Asianet Suvarna News Asianet Suvarna News

ಹೈಕೋರ್ಟ್ ಆದೇಶ ಉಲ್ಲಂಘಿಸಿ ಬೆಳಗಾವಿ ಸಂತ್ರಸ್ತ ಮಹಿಳೆ ಭೇಟಿಯಾದ ಬಿಜೆಪಿ: ಸಿಎಂ ಸಿದ್ದರಾಮಯ್ಯ ಆಕ್ರೋಶ

ಕರ್ನಾಟಕ ಹೈಕೋರ್ಟ್ ಆದೇಶವನ್ನು ಉಲ್ಲಂಘಿಸಿ ಬಿಜೆಪಿ ಸತ್ಯಶೋಧನಾ ಸಮಿತಿಯು ಬೆಳಗಾವಿಯ ಸಂತ್ರಸ್ತ ಮಹಿಳೆಯನ್ನು ಭೇಟಿ ಮಾಡಿದೆ. 

BJP Satya shodhana Committee met Belagavi assaulted woman in violation of High Court order sat
Author
First Published Dec 16, 2023, 8:43 PM IST

ಬೆಂಗಳೂರು (ಡಿ.16): ಬೆಳಗಾವಿಯಲ್ಲಿ ಮಹಿಳೆಯ ಮೇಲೆ ನಡೆದ ಅನಾಗರಿಕ ಘಟನೆ (ಮಹಿಳೆಯನ್ನು ಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿಹಾಕಿ ಥಳಿಸಿದ ಘಟನೆ) ಸಂತ್ರಸ್ಥೆಯನ್ನು ಭೇಟಿ ಮಾಡುವುದಕ್ಕೆ ಕರ್ನಾಟಕ ಉಚ್ಛ ನ್ಯಾಯಾಲಯ ನಿರ್ಬಂಧ ವಿಧಿಸಿದೆ. ಆದರೂ, ಬಿಜೆಪಿಯ ಸತ್ಯಶೋಧನಾ ನಿಯೋಗವು ಭೇಟಿ ನೀಡಿದ್ದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 'ರಾಜ್ಯ ಹೈಕೋರ್ಟ್ ನ ನಿರ್ಬಂಧದ ಹೊರತಾಗಿಯೂ ದುರುಳರಿಂದ ದೌರ್ಜನ್ಯಕ್ಕೆ ಒಳಗಾಗಿರುವ  ಬೆಳಗಾವಿಯ ಸಂತ್ರಸ್ತ ಮಹಿಳೆಯನ್ನು ಭೇಟಿ‌ಮಾಡುವ ಮೂಲಕ ಬಿಜೆಪಿ ನಾಯಕರು ನ್ಯಾಯಾಲಯದ ಸೂಚನೆಯನ್ನು ಉಲ್ಲಂಘಿಸಿ ಅಗೌರವಿಸಿರುವುದು ಮಾತ್ರ ಅಲ್ಲ ತಮ್ಮ ಅಸೂಕ್ಷ್ಮತೆಯನ್ನು‌ ಮೆರೆದಿದ್ದಾರೆ. ಸಂತ್ರಸ್ತ ಮಹಿಳೆಯು ಮಾನಸಿಕವಾಗಿ ತೀವ್ರವಾಗಿ ಜರ್ಝರಿತರಾಗಿರುವ ಹಿನ್ನೆಲೆಯಲ್ಲಿ ಹಾಗೂ ಮಾನಸಿಕ ಆಘಾತದಲ್ಲಿರುವ ಈ ಸಂದರ್ಭದಲ್ಲಿ ಆಕೆಯ ಭೇಟಿಗೆ ಅಗಮಿಸುವವರನ್ನು ನಿರ್ಬಂಧಿಸಬೇಕು ಎಂದು  ಹೈಕೋರ್ಟ್  ಮುಖ್ಯನ್ಯಾಯಾಧೀಶರು ಸ್ವಯಂಪ್ರೇರಿತರಾಗಿ ಇಂದು ಬೆಳಿಗ್ಗೆ ಸೂಚಿಸಿದ್ದರು. 

ಬೆಳಗಾವಿ: ಮಹಿಳೆ ವಿವಸ್ತ್ರಗೊಳಿಸಿದ ಪ್ರಕರಣ, ಪೊಲೀಸ್‌ ಇನ್ಸಪೆಕ್ಟರ್‌ ಸಸ್ಪೆಂಡ್‌

ಆದರೆ, ರಾಜಕೀಯ ನಾಯಕರು ಸಂತ್ರಸ್ತ ಮಹಿಳೆಯನ್ನು‌ ಭೇಟಿಯಾಗುವ ಸುದ್ದಿಯ ಹಿನ್ನೆಲೆಯಲ್ಲಿಯೇ ಮುಖ್ಯನ್ಯಾಯಾಧೀಶರು ಈ ಸೂಚನೆ ನೀಡಿರುವುದು‌ ಗಮನಾರ್ಹ. ಮಹಿಳೆಯು ಚಿಕಿತ್ಸೆ ಪಡೆಯುತ್ತಿರುವ ಹಿನ್ನೆಲೆಯಲ್ಲಿ ಸಂದರ್ಶಕರ ಭೇಟಿಯು ಆಕೆಯ ಆರೋಗ್ಯ ಹಾಗೂ ಚಿಕಿತ್ಸೆಯ ಮೇಲೆ ಪರಿಣಾಮ ಬೀರಲಿದೆ. ಹಾಗಾಗಿ, ಮಹಿಳೆಯ ಹಿತದೃಷ್ಟಿಯಿಂದ ಸಂದರ್ಶಕರ ಭೇಟಿಯನ್ನು ನಿರ್ಬಂಧಿಸುವುದು ಅಗತ್ಯ ಎಂದು ತಾನು ಭಾವಿಸುವುದಾಗಿ ಹೈಕೋರ್ಟ್ ಹೇಳಿದೆ.

ಯಾವುದೇ ವ್ಯಕ್ತಿ, ಸಮೂಹ, ಗುಂಪು, ಸಂಘಟನೆ, ರಾಜಕೀಯ ಪಕ್ಷಗಳು ಹಾಗೂ ಇನ್ನಿತರರು ಮಹಿಳೆಯ ಚಿಕಿತ್ಸೆಯ ಹೊಣೆ ಹೊತ್ತಿರುವ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿಯವರ ಪೂರ್ವ ಲಿಖಿತ ಅನುಮತಿ ಇಲ್ಲದೇ ಸಂತ್ರಸ್ತ ಮಹಿಳೆಯನ್ನು ಭೇಟಿಯಾಗಬಾರದು ಎಂದು ಹೈಕೋರ್ಟ್ ಆದೇಶಿಸಿತ್ತು. ಗಿದ್ದರೂ ಒಂದು‌ ಅಮಾನುಷ ಘಟನೆಯನ್ನು ರಾಜಕೀಯ ಲಾಭಕ್ಕೆ ಬಳಸುವ ದುರ್ಬುದ್ಧಿ ತೋರಿರುವ ಬಿಜೆಪಿ ನಾಯಕರು ಸತ್ಯಶೋಧನೆಯ ಹೆಸರಿನಲ್ಲಿ ನ್ಯಾಯಾಲಯದ ಆದೇಶ, ನಿರ್ದೇಶನಗಳನ್ನು ಗಾಳಿಗೆ ತೂರಿ ಸಂತ್ರಸ್ತೆಯನ್ನು ಭೇಟಿಯಾಗಿದ್ದಾರೆ.

ಸಂತ್ರಸ್ತೆಯ ಸೂಕ್ಷ್ಮ ಮಾನಸಿಕ ಸ್ಥಿತಿಯ ಬಗ್ಗೆ ಎಳ್ಳಷ್ಟೂ ಗೌರವವಿಲ್ಲದ ಸಂವೇದನಾಶೂನ್ಯ ಬಿಜೆಪಿ ನಾಯಕರು ಹಾಗೂ ಅವರ ಬೆನ್ನಿಗೆ ನಿಂತು ಚಿತಾವಣೆ ನಡೆಸುತ್ತಿರುವ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅವರ ನಡೆ-ನುಡಿಯನ್ನು ನಾಗರಿಕ‌ ಸಮಾಜ ಖಂಡಿಸಬೇಕಾಗಿದೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪೋಸ್ಟ್ ಮಾಡಿಕೊಂಡಿದ್ದಾರೆ.

ಕೋವಿಡ್-19 ಓಮಿಕ್ರಾನ್ ಉಪತಳಿ ಆರ್ಭಟ ಪುನಾರಂಭ: 356 ಮಂದಿಗೆ ಕೊರೊನಾ ಪಾಸಿಟಿವ್!

ಹೈಕೋರ್ಟ್ ಆದೇಶವೇನು?
ಬೆಳಗಾವಿಯ ಹೊಸ ವಂಟಮೂರಿ ಗ್ರಾಮದಲ್ಲಿ ನಡೆದ ಪ್ರಕರಣದಲ್ಲಿ ನೊಂದ ಸಂತ್ರಸ್ತೆಯ ದೈಹಿಕ / ಮಾನಸಿಕ ಪರಿಸ್ಥಿತಿಯನ್ನು ಅವಲೋಕಿಸಿ ಸ್ಥಳೀಯ ವೈದ್ಯಾಧಿಕಾರಿಗಳ ಅಥವಾ ಅವರಿಗೆ ಚಿಕಿತ್ಸೆ ನೀಡುವ ವೈದ್ಯರ ಪೂರ್ವಾನುಮತಿ ಇಲ್ಲದೇ ಯಾವುದೇ ವ್ಯಕ್ತಿ, ಗುಂಪು, ಸಂಘ ಸಂಸ್ಥೆಗಳು ಹಾಗೂ ರಾಜಕೀಯ ಪಕ್ಷಗಳು ಭೇಟಿಯಾಗುವಂತಿಲ್ಲ. ಮುಂದುವರೆದು ಸಂತ್ರಸ್ತೆಯ ಕುಟುಂಬಸ್ಥರು, ಶಾಸನಬದ್ಧ ಅಧಿಕಾರಿಗಳು ಹಾಗೂ ತನಿಖಾಧಿಕಾರಿಗಳಿಗೆ ಈ ನಿರ್ಬಂಧ ಅನ್ವಯಿಸುವುದಿಲ್ಲ ಎಂದು ಕರ್ನಾಟಕ ಉಚ್ಛನ್ಯಾಯಾಲಯದ ಮುಖ್ಯ ನ್ಯಾಯಾಧೀಶರು ಆದೇಶವನ್ನು ಹೊರಡಿಸಿರುತ್ತಾರೆ.

Follow Us:
Download App:
  • android
  • ios