Asianet Suvarna News Asianet Suvarna News

ನನಗೀಗ ರಾಜಕೀಯದ 20-20 ಮ್ಯಾಚ್ ಆಡುವ ಜವಾಬ್ದಾರಿ ಪಕ್ಷ ವಹಿಸಿದೆ: ಬಿವೈ ವಿಜಯೇಂದ್ರ

ನನಗೀಗ ಸದ್ಯ ರಾಜಕೀಯದ 20 20 ಮ್ಯಾಚ್ ಆಡುವ ಜವಾಬ್ದಾರಿಯನ್ನ ಪಕ್ಷ ವಹಿಸಿದೆ. ಆ ದೃಷ್ಟಿಯಲ್ಲಿ ರಾಜ್ಯಾದ್ಯಂತ ಪ್ರವಾಸ ಮಾಡಿ ಪಕ್ಷವನ್ನು ಸಂಘಟಿಸುತ್ತಿದ್ದೇನೆ ಎಂದು ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ತಿಳಿಸಿದರು.

BJP State president BY Vijayendra reaction about basanagowda patil yatnal at mysuru rav
Author
First Published Nov 19, 2023, 3:34 PM IST

ಮೈಸೂರು (ನ.19): ನನಗೀಗ ಸದ್ಯ ರಾಜಕೀಯದ 20 20 ಮ್ಯಾಚ್ ಆಡುವ ಜವಾಬ್ದಾರಿಯನ್ನ ಪಕ್ಷ ವಹಿಸಿದೆ. ಆ ದೃಷ್ಟಿಯಲ್ಲಿ ರಾಜ್ಯಾದ್ಯಂತ ಪ್ರವಾಸ ಮಾಡಿ ಪಕ್ಷವನ್ನು ಸಂಘಟಿಸುತ್ತಿದ್ದೇನೆ ಎಂದು ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ತಿಳಿಸಿದರು.

ಇಂದು ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಯೊಂದಿಗೆ ಮಾತನಾಡಿದ ಅವರು, ಇಂದು ನಾನು ರಾಜಕೀಯ ಮಾತನಾಡಲ್ಲ ನಾಳೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತೇನೆ. ಭಾರತ ತಂಡ ಇಂದು ಗೆದ್ದೇ ಗೆಲ್ಲುತ್ತೆ.ವಿರಾಟ್ ಕೊಹ್ಲಿ ನನ್ನ ಫೇವರೆಟ್ ಪ್ಲೇಯರ್. ಭಾರತ ತಂಡ ಆಲ್ ರೌಂಡ್ ಪ್ರದರ್ಶನ ತೋರಿಸುತ್ತಿದೆ. ನಮ್ಮ ಟೀಂ ಬಹಳ ಚೆನ್ನಾಗಿದೆ. ನಾವು ಇಂದು ಕಪ್ ಗೆಲ್ಲುತ್ತೇವೆ ಎಂದು ಟೀಂ ಇಂಡಿಯಾಗೆ ಆಲ್‌ ದಿ ಬೆಸ್ಟ್ ಹೇಳಿದರು.

ವಿಜಯೇಂದ್ರರಿಗೆ ರಾಜ್ಯಾಧ್ಯಕ್ಷ ಪಟ್ಟ ಹಾಸ್ಯಾಸ್ಪದ: ಶಾಸಕ ನಾರಾಯಣಸ್ವಾಮಿ

ಮೈಸೂರಿಗೆ ತೆರಳುವ ವೇಳೆ ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿರುವ ಏಟ್ರಿಯಾ ಹೋಟೆಲ್ ಗೆ ಭೇಟಿ ನೀಡಿದರು. ಹೋಟೆಲ್‌ಗೆ ಭೇಟಿ ನೀಡುತ್ತಿದ್ದಂತೆ ಕ್ರೇನ್ ಮೂಲಕ ಹೂವಿನ ಮಳೆಗೆರೆದು ಕಾರ್ಯಕರ್ತರು. ಬೃಹತ್ ಸೇಬಿನ ಹಾರ ಹಾಕಿ, ಬೆಳ್ಳಿ ಗದೆ ನೀಡಿ ಅದ್ಧೂರಿ‌ ಸ್ವಾಗತಿಸಿದರು. ಬಳಿಕ ತೆರೆದ ವಾಹನದಲ್ಲಿ ಮೆರವಣಿಗೆ ಹೊರಟ ಬಿ.ವೈ.ವಿಜಯೇಂದ್ರ‌. ಸಂಸದ ಪ್ರತಾಪ್ ಸಿಂಹ ಸೇರಿ‌ ಗಣ್ಯರಿಂದ ಸ್ವಾಗತ. ಮಾಜಿ ಶಾಸಕರು, ಸಂಸದರು ವಿಜಯೇಂದ್ರಗೆ ಸಾಥ್ ನೀಡಿದರು.

ಯತ್ನಾಳರ ಹೇಳಿಕೆ ತಪ್ಪಾಗಿ ಅರ್ಥೈಸಲಾಗಿದೆ:

ರಾಜ್ಯಾಧ್ಯಕ್ಷ, ವಿಪಕ್ಷ ನಾಯಕ ಆಯ್ಕೆ ಬೆನ್ನಲ್ಲೇ ಯತ್ನಾಳ್ ಅಸಮಾಧಾನಗೊಂಡಿದ್ದಾರೆಂಬ ವಿಚಾರ ಸಂಬಂಧ ಪ್ರತಿಕ್ರಿಯಿಸಿದ ಬಿವೈ ವಿಜಯೇಂದ್ರ, ಯತ್ನಾಳ್ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ. ಅವರ ಅಭಿಪ್ರಾಯವನ್ನ ಹೇಳಲು ಸ್ವತಂತ್ರರಿದ್ದಾರೆ. ಬಿಜೆಪಿ ರಾಷ್ಟ್ರೀಯ ಪಕ್ಷವಾಗಿದ್ದು, ಅವರವರ ಅಭಿಪ್ರಾಯಗಳು ಇರುತ್ತೆ. ಎಲ್ಲರ ಅಭಿಪ್ರಾಯದ ಮೇರೆಗೆ ಕೇಂದ್ರದ ವರಿಷ್ಠರು ತೀರ್ಮಾನ ಮಾಡಿದ್ದಾರೆ. ಯತ್ನಾಳ್ ಜೀ ಕೆಲವು ವೇಳೆ ನೋವಿನಿಂದ ಮಾತನಾಡಿರಬಹುದು. ಕೆಲವು ಸಮಸ್ಯೆಗಳನ್ನು ಹೇಳಿಕೊಂಡಿರಬಹುದು. ಎಲ್ಲವನ್ನು ಹಿರಿಯರು ಕುಳಿತು ಸಮಾಲೋಚನೆ ಮಾಡಿ ಉತ್ತರ ಕಂಡುಕೊಳ್ಳುತ್ತೇವೆ ಎಂದರು.

ನಾನು, ವಿಜಯೇಂದ್ರ ಜೋಡೆತ್ತುಗಳು, ಬಿಜೆಪಿ ಅಧಿಕಾರಕ್ಕೆ ತರಲು ಹೋರಾಟ: ಆರ್‌.ಅಶೋಕ್‌

ಇನ್ನು ವಿಪಕ್ಷ ನಾಯಕ ಸ್ಥಾನಕ್ಕೆ ಆರ್‌ ಅಶೋಕ ಅಸಮರ್ಥ ಎಂಬ ಆರೋಪ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಯಾರ ಸಾಮರ್ಥ್ಯ ಏನೆಂಬುದು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಜನರು ತೀರ್ಮಾನ ಮಾಡ್ತಾರೆ. ಅದನ್ನ ಆಡಳಿತ ಪಕ್ಷದವರು, ಬೇರೆ ಯಾರೂ ತೀರ್ಮಾನ ಮಾಡಲ್ಲ. 

 

 

Follow Us:
Download App:
  • android
  • ios