ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ದ್ವೇಷದ ಹಾಗೂ ತುಷ್ಟೀಕರಣ ರಾಜಕಾರಣ ಮಾಡುತ್ತಿದ್ದು, ಹಿಂದಿನ ಸರ್ಕಾರದ ತೀರ್ಮಾನಗಳನ್ನು ರದ್ದು ಮಾಡುವುದನ್ನೇ ತನ್ನ ಸಾಧನೆ ಎನ್ನುವಂತೆ ನಡೆದುಕೊಳ್ಳುತ್ತಿದೆ ಎಂದು ಕಿಡಿಕಾರಿದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಬೆಂಗಳೂರು(ಜೂ.16): ಮತಾಂತರ ನಿಷೇಧ ಕಾಯ್ದೆ ರದ್ದುಗೊಳಿಸುವ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ಸಭೆಯ ನಿರ್ಧಾರದ ವಿರುದ್ಧ ಪ್ರತಿಪಕ್ಷ ಬಿಜೆಪಿಯ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಸರ್ಕಾರ ತುಷ್ಟೀಕರಣ ರಾಜಕಾರಣ ಮಾಡುತ್ತಿದೆ ಎಂದು ಆಪಾದಿಸಿದ್ದಾರೆ.
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ದ್ವೇಷದ ಹಾಗೂ ತುಷ್ಟೀಕರಣ ರಾಜಕಾರಣ ಮಾಡುತ್ತಿದ್ದು, ಹಿಂದಿನ ಸರ್ಕಾರದ ತೀರ್ಮಾನಗಳನ್ನು ರದ್ದು ಮಾಡುವುದನ್ನೇ ತನ್ನ ಸಾಧನೆ ಎನ್ನುವಂತೆ ನಡೆದುಕೊಳ್ಳುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ.
ಬಿಜೆಪಿ ತಂದ ಮತಾಂತರ ಕಾಯ್ದೆಗೆ ಕೊಕ್, ಸಿದ್ದು ಸರ್ಕಾರದ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ!
ಸಮಾಜಕ್ಕೆ ಮಾರಕವಾಗಿದ್ದ ಮತಾಂತರ ನಿಷೇಧ ಕಾಯ್ದೆಯನ್ನು ರದ್ದು ಮಾಡುವ ತೀರ್ಮಾನ ತೆಗೆದುಕೊಂಡು ಸರ್ಕಾರ ಯಾರ ಓಲೈಕೆ ಮಾಡುತ್ತಿದೆ? ಹೈಕಮಾಂಡ್ ಹಂಗಿನಲ್ಲಿ ಅಧಿಕಾರ ನಡೆಸುತ್ತಿರುವ ಸಿದ್ದರಾಮಯ್ಯ ಅವರು ರಾಜ್ಯದ ಜನರ ಹಿತಾಸಕ್ತಿಗಿಂತ ಹೈಕಮಾಂಡ್ ಓಲೈಕೆಗೆ ಆದ್ಯತೆ ನೀಡುತ್ತಿರುವಂತಿದೆ ಎಂದು ಅವರು ಟ್ವೀಟ್ ಮೂಲಕ ಟೀಕಿಸಿದ್ದಾರೆ.
ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್ ಅವರು ಮಾತನಾಡಿ, ಕಾಯ್ದೆ ವಾಪಸ್ ಮುಖೇನ ರಾಜ್ಯ ಕಾಂಗ್ರೆಸ್ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿರುವುದು ಖಂಡನೀಯ. ಆಸೆ, ಆಮಿಷಗಳಿಗೆ, ಅಧಿಕಾರಕ್ಕಾಗಿ ಸಾವಿರಾರು ಜನರು ಮರುಳಾಗಿ ಮತಾಂತರವಾಗುತ್ತಿದ್ದರು. ರಾಜಾರೋಷವಾಗಿ ಮತಾಂತರವಾಗುವುದು ಸರಿಯಲ್ಲ. ಕಾನೂನು ಪ್ರಕಾರ ಮತಾಂತರವಾಗಬೇಕು ಎಂಬ ಉದ್ದೇಶದಿಂದ ನಮ್ಮ ಸರ್ಕಾರ ಮತಾಂತರ ನಿಷೇಧ ಕಾಯ್ದೆ ಜಾರಿಗೆ ತಂದಿತ್ತು. ಈ ವಿಚಾರವನ್ನು ನಾವು ಜನರ ಬಳಿ ತೆಗೆದುಕೊಂಡು ಹೋಗುತ್ತೇವೆ ಎಂದು ಹೇಳಿದ್ದಾರೆ.
ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು, ಕಾಂಗ್ರೆಸ್‌ನ ಹಳೇ ಚಾಳಿ ತುಷ್ಟೀಕರಣ. ಜನರು ಈ ಸರ್ಕಾರಕ್ಕೆ ಪಾಠ ಕಲಿಸ್ತಾರೆ. ಅಧಿಕಾರ ಕಾಂಗ್ರೆಸ್‌ನವರ ತಲೆಗೆ ಹೊಡೆದುಬಿಟ್ಟಿದೆ. ಸಮಾಜದಲ್ಲಿ ಶಾಂತಿ ನೆಲೆಸುವುದು ಕಾಂಗ್ರೆಸ್‌ಗೆ ಬೇಕಿಲ್ಲ. ಸಮಾಜದಲ್ಲಿ ಅಶಾಂತಿ, ಗಲಭೆ, ಗೊಂದಲ ಇರಬೇಕು ಅಂತ ಬಯಸಿದೆ. ನಾವು ಕಾನೂನು ಪ್ರಕಾರವೇ ಮತಾಂತರ ತಡೆ ಮಸೂದೆ ತಂದಿದ್ದೆವು. ಅದರಲ್ಲಿ ಲೋಪ ಏನೂ ಇರಲಿಲ್ಲ ಎಂದು ತಿಳಿಸಿದ್ದಾರೆ.
ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರು, ಮತಾಂತರ ನಿಷೇಧ ಕಾಯ್ದೆಯನ್ನು ಹಿಂಪಡೆಯುವುದರ ಮೂಲಕ ಕಾಂಗ್ರೆಸ್ ತನ್ನ ಹಿಂದೂ ವಿರೋಧಿ ನಿಲುವನ್ನು ಮತ್ತೆ ಅನುಸರಿಸಿದೆ. ಆಮಿಷದ ಮತಾಂತರವನ್ನು ನಿರ್ಬಂಧಿಸುವ ಮತಾಂತರ ನಿಷೇಧ ಕಾಯ್ದೆಯನ್ನು ಹಿಂಪಡೆಯುವುದು ಹಿಂದೂ ಸಮಾಜವನ್ನು ಮತಾಂತರಗೊಳಿಸುವವರಿಗೆ ಬೆಂಬಲ ನೀಡಿದಂತೆ ಅಲ್ಲವೇ? ಯಾವ ಮಾಫಿಯಾ ಈ ಮತಾಂತರ ನಿಷೇಧ ಕಾಯ್ದೆ ವಾಪಸ್ ಪಡೆಯಲು ಒತ್ತಡ ಹೇರಿದೆ ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ದ್ವೇಷದ ಹಾಗೂ ತುಷ್ಟೀಕರಣದ ರಾಜಕಾರಣ ಮಾಡುತ್ತಿದೆ. ಸಮಾಜಕ್ಕೆ ಮಾರಕವಾಗಿದ್ದ ಮತಾಂತರ ನಿಷೇಧ ಕಾಯ್ದೆಯನ್ನು ರದ್ದು ಮಾಡುವ ತೀರ್ಮಾನ ತೆಗೆದುಕೊಂಡು ಯಾರ ಓಲೈಕೆ ಮಾಡುತ್ತಿದೆ? ಅಂತ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಮಹದೇವಪ್ಪನೂ ಕನ್‌ವರ್ಟ್, ಕಾಕಾ ಪಾಟಿಲನೂ ಕನ್‌ವರ್ಟ್, ಮತಾಂತರ ನಿಷೇಧ ವಾಪಸ್‌ಗೆ ಯತ್ನಾಳ್ ತಿರುಗೇಟು!
ಆಸೆ, ಆಮಿಷಗಳಿಗೆ, ಅಧಿಕಾರಕ್ಕಾಗಿ ಸಾವಿರಾರು ಜನರು ಮರುಳಾಗಿ ಮತಾಂತರವಾಗುತ್ತಿದ್ದರು. ರಾಜಾರೋಷವಾಗಿ ಮತಾಂತರವಾಗುವುದು ಸರಿಯಲ್ಲ. ಕಾನೂನು ಪ್ರಕಾರ ಮತಾಂತರವಾಗಬೇಕು ಎಂಬ ಉದ್ದೇಶದಿಂದ ನಮ್ಮ ಸರ್ಕಾರ ಮತಾಂತರ ನಿಷೇಧ ಕಾಯ್ದೆ ಜಾರಿಗೆ ತಂದಿತ್ತು ಅಂತ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ಹೇಳಿದ್ದಾರೆ.
ಕರ್ನಾಟಕದಲ್ಲಿನ ಕಾಂಗ್ರೆಸ್ ಸರ್ಕಾರ ಪಿಎಫ್‌ಐನ ಕಾರ್ಯಸೂಚಿ ಪೂರೈಸಲು ಹೊರಟಿದೆ. ಮತಾಂತರ ನಿಷೇಧ ಕಾಯ್ದೆ ರದ್ದುಗೊಳಿಸಲು ನಿರ್ಧರಿಸುವ ಮೂಲಕ ಧಾರ್ಮಿಕ ಮತಾಂತರವನ್ನು ಸ್ಪಷ್ಟವಾಗಿ ನಿಷೇಧಿಸುವ ಬಗ್ಗೆ ಸುಪ್ರೀಂಕೋರ್ಟ್ ನೀಡಿದ ತೀರ್ಪನ್ನು ನಿರಾಕರಿಸಿ ಕಾಂಗ್ರೆಸ್ ಸರ್ಕಾರ ಸಂವಿಧಾನದ ವಿರುದ್ಧ ನಡೆದುಕೊಳ್ಳುತ್ತಿದೆ ಅಂತ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ತಿಳಿಸಿದ್ದಾರೆ.
