ ವಿಡಿಯೋದಲ್ಲೂ "ಕೆಲವೊಂದು ಮಾತುಗಳು ವೇದಿಕೆಗಲ್ಲ" ಅಂದಿದ್ದಾರೆ.
ಅಂತಹ ಮಾತುಗಳು ವೇದಿಕೆಗಲ್ಲ, ಮನಸ್ಸಲ್ಲಿದ್ದರೂ ವಿಷ ಅನ್ನೋದು ಇಷ್ಟು ವಯಸ್ಸಿನ ಹಿರಿಯರಾದವರಿಗೆ, ಇಷ್ಟೊಂದು ಅನುಭವ ಇರುವವರಿಗೆ ಗೊತ್ತಿಲ್ಲವೆ?
ಇವರ ಅರ್ಥಹೀನ ಮಾತಿನಿಂದ ಪೇಜಾವರ ಶ್ರೀಗಳ ಶ್ರೇಷ್ಠ ವ್ಯಕ್ತಿತ್ವಕ್ಕೆ ಏನೂ ಕುಂದಾಗುವುದಿಲ್ಲ. ರಾಗ ತಪ್ಪಿದವರ, ವಿವೇಚನೆಯ ತಾಳ ಕಳೆದುಕೊಂಡವರ ತೂಕ ಕಡಿಮೆಯಾಯಿತು ಅಷ್ಟೇ!
ಏನೇ ಆಗಲಿ. ಅವರಿಗೆ ತಿಳುವಳಿಕೆ ನೀಡಿರುವ ಅವರ ಧಮಪತ್ನಿಯವರಿಗೆ ನನ್ನ ಅಭಿನಂದನೆಗಳು.