ಪ್ರಿಯಾಂಕ್ ಖರ್ಗೆ ತವರಲ್ಲಿ ಗೂಂಡಾಗಿರಿ ಮೀತಿ ಮೀರಿದೆ; ಬಿವೈ ವಿಜಯೇಂದ್ರ ಕಿಡಿ

ಬಿಜೆಪಿಗೆ ಕರ್ನಾಟಕ ಸುಭದ್ರ ಕೋಟೆಯಾಗಿ ರೂಪಿಸಬೇಕು ಎಂಬುದು ನಮ್ಮ ಉದ್ದೇಶ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ 28 ಸ್ಥಾನ ಗೆಲ್ಲಬೇಕು. ಅಷ್ಟೇ ಅಲ್ಲ ಜಿಲ್ಲಾ ಪಂಚಾಯಿತಿ ಕಾರ್ಯಕರ್ತರ ಚುನಾವಣೆಯಲ್ಲೂ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಿ ಕಾರ್ಯಕರ್ತರಿಗೆ ಶಕ್ತಿ ತುಂಬುತ್ತೇವೆ ಎಂದು ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ತಿಳಿಸಿದರು.

BJP State President BY Vijayendra press conference in Mysore rav

ಮೈಸೂರು (ನ.20): ಬಿಜೆಪಿಗೆ ಕರ್ನಾಟಕ ಸುಭದ್ರ ಕೋಟೆಯಾಗಿ ರೂಪಿಸಬೇಕು ಎಂಬುದು ನಮ್ಮ ಉದ್ದೇಶ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ 28 ಸ್ಥಾನ ಗೆಲ್ಲಬೇಕು. ಅಷ್ಟೇ ಅಲ್ಲ ಜಿಲ್ಲಾ ಪಂಚಾಯಿತಿ ಕಾರ್ಯಕರ್ತರ ಚುನಾವಣೆಯಲ್ಲೂ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಿ ಕಾರ್ಯಕರ್ತರಿಗೆ ಶಕ್ತಿ ತುಂಬುತ್ತೇವೆ ಎಂದು ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ತಿಳಿಸಿದರು.

ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಯೊಂದಿಗೆ ಮಾತನಾಡಿದ ಅವರು,  ಲೋಕಸಭೆ, ವಿಧಾನಸಭೆ ಚುನಾವಣೆಯಷ್ಟೇ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯತಿ ಚುನಾವಣೆ ಗಂಭೀರವಾಗಿ ಪರಿಗಣಿಸುತ್ತೇವೆ.
ಮೈಸೂರಿನೊಂದಿಗೆ ನನಗೆ ಅವಿನಾಭಾವ ಸಂಬಂಧವಿದೆ. ರಾಷ್ಟ್ರೀಯ ನಾಯಕರು ಗುರುತಿಸಲು, ಶಿಕಾರಿಪುರದವರು ಶಾಸಕನಾಗಿ ಮಾಡಲು ಮೈಸೂರು- ಚಾಮರಾಜನಗರ ಕಾರಣ. ಹಳೇ ಮೈಸೂರು ಭಾಗ ನನ್ನ ಪ್ರಥಮ ಆದ್ಯತೆ. ಮುಂದಿನ ಚುನಾವಣೆಗಳಲ್ಲಿ ಈ ಭಾಗದಲ್ಲಿ ಹೆಚ್ಚು ಸ್ಥಾನ ಗೆಲ್ಲುತ್ತೇವೆ ಎಂದರು. 

ಮೋದಿ ಕೈ ಬಲಪಡಿಸಲು ವಿಜಯೇಂದ್ರ ರಾಜ್ಯ ಪ್ರವಾಸ

ಇದು ರೈತ ವಿರೋಧಿ ಸರ್ಕಾರ:

ರಾಜ್ಯ ಸರ್ಕಾರದ ಮೇಲೆ ದೊಡ್ಡ ನಿರೀಕ್ಷೆ ಇತ್ತು. ಆದರೆ ಅಧಿಕಾರಕ್ಕೆ ಬಂದ  ಆರು ತಿಂಗಳಲ್ಲೇ ಕಾಂಗ್ರೆಸ್ ಸರ್ಕಾರ ನಿರಾಸೆ ಮೂಡಿಸಿದೆ. ಜನ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಚುನಾವಣೆಗೂ ಮುನ್ನ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಜೋಡೆತ್ತು ರೀತಿ ಇದ್ದರು. ಈಗ ಒಬ್ಬರ ಮೇಲೆ ಒಬ್ಬರು ಬೀದಿಯಲ್ಲಿ ಕಿತ್ತಾಡುತ್ತಿದ್ದಾರೆ.ಸಿದ್ದರಾಮಯ್ಯರನ್ನ ಸಿಎಂ ಸ್ಥಾನದಿಂದ ಕೆಳಗಿಳಿಸಬೇಕು ಅಂತ ಡಿ.ಕೆ.ಶಿವಕುಮಾರ್ ಕಾಯುತ್ತಿದ್ದಾರೆ. ಇತ್ತ ಡಿ.ಕೆ.ಶಿವಕುಮಾರ್ ಹಣಿಯಲು ಎಷ್ಟು ಉಪಮುಖ್ಯಮಂತ್ರಿ ಮಾಡಬೇಕು ಅಂತ ಸಿದ್ದರಾಮಯ್ಯ ಯೋಚನೆ ಮಾಡುತ್ತಿದ್ದಾರೆ. ಅವರವರೇ ಕಿತ್ತಾಟದ ಬಗ್ಗೆ ನನಗೆ ತಕರಾರು ಇಲ್ಲ. ಸರ್ಕಾರ ಬಂದ ಮೇಲೆ ನಿಮ್ಮ ಸಾಧನೆ ಏನು?
ನಿಮ್ಮದೇ ಶಾಸಕರು ತಲೆ ಎತ್ತಿಕೊಂಡು ಓಡಾಡಲು ಆಗುತ್ತಿಲ್ಲ. ಬರ ಪರಿಸ್ಥಿತಿ ಬಗ್ಗೆ ಗಮನ ಹರಿಸಿಲ್ಲ. ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸಿದ್ದು ಸರ್ಕಾರದ ಏಕೈಕ ಸಾಧನೆ. ಇದುವರೆಗೂ ಮೇವು ಸಂಗ್ರಹ ಮಾಡಿಲ್ಲ. ಉಸ್ತುವಾರಿ ಸಚಿವರು ಬರಪೀಡಿತ ಪ್ರದೇಶಗಳಲ್ಲಿ  ಪ್ರವಾಸ ಮಾಡಿಲ್ಲ. ಬಿಜೆಪಿ ಸರ್ಕಾರದ ಅವಧಿಯಲ್ಲಿ ರೈತರಿಗೆ ನೀಡುತ್ತಿದ್ದ 4 ಸಾವಿರ ಅನುದಾನವನ್ನು ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಕಡಿತ ಮಾಡಲಾಗಿದೆ. ಇದು ರೈತ ವಿರೋಧಿ ಸರ್ಕಾರ ಎಂದು ವಾಗ್ದಾಳಿ ನಡೆಸಿದರು.

ಅಭಿವೃದ್ಧಿಯೇ ಇಲ್ಲ:

ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಸಂಪೂರ್ಣವಾಗಿ ಕುಂಠಿತವಾಗಿವೆ. ರೈತರ ಪ್ರತಿಭಟನೆಯನ್ನು ಹತ್ತಿಕ್ಕುವ ಕೆಲಸ ನಡೆಯುತ್ತಿದೆ.
ಸಿಎಂ ಸಿದ್ದರಾಮಯ್ಯನವರ ಸ್ವಂತ ಜಿಲ್ಲೆಯಲ್ಲೇ ರೈತರ ಪ್ರತಿಭಟನೆ ಹತ್ತಿಕ್ಕುವ ಕೆಲಸ ನಡೆದಿದೆ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಬಡವರ ವಿರೋಧಿ, ರೈತರ ವಿರೋಧಿ ಸರ್ಕಾರ. ಅಧಿಕಾರದ ಅಮಲಿನಲ್ಲಿ ಸರ್ಕಾರ ತೆಲುತ್ತಿದೆ. ಜನ ಸರ್ಕಾರದ ವಿರುದ್ಧ ಬೇಸತ್ತಿದ್ದಾರೆ ಮುಂದಿನ ಚುನಾವಣೆಯಲ್ಲಿ ಈ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ ಎಂದರು.

ಇನ್ನು ಸ್ಪೀಕರ್ ಬಗ್ಗೆ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿಕೆ ವಿಚಾರ ಪ್ರಸ್ತಾಪಿಸಿದ ಬಿವೈ ವಿಜಯೇಂದ್ರ, ರಾಜ್ಯ ಸರ್ಕಾರದ ಸಚಿವರ ಕಾರ್ಯ ಪರಿಸ್ಥಿತಿ ನೋಡಿದ್ರೆ ಕಣ್ಣಲ್ಲಿ ನೀರು ತರಿಸುತ್ತೆ. ಮಾತೆತ್ತಿದ್ರೆ ಸಂವಿಧಾನ, ಅಂಬೇಡ್ಕರ್ ಬಗ್ಗೆ ಮಾತನಾಡ್ತಾರೆ. ಆದರೆ ಜಮೀರ್ ಅಹ್ಮದ್ ಖಾನ್ ಹೇಳಿಕೆ ನೋಡಿದ್ರೆ. ಕಾಂಗ್ರೆಸ್ ಸಚಿವರು ಪ್ರಜಾಪ್ರಭುತ್ವ ವಿರೋಧಿಗಳು, ದಲಿತ ವಿರೋಧಿಗಳು ಎಂಬುದು ಗೊತ್ತಾಗುತ್ತೆ. ಜಮೀರ್ ಅಹ್ಮದ್ ಖಾನ್ ಹೇಳಿಕೆಯನ್ನ ಸಿಎಂ ಆಗಲಿ, ಡಿಸಿಎಂ ಯಾರೂ ಸಹ ವಿರೋಧಿಸಿಲ್ಲ. ಜಮೀರ್ ಅಹ್ಮದ್ ಖಾನ್ ರ ಬಳಿ ಸಿಎಂ ರಾಜೀನಾಮೆ ಪಡೆಯಲಿ ಎಂದು ಒತ್ತಾಯಿಸಿದರು.

ಪ್ರಿಯಾಂಕ್‌ ಖರ್ಗೆ ಕ್ಷೇತ್ರದಲ್ಲಿ ಗೂಂಡಾಗಿರಿ:

ಸಚಿವ ಪ್ರಿಯಾಂಕ್ ಖರ್ಗೆ ತವರಿನಲ್ಲಿ ಅವರ ಮೂಗಿನ ಕೆಳಗೆ ಗೂಂಡಾಗಿರಿ ಜೋರಾಗಿ ನಡೆಯುತ್ತಿದೆ. ರಾಜಕೀಯ ಪುಡಾರಿಗಳನ್ನು ಬಿಟ್ಟು ನಮ್ಮ ಮುಖಂಡ ಮಣಿಕಂಠ ರಾಠೋಡ್ ಮೇಲೆ ಹಲ್ಲೆ ಮಾಡಿಸಿದ್ದಾರೆ. ಸಿಎಂ ಕೂಡಲೇ ಪ್ರಿಯಾಂಕ ಖರ್ಗೆ ರಾಜೀನಾಮೆ ಪಡೆಯಬೇಕು ಎಂದು ಆಗ್ರಹಿಸಿದರು.

ಇನ್ನು ಬಿಜೆಪಿ ಪರಿಸ್ಥಿತಿ ಕಾದು ನೋಡಿ ಎಂಬ ಸಿಎಂ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಲೋಕಸಭಾ ಚುನಾವಣೆವರೆಗೆ ಕಾದು ನೋಡಿ ಕಾಂಗ್ರೆಸ್ ಪರಿಸ್ಥಿತಿ ಏನಾಗುತ್ತದೆ ಎಂಬುದು ಗೊತ್ತಾಗುತ್ತೆ ಎಂದು ತಿರುಗೇಟು ನೀಡಿದರು.

ಕೇಂದ್ರದ ಬಗ್ಗೆ ಬಿಜೆಪಿಯ ಯಾವ ಸಂಸದರೂ ಮಾತಾಡಲ್ಲ: ಸಚಿವ ಸಂತೋಷ ಲಾಡ್ ಕಿಡಿ!

ಲೋಕಸಭೆ ಚುನಾವಣೆ ಫಲಿತಾಂಶ ಬಳಿಕ ಕಾಂಗ್ರೆಸ್ ನಲ್ಲಿ ಕಾಂಗ್ರೆಸ್ ಅಸಮಾಧಾನ ಭುಗಿಲೇಳುತ್ತದೆ ಆಗ ಅವರ ಪಕ್ಷದ ಒಳಜಗಳ ಬೀದಿಗೆ ಬರುತ್ತದೆ. ದೂರವೇನಿಲ್ಲ ಆ ಕಾಲ ಬಹಳ ಹತ್ತಿರ ಇದೆ ಎಂದರು ಮುಂದುವರಿದು, ನಮ್ಮಲ್ಲೂ ಒಂದಷ್ಟು ಅಸಮಾಧಾನ ಇರುವುದು ನಿಜ. ಆದರೆ ಎಲ್ಲರನ್ನೂ ಒಗ್ಗೂಡಿಸಿಕೊಂಡು ಹೋಗುವ ಕೆಲಸವನ್ನು ರಾಜ್ಯಾಧ್ಯಕ್ಷನಾಗಿ ನಾನು ಮಾಡುತ್ತೇನೆ. ರಿಯ ನಾಯಕರನ್ನ ಭೇಟಿ ಮಾಡುವುದು ನನ್ನ ಜವಾಬ್ದಾರಿ. ಘ್ರದಲ್ಲೇ ಹೋಗಿ ಅವರನ್ನ ಭೇಟಿ ಮಾಡಿ ಮಾತುಕತೆ ನಡೆಸುತ್ತೇನೆ ಎಂದರು.

Latest Videos
Follow Us:
Download App:
  • android
  • ios