ರಾಜ್ಯ ರಾಜಕೀಯಲ್ಲಿ ಹೈ ಡ್ರಾಮಾ ನಡೆಯುತ್ತಿರುವ ಬೆನ್ನಲ್ಲೇ ಬಿಜೆಪಿ ರಾಜ್ಯಾದ್ಯಕ್ಷ ಬಿ.ಎಸ್ ಯಡಿಯೂರಪ್ಪ ಮಹತ್ವದ ನಿರ್ಧಾರವೊಂದನ್ನು ಕೈ ಗೊಂಡಿದ್ದಾರೆ. 

ಬೆಂಗಳೂರು : ಆಡಳಿತಾರೂಢ ಮೈತ್ರಿ ಸರ್ಕಾರಕ್ಕೆ ಟಾಂಗ್‌ ಕೊಡಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಸೋಮವಾರದಿಂದ ಎರಡು ದಿನಗಳ ಬರ ಅಧ್ಯಯನ ಪ್ರವಾಸ ಕೈಗೊಳ್ಳಲಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮೊದಲ ದಿನ ಸೋಮವಾರದಂದು ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ ಬರ ಸ್ಥಳಗಳಿಗೆ ಪ್ರವಾಸ ಕೈಗೊಳ್ಳಲಿದ್ದಾರೆ. ಮೊದಲಿಗೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಕುರುಡುಮಲೆ ಗಣೇಶ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಬರ ಪೀಡಿತ ಸ್ಥಳಗಳಿಗೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಲಿದ್ದಾರೆ. ಜಿಲ್ಲಾಧಿಕಾರಿ ಮತ್ತು ಇತರೆ ಅಧಿಕಾರಿಗಳೊಂದಿಗೆ ಮಾಹಿತಿ ಪಡೆದುಕೊಳ್ಳಲಿದ್ದಾರೆ. ಬಳಿಕ ಚಿಕ್ಕಬಳ್ಳಾಪುರ ಜಿಲ್ಲೆಯ ಬರ ಪೀಡಿತ ಸ್ಥಳಗಳಿಗೆ ಭೇಟಿ ನೀಡಿ ಅಧ್ಯಯನ ನಡೆಸಿ ಅಲ್ಲಿನ ಜಿಲ್ಲಾಧಿಕಾರಿಗಳಿಂದ ಮಾಹಿತಿ ಸಂಗ್ರಹಿಸಲಿದ್ದಾರೆ.

ಮಂಗಳವಾರ ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಗಳಿಗೆ ಭೇಟಿ ನೀಡಲಿದ್ದಾರೆ. ಯಡಿಯೂರಪ್ಪ ಅವರ ಜೊತೆ ವಿಧಾನಪರಿಷತ್‌ ಸದಸ್ಯ ರವಿಕುಮಾರ್‌, ಮಾಜಿ ಸಚಿವ ಕಟ್ಟಾಸುಬ್ರಹ್ಮಣ್ಯ ನಾಯ್ಡು ಸೇರಿದಂತೆ ಇತರರು ಸಾಥ್‌ ನೀಡಲಿದ್ದಾರೆ. ಶನಿವಾರ ದೆಹಲಿಯಿಂದ ಆಗಮಿಸಿದ ಬಳಿಕ ಪಕ್ಷದ ಶಾಸಕರೊಂದಿಗೆ ಚರ್ಚಿಸಿ ಕಾಂಗ್ರೆಸ್‌ಗೆ ತಿರುಗೇಟು ನೀಡಲು ಈ ನಿರ್ಧಾರ ಕೈಗೊಂಡರು ಎಂದು ಮೂಲಗಳು ಹೇಳಿವೆ.